ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Date:

ತಮ್ಮ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ (Suraj Revanna) ಮತ್ತೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮನ್ನು ಆರೋಪ‌ ಮುಕ್ತಗೊಳಿಸುವಂತೆ‌ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

- Advertisement -

ಇದಕ್ಕೂ ಮುನ್ನ ಆರೋಪ ಮುಕ್ತಗೊಳಿಸುವಂತೆ ಸಲ್ಲಿಸಿದ್ದ ಡಿಶ್ಚಾರ್ಜ್ ಅರ್ಜಿಯನ್ನು 42ನೇ ಎಸಿಜೆಎಂ ಕೋರ್ಟ್ ವಜಾಗೊಳಿಸಿತ್ತು. ಇದನ್ನ ಸೂರಜ್‌ ರೇವಣ್ಣ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇದೀಗ ಇಲ್ಲಿಯೂ ಅರ್ಜಿಯನ್ನ ವಜಾಗೊಳಿಸಿದ್ದು, ಎಸಿಜೆಎಂ ಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರವೆಂಬ ಸ್ನಾನದ ಕೋಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ಬೆತ್ತಲೆಯೇ…

2024ರ ಜೂನ್‌ನಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಕೇಸ್ ದಾಖಲಾಗಿತ್ತು. ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 ( ಬೆದರಿಕೆ) ಯಡಿ ಪ್ರಕರಣ ದಾಖಲಾಗಿತ್ತು.

“ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭ ನನ್ನ ನಂಬರ್‌ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನ ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ” ಎಂದು ದೂರುದಾರ ದೂರಿನಲ್ಲಿ ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...