ತುಮಕೂರಿನ ಶಿರಾದಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಒತ್ತಾಯ

Date:

ಕರ್ನಾಟಕದ ಸಮಗ್ರ ಹಾಗೂ ಸಮತೋಲಿತ ಅಭಿವೃದ್ಧಿಗಾಗಿ ರಾಜ್ಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯ ಶಿರಾ ಬಳಿ ಸ್ಥಾಪಿಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಆಗ್ರಹಿಸಿದ್ದಾರೆ.

- Advertisement -

ಬೆಂಗಳೂರು ಕೇಂದ್ರಿತ ಅಭಿವೃದ್ಧಿಯ ಚಕ್ರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಮಾತನಾಡಿರುವ ಅವರು, ಬೆಂಗಳೂರಿನ ಸಮೀಪವೇ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವುದು ಉತ್ತರ ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಪಾಲಿಗೆ ಅನ್ಯಾಯ ಮಾಡಿದಂತಾಗುತ್ತದೆ. ಶಿರಾದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾದರೆ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಆರ್ಥಿಕ ಪ್ರಗತಿಗೆ ಭಾರಿ ಉತ್ತೇಜನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಶಿರಾವೇ ಏಕೆ ಸೂಕ್ತ ಎಂದು ವಿವರಿಸಿರುವ ಅವರು, “ಶಿರಾದಲ್ಲಿ NH-48, NH-69, NH-544E ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಜಾಲವಿದೆ. ಅಲ್ಲದೆ, ನೂತನ ರೈಲು ಮಾರ್ಗಗಳ ಸಂಪರ್ಕವೂ ಇಲ್ಲಿ ಬಲವಾಗಿದೆ. ಮುಂಬೈ–ಬೆಂಗಳೂರು ಕೈಗಾರಿಕಾ ಕಾರಿಡಾರ್, ರಾಷ್ಟ್ರೀಯ ಹೂಡಿಕೆ ಮತ್ತು ಉತ್ಪಾದನಾ ವಲಯ (NIMZ) ಮತ್ತು ಕೆಐಎಡಿಬಿ ಕೈಗಾರಿಕಾ ಪ್ರದೇಶಗಳು ಈ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇಲ್ಲಿ ಹೆಚ್ಚಿನ ಪ್ರಮಾಣದ ಸರ್ಕಾರಿ ಭೂಮಿ ಲಭ್ಯವಿದ್ದು, ಭದ್ರಾ ಮೇಲ್ದಂಡೆ, ಹೇಮಾವತಿ ಹಾಗೂ ಎತ್ತಿನಹೊಳೆ ಯೋಜನೆಗಳಿಂದ ನೀರಿನ ಸೌಲಭ್ಯವೂ ಇದೆ. ಜೊತೆಗೆ ಸಮೀಪದಲ್ಲಿಯೇ DRDO, IISc ಕ್ಯಾಂಪಸ್ ಮತ್ತು ಎಚ್‌ಎಎಲ್ ಹೆಲಿಕಾಪ್ಟರ್ ಘಟಕಗಳಂತಹ ಮಹತ್ವದ ಸಂಸ್ಥೆಗಳಿವೆ. ಶಿರಾದ ಈ ಸ್ಥಳವು ಡಿಜಿಸಿಎ (DGCA) ನಿಯಮದಂತೆ ಬೆಂಗಳೂರು ವಿಮಾನ ನಿಲ್ದಾಣದಿಂದ ಸುಮಾರು 150 ಕಿ.ಮೀ ದೂರದಲ್ಲಿದ್ದು, ತಾಂತ್ರಿಕವಾಗಿಯೂ ಅತ್ಯಂತ ಸೂಕ್ತವಾಗಿದೆ” ಎಂದು ತಿಳಿಸಿದ್ದಾರೆ.

Advertisements

ಇದನ್ನೂ ಓದಿ: ʼಕ್ಷೇತ್ರ ಮರುವಿಂಗಡಣೆʼ ಮಸೂದೆಗೆ ಬಿಜೆಪಿ ತಂತ್ರ; ಒಡೆದಿದ್ದ ಎನ್‌ಸಿಪಿಯನ್ನ ಜೋಡಿಸಲು ಮೋಶಾ ಕಸರತ್ತು

ಕಳೆದ ವರ್ಷ ಮಾರ್ಚ್ 20ರಂದು ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳ ಶಾಸಕರು ಈ ಕುರಿತು ತಮಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ತಾವು ಈಗಾಗಲೇ ಏಪ್ರಿಲ್ 22ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ ನಾಯ್ಡು ಅವರಿಗೆ ಪತ್ರ ಬರೆದು ಈ ಭಾಗದ ಜನಪ್ರತಿನಿಧಿಗಳ ಬೇಡಿಕೆಯನ್ನು ಅವರ ಗಮನಕ್ಕೆ ತಂದಿರುವುದಾಗಿ ಸಚಿವ ಸೋಮಣ್ಣ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ರಾಜಕೀಯ ಅಥವಾ ಬೆಂಗಳೂರು ಕೇಂದ್ರಿತ ಧೋರಣೆಯನ್ನು ಬದಿಗಿಟ್ಟು, ರಾಜ್ಯದ ಸಮಗ್ರ ಅಭಿವೃದ್ಧಿಯನ್ನೇ ಮಾನದಂಡವನ್ನಾಗಿ ಇಟ್ಟುಕೊಂಡು ತುಮಕೂರಿನ ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಚಿಂತನೆ ನಡೆಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...