ಏಕೀಕೃತ ಪಿಂಚಣಿ ಯೋಜನೆ ವಿರೋಧಿಸಿ ಧರಣಿಗೆ ಕರೆ ನೀಡಿದ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ‌

Date:

ಆಗಸ್ಟ್ 24 ರಂದು ಕೇಂದ್ರ ಸರ್ಕಾರ ಘೋಷಿಸಿರುವ ಏಕೀಕೃತ ಪಿಂಚಣಿ ಯೋಜನೆ(ಯುಪಿಎಸ್)ಯನ್ನು ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮತ್ತು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ‌ ಖಂಡಿಸಿದೆ.

- Advertisement -

ಭಾನುವಾರ (ಆ.25) ಆನ್ ಲೈನ್ ವೇದಿಕೆಯಲ್ಲಿ ನಡೆದ ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಸಭೆಯಲ್ಲಿ ಯುಪಿಎಸ್ ಯೋಜನೆ ಕುರಿತ ವಿವರ ಪರಿಶೀಲಿಸಿದ ಬಳಿಕ ಇದು ದೇಶಾದ್ಯಂತ ನೌಕರರು ಮತ್ತು ಶಿಕ್ಷಕರನ್ನು ವಂಚಿಸುವ ಸಂಶಯಾಸ್ಪದ ಪ್ರಯತ್ನವಾಗಿದೆ ಎಂಬ ನಿಲುವಿಗೆ ಒಕ್ಕೂಟ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎನ್‌ಪಿಎಸ್‌ ವಿರುದ್ಧ ಕಳೆದ ಎರಡು ದಶಕಗಳಿಂದ ಹೋರಾಟ ನಡೆಸುತ್ತಿರುವ ನೌಕರರ ಕಣ್ಣೊರೆಸುವ ಪಿತೂರಿ ಅಷ್ಟೇ. ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಬೇಕು ಎಂದು ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದೆ.

ಯುಪಿಎಸ್ ಅನ್ನು ಬೆಂಬಲಿಸುತ್ತಿರುವ ಇಂತಹ ಅವಕಾಶವಾದಿ ಸಂಘಟನೆಗಳ ಮತ್ತು ನೌಕರರ ಸಮುದಾಯವನ್ನು ವಂಚಿಸುವ ಯಾವುದೇ ನಾಯಕರೊಂದಿಗೆ ಅಖಿಲ ಭಾರತ ಒಕ್ಕೂಟವು ವೇದಿಕೆಯನ್ನು ಹಂಚಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಹಳೆಯ ನಿಶ್ಚಿತ ಪಿಂಚಣಿ ಯೋಜನೆಯ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ಮುಂದುವರೆಸಲು ರಾಜ್ಯಾದ್ಯಂತ ಎಲ್ಲಾ ನೌಕರರು ಮತ್ತು ಶಿಕ್ಷಕರಿಗೆ ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮತ್ತು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮನವಿ ಮಾಡುತ್ತದೆ ಎಂದು ತಿಳಿಸಿದೆ.

ಯಾವುದೇ ಕಾರಣಕ್ಕೂ ಎನ್.ಪಿ.ಎಸ್ ರದ್ದು ಮಾಡುವುದಿಲ್ಲ ಎಂದು ಹೇಳುತ್ತಿದ್ದ ಎನ್ಡಿಎ ಸರ್ಕಾರವು ಹಿಂದಿನ ಅವಧಿಯಲ್ಲಿ ನೌಕರರ ನಿರಂತರ ಹೋರಾಟಗಳ ಕಾರಣದಿಂದಾಗಿ ಯು.ಪಿ.ಎಸ್ ಎಂಬ ಎನ್.ಪಿ.ಎಸ್ ನ ಮಾರ್ಪಡಿತ ಯೋಜನೆಯನ್ನು ತರಲು ಹೊರಟಿದೆ. ಹಾಗಾಗಿ, ದೇಶಾದ್ಯಂತ ನೌಕರರ ಒಗ್ಗಟ್ಟಿನ ಹೋರಾಟ ಮುಂದುವರಿದರೆ, ನಾವು PFRDA/NPS ಬದಲಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆಯನ್ನು ಮರಳಿ ತರಲು ಆಗ್ರಹಿಸುತ್ತೇವೆ ಎಂದು ಒಕ್ಕೂಟ ಹೇಳಿಕೊಂಡಿದೆ.

ಸೆಪ್ಟಂಬರ್ 26 ರಂದು ದೇಶಾದ್ಯಂತ ರಾಷ್ಟ್ರೀಯ ಪ್ರತಿಭಟನಾ ದಿನವನ್ನಾಗಿ ಆಚರಿಸಲು ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ನಿರ್ಧರಿಸಿದೆ. ಹಾಗಾಗಿ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ಹಳೆಯ ನಿಶ್ಚಿತ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಊಟದ ವಿರಾಮದ ವೇಳೆ ಧರಣಿ ನಡೆಸಲು ಕರೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....