ಗೂಳಿಹಟ್ಟಿಗೆ ಆದ ಅಸ್ಪೃಶ್ಯತೆ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿದೆ: ಮುಖ್ಯಮಂತ್ರಿ ಚಂದ್ರು

Date:

ಜಾತಿ ಕಾರಣಕ್ಕೆ ನಾಗ್ಪುರದ ಆರ್‌ಎಸ್‌ಎಸ್‌ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದೊಳಗೆ ತನಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕೂಡ ಧ್ವನಿಗೂಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅಸ್ಪೃಶ್ಯತೆ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿದೆ” ಎಂದು ಚಂದ್ರು ತಿಳಿಸಿದ್ದಾರೆ.

“ನಾನು ಕೂಡಾ ಬಿಜೆಪಿಯಲ್ಲಿದ್ದು ಬಂದವ. ಆ ಸಂದರ್ಭ ಕೆಲವೊಂದು ಕಡೆ ನಮಗೆ ಆಹ್ವಾನವೂ ಇರುತ್ತಿರಲಿಲ್ಲ. ಕೆಲವೊಂದಿಷ್ಟು ವಿಷಯಗಳಲ್ಲಿ ನಮ್ಮನ್ನು ವಿಶ್ವಾಸಕ್ಕೇ ತೆಗೆದುಕೊಳ್ಳುತ್ತಿರಲಿಲ್ಲ. ಗೂಳಿಹಟ್ಟಿ ಶೇಖರ್ ಹೇಳಿಕೆ ನಂತರ ನನಗೆ ಅದು ಮನವರಿಕೆ ಆಗುತ್ತಿದೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯ ವಿಧಾನಸಭೆ ಚುನಾವಣೆಗೆ 4 ತಿಂಗಳ ಮುಂಚೆ ನಾಗಪುರದ ಆರ್‌ಎಸ್‌ಎಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದ ಒಳಗೆ ಜಾತಿ ಕಾರಣಕ್ಕೆ ತನಗೆ ಪ್ರವೇಶ ನಿರಾಕರಿಸಲಾಗಿತ್ತು ಎಂದು ಬಿಜೆಪಿಯ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಇತ್ತೀಚೆಗೆ ಆರೋಪಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಇಂಡಿಯಾ’ ಒಕ್ಕೂಟ ತೊರೆಯಲು ನಿರಾಕರಿಸಿದ್ದಕ್ಕೆ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಜೈಲು’

'ಇಂಡಿಯಾ' ಮೈತ್ರಿಕೂಟವನ್ನು ತೊರೆಯಲು ನಿರಾಕರಿಸಿದ್ದಕ್ಕೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ, ಜೆಎಂಎಂ ನಾಯಕ...

ರಾಜಸ್ಥಾನ | ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿ!

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ಸುದ್ದಿಗಳು ಬರುತ್ತಿರುವ ನಡುವೆಯೇ...

ದಾಂಡೇಲಿ | ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನರ‌ ಸಾವು

ಉತ್ತರ ಕನ್ನಡದ ದಾಂಡೇಲಿ ಬಳಿ ಬರಿಯಂಪೈಲಿ ಗ್ರಾಮದ ಸನಿಹ ಅಕೋಡಾ ಮಜಿರೆ...