ಉಡುಪಿ | ಕಾಂಗ್ರೆಸ್ ನಾಯಕನ ಗುಂಡಿಕ್ಕಿ ಕೊಲೆ; ಮೂವರು ಸುಪಾರಿ ಶೂಟರ್‌ಗಳ ಬಂಧನ

Date:

ಕಾಂಗ್ರೆಸ್ ನಾಯಕ, ಉದ್ಯಮಿ ಡೇವಿಡ್ ಡಿಸೋಜ (55) ಅವರನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಹತ್ಯೆಗೈದಿದ್ದ ಪ್ರಕರಣದಲ್ಲಿ ಮೂವರು ಸುಪಾರಿ ಶೂಟರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶದ ರಾಜು (42), ಉತ್ತರಾಖಂಡದ ಅಜಯ್ ರಸ್ತೋಗಿ ಅಲಿಯಾಸ್ ಅನ್ಮೋಲ್ (23) ಹಾಗೂ ಬಿಹಾರದ ಜಿಯಾಹುಲ್ ವಝೂಲ್ ಶೇಖ್ ಅಲಿಯಾಸ್ ದೀಪಕ್ (38) ಎಂದು ಹೆಸರಿಸಲಾಗಿದೆ.

- Advertisement -

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಘಟನೆ ನಡೆದಿತ್ತು. ಮುದರಂಗಡಿಯ ಸೇಂಟ್ ಜೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿದ್ದ ತಮ್ಮ ಕಚೇರಿಗೆ ತೆರಳಿದ್ದ ಡೇವಿಡ್ ಅವರು ಮರಳಿ ಹೋಗಲು ತಮ್ಮ ಕಾರಿನ ಬಳಿಗೆ ಬರುತ್ತಿದ್ದಾಗ, ಅವರ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ದಾಳಿ ನಡೆಸಿದ್ದಾರೆ. ಆರೋಪಿಗಳಲ್ಲೊಬ್ಬ ಡೇವಿಡ್ ಅವರ ತಲೆಗೆ ನೇರವಾಗಿ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಇಡೀ ಭೀಕರ ದೃಶ್ಯವು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ...

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ ಪಡೆದುಕೊಂಡಿದೆ. ಮಳೆಗಾಗಿ ಎದುರು ನೋಡುತ್ತಿರುವ ರೈತರಿಗೆ ಬಿಸಿಲು ಮತ್ತಷ್ಟು ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನ...

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ತಕ್ಷಣವೇ ಡೇವಿಡ್ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಘಟನೆಗೆ ಸಂಬಂಧಿಸಿದಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಕೊಲೆ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಮೃತ ಡೇವಿಡ್ ಡಿಸೋಜ ಅವರು ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿದ್ದು, ಸಿವಿಲ್ ಗುತ್ತಿಗೆದಾರರೂ ಆಗಿದ್ದರು. ಸ್ಥಳೀಯ ಬಾರ್ ಮತ್ತು ಸಾರಿಗೆ ಉದ್ಯಮವನ್ನೂ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಅವರ ಹತ್ಯೆಯು ನಿರ್ಮಾಣ ಯೋಜನೆಯೊಂದರ ಹಣಕಾಸು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಸುಪಾರಿ ಕೊಲೆ ಇದಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಹತ್ಯೆಗೈದ ನಂತರ ಆರೋಪಿಗಳು ಭಟ್ಕಳದತ್ತ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬೈಂದೂರಿನ ಒಟ್ಟಿನೆನೆ ಬಳಿ ಬಸ್ ತಡೆದಿದ್ದಾರೆ. ಈ ವೇಳೆ, ಬಸ್‌ನಿಂದ ಇಳಿದು ಓಡಿಹೋಗಲು ಯತ್ನಿಸಿದ ಆರೋಪಿಗಳಲ್ಲಿ ಒಬ್ಬನಾದ ರಾಜು ಎಂಬಾತ ಕಾಪು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ತೇಜಸ್ವಿ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿದಾಳಿ ನಡೆಸಿ ರಾಜುನ ಕಾಲಿಗೆ ಗುಂಡು ಹಾರಿಸಿ, ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಪೊಲೀಸ್ ಅಧಿಕಾರಿಯ ಮೇಲೆ ಗುಂಡು ಹಾರಿಸಿದ್ದಕ್ಕಾಗಿ ರಾಜು ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಉಳಿದ ಇಬ್ಬರು ಆರೋಪಿಗಳ ಪೈಕಿ ಅಜಯ್‌ನನ್ನು ಕುಮಟಾದಲ್ಲಿ ಮತ್ತು ಶೇಖ್‌ನನ್ನು ಭಟ್ಕಳದಲ್ಲಿ ಸ್ಥಳೀಯ ಪೊಲೀಸರ ನೆರವಿನಿಂದ ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಬೈಕನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಡೇವಿಡ್ ಡಿಸೋಜ ಅವರು ಪಡೆದುಕೊಂಡಿದ್ದ ನಿರ್ಮಾಣ ಯೋಜನೆಯೊಂದಕ್ಕೆ ಸಂಬಂಧಿಸಿದಂತೆ ಹೊರರಾಜ್ಯದ ಕಂಪನಿಯೊಂದರ ಜೊತೆ ಹಣಕಾಸಿನ ವಿವಾದವಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಆಸ್ತಿ/ಹಣದ ವಿವಾದದ ಹಿನ್ನೆಲೆಯಲ್ಲೇ ಅವರನ್ನು ‘ಸುಪಾರಿ’ ನೀಡಿ ಕೊಲೆ ಮಾಡಿಸಲಾಗಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ಕೊಲೆಗೆ ಸುಪಾರಿ ಕೊಟ್ಟವರು ಯಾರು ಮತ್ತು ಆರೋಪಿಗಳಿಗೆ ಆಶ್ರಯ, ಹಣಕಾಸಿನ ನೆರವು ನೀಡಿದ ಸೂತ್ರಧಾರರು ಯಾರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಇನ್ಸ್‌ಪೆಕ್ಟರ್‌ಗೆ ಜಾತಿ ನಿಂದನೆ: ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ವಿರುದ್ಧ ಜಾತಿ ನಿಂದನೆ ಮಾಡಿದ...

ಸೌಜನ್ಯ ಪ್ರಕರಣ: ಮರುತನಿಖೆ ಆದೇಶಕ್ಕೆ ‘ಕೊಂದವರು ಯಾರು?’ ಆಂದೋಲನ ಸ್ವಾಗತ, ದಕ್ಷ ಎಸ್‌ಐಟಿ ರಚನೆಗೆ ಆಗ್ರಹ

ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ ಮತ್ತು...

ಆಲಮಟ್ಟಿ 3ನೇ ಹಂತದ ಯೋಜನೆ ಜಾರಿಗೆ ಹೋರಾಟ ತೀವ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...