ಬಿಡದಿ ಟೌನ್‌ಶಿಪ್‌ ನೆಪದಲ್ಲಿ ಸರ್ಕಾರದ ರಿಯಲ್‌ ಎಸ್ಟೇಟ್‌ ದಂಧೆ: ಎಚ್‌ಡಿಕೆ ವಾಗ್ದಾಳಿ

Date:

ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕಸಿದುಕೊಂಡು ‘ಬಿಡದಿ ಟೌನ್‌ಶಿಪ್‌’ ನಿರ್ಮಿಸಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯು ಸಂಪೂರ್ಣ ‘ರಿಯಲ್ ಎಸ್ಟೇಟ್ ದಂಧೆ’ಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರ ಸತತ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್‌ ಯೋಜನೆಗಾಗಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿರುವುದನ್ನು ಖಂಡಿಸಿರುವ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನೇರವಾಗಿ ಗುರಿಯಾಗಿಸಿ ಹರಿಹಾಯ್ದಿರುವ ಕುಮಾರಸ್ವಾಮಿ, ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಅಜ್ಜಯ್ಯನನ್ನು ಸ್ಮರಿಸುವ ಅವರು, ಅಜ್ಜಯ್ಯನವರು ರೈತರನ್ನು ಒಕ್ಕಲೆಬ್ಬಿಸಿ ಬಿಡದಿಯಲ್ಲಿ ಟೌನ್‌ಶಿಪ್ ಮಾಡಲು ಹೇಳಿದ್ದಾರೆಯೇ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ರೈತರ ಕಣ್ಣೀರಿನ ಮೇಲೆ ನಿರ್ಮಾಣವಾಗುವ ಈ ಯೋಜನೆಯು ಕಾಂಗ್ರೆಸ್ ಸರ್ಕಾರದ ಅಂತ್ಯಕ್ಕೆ ಮುನ್ನುಡಿ ಬರೆಯಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಬಿಡದಿ ಭಾಗದಲ್ಲಿರುವುದು ಅತ್ಯಂತ ಫಲವತ್ತಾದ ಕೃಷಿಭೂಮಿಯಾಗಿದ್ದು, ಅದನ್ನು ಕಸಿದುಕೊಳ್ಳುವುದನ್ನು ವಿರೋಧಿಸಿ ರೈತರು ಕಳೆದ 470 ದಿನಗಳಿಂದಲೂ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೂ, ರೈತರ ಮೇಲೆ ಎಫ್‌ಐಆರ್ ದಾಖಲಿಸುವ ಮೂಲಕ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? 43ರ ಗಾರ್ಡನ್‌ನಿಂದ 17ರ ಮೊರಾವರೆಗೆ: ಫಿಫಾ ವಿಶ್ವಕಪ್‌ನ ಅಚ್ಚರಿಯ ಸಂಗತಿಗಳು

ಪ್ರತಿಭಟನಾನಿರತರು ಅಸಲಿ ರೈತರೇ ಅಲ್ಲ ಎಂಬ ಸರ್ಕಾರದ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿಗಳು ಒಮ್ಮೆ ಆ ಗ್ರಾಮಗಳಿಗೆ ಭೇಟಿ ನೀಡಲಿ, ಭೂಮಿ ಕಳೆದುಕೊಳ್ಳುತ್ತಿರುವವರು ಅಸಲಿ ರೈತರೋ, ಅಲ್ಲವೋ ಎಂಬುದು ಹಳ್ಳಿಯಲ್ಲೇ ತೀರ್ಮಾನವಾಗಲಿ, ನಾನೂ ಅಲ್ಲಿಗೆ ಬರುತ್ತೇನೆ ಎಂದು ಸಿಎಂಗೆ ಸವಾಲು ಹಾಕಿದ್ದಾರೆ. ಇದೇ ವೇಳೆ ತಮ್ಮ ಹಿಂದಿನ ಆಡಳಿತವನ್ನು ಸ್ಮರಿಸಿದ ಅವರು, 2006ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಡದಿ ಸೇರಿದಂತೆ ಐದು ಟೌನ್‌ಶಿಪ್‌ಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿತ್ತು. ಆದರೆ, ಆಗ ರೈತರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯಾವುದೇ ಮುಲಾಜಿಲ್ಲದೆ ಆ ಯೋಜನೆಯನ್ನು ಕೈಬಿಟ್ಟಿದ್ದೆ. ಇದೀಗ ಅದೇ ಯೋಜನೆಯನ್ನು ಮರುಜಾರಿ ಮಾಡುವ ಮೂಲಕ ಡಿ.ಕೆ. ಶಿವಕುಮಾರ್ ಅವರು ರಿಯಲ್ ಎಸ್ಟೇಟ್ ದಂಧೆಗೆ ಇಳಿದಿದ್ದಾರೆ ಎಂದು ಆರೋಪಿಸಿದರು.

ರೈತರ ಒಪ್ಪಿಗೆಯಿಲ್ಲದೆ ಯಾವುದೇ ಯೋಜನೆ ಜಾರಿಗೊಳಿಸುವಂತಿಲ್ಲ. ಆದರೂ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿ, ಅನ್ನದಾತರ ಬದುಕಿಗೆ ಕೊಳ್ಳಿಯಿಡಲು ಮುಂದಾಗಿದೆ ಎಂದು ಕಿಡಿಕಾರಿದ ಕುಮಾರಸ್ವಾಮಿ, ಸರ್ಕಾರದ ಈ ರೈತವಿರೋಧಿ ನಡೆಯ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಕೂಡ ಈ ರಿಯಲ್ ಎಸ್ಟೇಟ್ ದಂಧೆಯಲ್ಲಿ ಶಾಮೀಲಾಗಿರುವುದು ಅತ್ಯಂತ ನೋವಿನ ಸಂಗತಿ ಎಂದಿರುವ ಅವರು, ತಮಗೇನೂ ಬೇಡ, ತಮ್ಮ ಪಾಡಿಗೆ ನೆಮ್ಮದಿಯಿಂದ ಇರಲು ಬಿಡಿ ಎಂದು ರೈತರು ಅಂಗಲಾಚುತ್ತಿದ್ದರೂ, ಯಾವ ಪುರುಷಾರ್ಥಕ್ಕಾಗಿ ಈ ಯೋಜನೆ ಮಾಡಲಾಗುತ್ತಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ವಿರುದ್ಧದ ನ.1ರ ರ‍್ಯಾಲಿಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಬೆಂಬಲಿಸಲಿರುವ ಸಿಜೆಪಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ವಿರೋಧಿಸಿ 'ಇಂಡಿಯಾ' (I.N.D.I.A.)...

ದಾವಣಗೆರೆ | ಖಾಸಗಿ ಸಂಸ್ಥೆಗಳ ಉದ್ಯೋಗ ಮಾಹಿತಿ ನೀಡಿ: ಜಿಲ್ಲಾ ಉದ್ಯೋಗಾಧಿಕಾರಿ

ಉದ್ಯೋಗ ವಿನಿಮಯ ಕೇಂದ್ರಗಳ ಖಾಲಿ ಹುದ್ದೆಗಳ ಕಡ್ಡಾಯ ಅಧಿಸೂಚನೆ ಅಧಿನಿಯಮ –...

ಮುಂಡಗೋಡ | ಮದ್ಯದ ಅಮಲಿನಲ್ಲಿ ಪತ್ನಿಯ ಹೊಟ್ಟೆಗೆ ಡಬ್ಬಣದಿಂದ ಚುಚ್ಚಿದ ಪತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಮದ್ಯ ಸೇವಿಸಿ ಮನೆಗೆ ಬಂದ ಪತಿ,...