ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ. ದಿವಂಗತ ಹೆಚ್ ವೈ ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ ಅವರ ನಿಧನದಿಂದ ಖಾಲಿಯಾಗಿರುವ ಶಾಸಕ ಸ್ಥಾನಕ್ಕೆ ಅವರ ಮಗನೇ ಆದ ಉಮೇಶ್ ಮೇಟಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಾಗಲಕೋಟೆಯಲ್ಲಿ ಅವರ ಗೆಲ್ಲುವ ವಿಶ್ವಾಸವಿದೆ ಎಂದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನವರೇ ಆಗಿದ್ದ ಪೈಲ್ವಾನ್ ಸಾದಿಕ್ ಅವರ ಮನವೊಲಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ. ಸಚಿವ ಜಮೀರ್ ಅಹ್ಮದ್ ಅವರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಬಿಜೆಪಿಯವರು ಸೋಲಿನ ಭೀತಿಯಲ್ಲಿದ್ದಾರೆ

ಸೋಲಿನ ಭಯದಿಂದ ಸಿಎಂ ಅವರು ಬಾಗಲಕೋಟೆಯಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸೋಲಿನ ಭೀತಿಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪ್ರತೀತಿಯಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ ಎಂದರು.

ಇದನ್ನು ಓದಿದ್ದೀರಾ? ಮಹಿಳಾ ದಿನಾಚರಣೆ ವಿಶೇಷ: ಕಳೆದೆರಡು ದಶಕಗಳಲ್ಲಿ ಕ್ರೀಡಾಂಗಣವನ್ನಾಳಿದ 10 ಭಾರತೀಯ ಮಹಿಳೆಯರು

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ

ಸಿಎಂ ಸ್ಥಾನದ ಬಗ್ಗೆ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿಯವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಪಕ್ಷದ ಹೈಕಮಾಂಡ್‌ನ ನಿರ್ಧಾರಗಳಿಗೆ ಬದ್ಧನಾಗಿರುತ್ತೇನೆ. ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಬಿಜೆಪಿ ಅವಧಿಯಲ್ಲಿ ಬಾಗಲಕೋಟೆ ಅಭಿವೃದ್ಧಿಯಾಗಿಲ್ಲ

ಬಿಜೆಪಿಯವರು ತಮ್ಮ ಅವಧಿಯಲ್ಲಿ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಲೀ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ಪರಿಹಾರ ನೀಡಲು ಆದ್ಯತೆ ನೀಡಲಿಲ್ಲ. ಬಾಗಲಕೋಟೆಯ ಅಭಿವೃದ್ಧಿಗೆ ಹೆಚ್ ವೈ ಮೇಟಿಯವರ ಕೊಡುಗೆ ಅನನ್ಯವಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...