ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

Date:

ಮಾಜಿ ಭೂಗತ ಪಾತಕಿ​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ.

- Advertisement -

ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಗುರಿ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

2 ದಿನದ ಹಿಂದಷ್ಟೇ ರಷ್ಯಾದಿಂದ ವಾಪಸ್ ಆಗಿದ್ದ ರಿಕ್ಕಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಕ್ರಿಯವಾಗಿದ್ದರು. ನಿನ್ನೆ ರಾಮನಗರ ತಾಲೂಕಿನ ಬಿಡದಿ ಮನೆಯಿಂದ ತಡರಾತ್ರಿ ತನ್ನ ಫಾರ್ಚ್ಯೂನರ್​ ಕಾರಲ್ಲಿ ಬೆಂಗಳೂರಿಗೆ ಹೊರಟಿದ್ದರು. ಸುಮಾರು 11.30 ರ ಹೊತ್ತಿಗೆ ಮನೆಯಿಂದ ಹೊರಬರ್ತಿದ್ದಂತೆ ಗೇಟ್​​ ಬಳಿ ದುಷ್ಕರ್ಮಿ, ಎರಡು ಸುತ್ತಿನ ಫೈರಿಂಗ್​ ಮಾಡಿದ್ದಾನೆ. 70 ಎಂಎಂ ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಬ್ಬಳ್ಳಿ, ಮಂಗಳೂರು ಅತ್ಯಾಚಾರ ಪ್ರಕರಣ; ಪೊಲೀಸ್‌ ಇಲಾಖೆ ಎಚ್ಚೆತ್ತುಕೊಳ್ಳಬೇಕು

ರಿಕ್ಕಿ ರೈ ಪ್ರತಿ ಬಾರಿ ತಾವೇ ಕಾರು ಡ್ರೈವ್​ ಮಾಡುತ್ತಿದ್ದರು. ಹೀಗಾಗಿ ಡ್ರೈವರ್​​ ಸೀಟ್​ ಗುರಿ​ ಮಾಡಿ ಅಟ್ಯಾಕ್​ ಮಾಡಲಾಗಿತ್ತು. ಆದರೆ ತಡರಾತ್ರಿ ಅದ್ಯಾವ ಕಾರಣವೋ ಗೊತ್ತಿಲ್ಲ ತನ್ನ ಬದಲು ಡ್ರೈವರ್​ಗೆ ಕಾರು ಚಲಾಯಿಸಲು ಹೇಳಿದ್ದ ರಿಕ್ಕಿ ರೈ, ಹಿಂಬದಿ ಸೀಟ್​ನಲ್ಲಿ ಗನ್​ ಮ್ಯಾನ್​ ಜತೆ ಕುಳಿತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಕಾರು ಚಾಲಕ ರಾಜು ಮುಂದೆ ಬಗ್ಗಿದ್ದು, ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.​

ಖಾಸಗಿಯವರಿಗೆ ಸೇರಿದ, ರಸ್ತೆ ಪಕ್ಕದ ಕಾಂಪೌಡ್ ಬಳಿ ಬಚ್ಚಿಟ್ಟುಕೊಂಡು ದುಷ್ಕರ್ಮಿ ದಾಳಿ ಮಾಡಿದ್ದಾನೆ. ಅಂದರೆ ಕಾರು ಬೆಂಗಳೂರಿಗೆ ಹೊಗುತ್ತಿರಬೇಕಾದರೆ ಬಲಗಡೆ ಭಾಗದಲ್ಲಿ ಒಂದು ಕಾಂಪೌಂಡ್​ ಮಧ್ಯೆ ಅವಿತುಕೊಂಡು, ಅದರ ಒಂದು ರಂಧ್ರದಿಂದಲೇ ಗುಂಡಿನ ದಾಳಿ ಆಗಿದೆ.

ಬಿಡದಿ ಮನೆಯಿಂದ KA 53 MC 7128 ನಂಬರ್​​​ ಕಾರಿನಲ್ಲಿ ಮೂವರು ತೆರಳುತ್ತಿದ್ದರು. ರಿಕ್ಕಿ ರೈ ಜತೆಗೆ ಗನ್​ ಮ್ಯಾನ್ ಇದ್ದು, ಚಾಲಕ ಕಾರು ಚಲಾಯಿಸ್ತಿದ್ದ. ಹಿಂಬದಿ ಸೀಟ್​ನಲ್ಲಿ ರಿಕ್ಕಿ ರೈ ಕುಳಿತಿದ್ದರು. ಪೊಲೀಸರ ಮಾಹಿತಿ ಪ್ರಕಾರ 70mm ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ನಡೆಸಲಾಗಿದೆ. ಒಂದು ಬಾರಿ ಮಾತ್ರ ಗುಂಡು ಹಾರಿಸಿದ್ದು, ಕಾರಿನ ಡೋರ್​ ಸೀಳಿ ಬಂದ ಬುಲೆಟ್, ಡ್ರೈವರ್ ಸೀಟ್ ಕುಶನ್ ಒಳಗೆ ನುಗ್ಗಿದೆ. ನಂತರ ಕಾರಿನ ಹಿಂಬದಿ ಸೀಟ್​ನ ಎಡಭಾಗದ ಡೋರ್​ಗೆ ತಾಗಿದೆ. ಈ ವೇಳೆ ಡ್ರೈವರ್ ಬೆನ್ನಿಗೆ ಹಾಗೂ ರಿಕ್ಕಿ ರೈ ಮೂಗು ಹಾಗೂ ಕೈಗೆ ಗಾಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...