ಯುಕೆಪಿ 3ನೇ ಹಂತ | ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ ಸಿದ್ದರಾಮಯ್ಯ

Date:

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

- Advertisement -

ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಶನಿವಾರ ಆಯೋಜಿಸಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ ಮಾಡಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ಪ್ರಶಸ್ತಿ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು” ಎಂದರು.

ಗೆಜೆಟ್ ಅಧಿಸೂಚನೆಯಾದರೆ ಅಣೆಕಟ್ಟು ಎತ್ತರಿಸಲು ಅನುಕೂಲ

“ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ” ಎಂದು ಹೇಳಿದರು.

“ಕೃಷ್ಣಾ ಭಾಗ್ಯ ಜಲನಿಗಮದ ಕಚೇರಿ ವಿಜಯಪುರ ಮತ್ತು ಬೆಂಗಳೂರಿನಲ್ಲಿದ್ದರೂ, ರೈತರ ಬದುಕನ್ನು ಹಸನುಗೊಳಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ರೈತರ ಬವಣೆಯನ್ನು ನಿವಾರಿಸಿ, ಸಮುದ್ರಕ್ಕೆ ವ್ಯರ್ಥವಾಗಿ ಸೇರುವ ಕೃಷ್ಣೆಯ ನೀರನ್ನು ಉಳಿಸಿ, ರೈತರ ಕೃಷಿ ಚಟುವಟಿಕೆಗೆ ಬಳಸುವಂತಾಗಬೇಕೆಂಬ ಆಶಯವನ್ನು ಮುಖ್ಯಮಂತ್ರಿಗಳು ಹಾಗೂ ನಾನು ಹೊಂದಿದ್ದು, ಈ ದಿಸೆಯಲ್ಲಿ ಚಿಂತನೆ ನಡೆಸಲಾಗುತ್ತಿದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್

ವಿಜಯಪುರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು,. 2025-26 ನೇ ಬಜೆಟ್ ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚನೆಯಂತೆ, ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದರು.

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ- ಬಿಜೆಪಿಯಿಂದ ರಾಜಕೀಯ

ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ವಿರೋಧಿಸಿ, ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ವಿಷಯವನ್ನು ಕೋರ್ಟ್ ತೀರ್ಮಾನಿಸಲಿ, ಆದರೆ ಈ ಹಿಂದೆ ಸಾಹಿತಿ ನಿಸ್ಸಾರ್ ಅಹ್ಮದ್ ಅವರು ಉದ್ಘಾಟಿಸುವುದನ್ನು ಯಾರು ವಿರೋಧಿಸಿರಲಿಲ್ಲ. ಟಿಪ್ಪು ಸುಲ್ತಾನ್ , ಮಿರ್ಜಾ ಇಸ್ಮಾಯಿಲ್ ಮೆರವಣಿಗೆಗಳನ್ನು ಏಕೆ ವಿರೋಧಿಸಲಿಲ್ಲ. ಬಿಜೆಪಿಯವರು ಬಾನು ಮುಷ್ತಾಕ್ ರವರು ರಾಜಕೀಯ ದುರುದ್ದೇಶದಿಂದ ನಾಡಹಬ್ಬ ಉದ್ಘಾಟಿಸುವುದನ್ನು ವಿರೋಧಿಸುತ್ತಿದ್ದು, ಸರ್ಕಾರ ರಾಜಕೀಯವಾಗಿಯೇ ಪ್ರತ್ಯುತ್ತರ ನೀಡಲಿದೆ. ಬಾನು ಮುಷ್ತಾಕ್ ರವರು ಕನ್ನಡಾಂಬೆಯ ಬಗ್ಗೆ ಹೀಗಳೆದು ಮಾತನಾಡಿರುವ ಬಗ್ಗೆ ಯಾವ ಪುರಾವೆಯಿಲ್ಲ. ಅವರು ಕನ್ನಡದಲ್ಲಿ ಬರೆದ ಕೃತಿಯ ಅನುವಾದಕ್ಕೆ ಬುಕರ್ ಪ್ರಶಸ್ತಿ ಬಂದಿದೆ. ಆದ್ದರಿಂದ ರಾಜ್ಯ ಸರ್ಕಾರ ಸಾಹಿತಿಗಳಾದ ಬಾನು ಮುಷ್ತಾಕ್ ಹಾಗು ಅನುವಾದಿಸಿದ ದೀಪಾ ಬಸ್ತಿಯವರಿಗೆ ಸನ್ಮಾನಿಸಲಾಗಿದೆ. ಬಾನು ಮುಷ್ತಾಕ್ ರವರು ಕನ್ನಡ ಸಾಹಿತಿಯಾಗಿರುವ ಕಾರಣ ಅವರಿಂದ ದಸರಾವನ್ನು ಉದ್ಘಾಟಿಸಲಾಗುತ್ತಿದೆ” ಎಂದು ಹೇಳಿದರು.

ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಒತ್ತಾಯ

ಯುಕೆಪಿ ಹಂತ 3 ಕ್ಕೆ ಸಂಬಂಧಿಸಿದಂತೆ ಕೇಂದ್ರದ ಅಧಿಸೂಚನೆಗೆ ಸಂಬಂಧಪಟ್ಟ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಅಧಿಸೂಚನೆಯನ್ನು ಆದಷ್ಟು ಜಾಗೃತೆಯಾಗಿ ಹೊರಡಿಸಲು ಕೇಂದ್ರದ ಮೇಲೆ ಹಲವು ಬಾರಿ ಒತ್ತಡ ಹೇರಲಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು” ಎಂದರು.

ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಶಿಫಾರಸ್ಸು

ಇವಿಎಂನ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮತದಾನವನ್ನು ತಿರುಚಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, “ಇವಿಎಂ ನ ಗೊಂದಲ ಹಾಗೂ ತಕರಾರುಗಳಿಗೆ ಆಸ್ಪದ ನೀಡದಿರಲು,ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು. ಪ್ರಪಂಚದ ವಿವಿಧ ದೇಶಗಳಲ್ಲಿ ಇವಿಎಂ ವ್ಯವಸ್ಥೆಯನ್ನು ತೊರೆದು, ಪುನಃ ಮತಪತ್ರಗಳಿಗೆ ಮೊರೆ ಹೋಗಿವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಅಕ್ರಮ ಪ್ರಕರಣ; IAS ಅಧಿಕಾರಿ ಗಂಗ್ವಾರ್‌ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ

ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ...

ಚಿಕ್ಕಬಳ್ಳಾಪುರದಲ್ಲಿ ಕಂಪಿಸಿದ ಭೂಮಿ; 2.9 ತೀವ್ರತೆಯ ಲಘು ಭೂಕಂಪ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಬೆನ್ನಲ್ಲೇ, ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ...

ಬೆಂಗಳೂರಿನ ಶೇ. 63ರಷ್ಟು ಪಿಜಿಗಳು ಅನಧಿಕೃತ: ಜಿಬಿಎ ಆಡಿಟ್ ವರದಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗಳ ಪೈಕಿ...

ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಬೇಕಾಬಿಟ್ಟಿ FIR ಹಾಕುವಂತಿಲ್ಲ, ಬಂಧಿಸುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್ ಮಾರ್ಗಸೂಚಿಗಳೇನು?

ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳು, ಅಭಿಪ್ರಾಯಗಳು...