ಎರಡು ಸದನ ಸಮಿತಿಗಳ ಅವಧಿ ವಿಸ್ತರಣೆ ಪ್ರಸ್ತಾವನೆಗೆ ಮೇಲ್ಮನೆಯಲ್ಲಿ ಒಪ್ಪಿಗೆ

Date:

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಡಿ.11ರಂದು ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಎರಡು ಸದನ ಸಮಿತಿಗಳ ಕಾಲಾವಕಾಶ ವಿಸ್ತರಣೆ ಪ್ರಸ್ತಾವನೆಗಳನ್ನು ಮಂಡಿಸಲಾಯಿತು.

ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗೆ, ಪ್ರೌಢ ಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಿಗೆ ಪದೋನ್ನತಿ ಹೊಂದಿದ ಶಿಕ್ಷಕರುಗಳು ಹಾಗೂ 10, 15, 20, 25 ಮತ್ತು 30 ವರ್ಷಗಳ ಕಾಲಬದ್ಧ ವೇತನ ಮುಂಬಡ್ತಿ ಸೌಲಭ್ಯಗಳನ್ನು ಪಡೆದಿರುವ ಶಿಕ್ಷಕರುಗಳ ನಡುವಿನ ವೇತನ ತಾರತಮ್ಯವನ್ನು ಸರಿಪಡಿಸುವ ಕುರಿತು ರಚಿಸಲಾಗಿರುವ ವಿಶೇಷ ಸದನ ಸಮಿತಿಯ ಅವಧಿಯನ್ನು ದಿನಾಂಕ:02.12.2025ರಿಂದ ಆರು ತಿಂಗಳವರೆಗೆ ವಿಸ್ತರಿಸುವ ಪ್ರಸ್ತಾವನೆಯನ್ನು ವಿಶೇಷ ಸದನ ಸಮಿತಿಯ ಅಧ್ಯಕ್ಷರಾದ ಪುಟ್ಟಣ್ಣ ಅವರು ಮೇಲ್ಮನೆಯಲ್ಲಿ ಮಂಡಿಸಿದರು.

- Advertisement -

ಪರಿಷತ್ತಿನ ಸರ್ವ ಸದಸ್ಯರು ಧ್ವನಿಮತದ ಮೂಲಕ ಪ್ರಸ್ತಾವನೆ ಅಂಗೀಕಾರಕ್ಕೆ ಒಪ್ಪಿಗೆ ಸೂಚಿಸಿದರು. ರಾಜ್ಯದಲ್ಲಿ 2020-21ನೇ ಸಾಲಿನಲ್ಲಿ ಹೊಸದಾಗಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜುಗಳಿಗೆ ಮೂಲ ಸೌಕರ್ಯಗಳಿಲ್ಲದಿದ್ದರೂ ಅನುಮತಿ ನೀಡಿ, ಇಂಡಿಯನ್ ನರ್ಸಿಂಗ್ ಕೌನ್ಸಿಲ್ ಅವರು ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ವಿಷಯವನ್ನು ಪರಿಶೀಲಿಸಿ ವರದಿಯನ್ನು ಸಲ್ಲಿಸಲು ರಚಿಸಲಾಗಿರುವ ವಿಶೇಷ ಜಂಟಿ ಸದನ ಸಮಿತಿಯ ಅವಧಿಯನ್ನು 14.07.2025ರಿಂದ ಹನ್ನೆರಡು ತಿಂಗಳವರೆಗೆ ವಿಸ್ತರಿಸುವ ಪ್ರಸ್ತಾವನೆಯನ್ನು ವಿಶೇಷ ಜಂಟಿ ಸದನ ಸಮಿತಿಯ ಅಧ್ಯಕ್ಷರಾದ ಎಸ್ ವಿ ಸಂಕನೂರ ಅವರು ಡಿ.11ರಂದು ಪರಿಷತ್ತಿನಲ್ಲಿ ಮಂಡಿಸಿದರು. ಪರಿಷತ್ತಿನ ಎಲ್ಲ ಸದಸ್ಯರು ಧ್ವನಿಮತದ ಮೂಲಕ ಪ್ರಸ್ತಾವನೆಯ ಅಂಗೀಕಾರಕ್ಕೆ ಒಪ್ಪಿಗೆ ತಿಳಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ಅವರು, ಪ್ರಸ್ತಾವನೆಯ ಅಂಗೀಕಾರವನ್ನು ಘೋಷಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ...

ಕಬ್ಬಿಗೆ ಬೆಂಬಲ ಬೆಲೆ: ಬೆಂಗಳೂರಿನಲ್ಲಿ ಕೇಂದ್ರ ತಜ್ಞರ ಸಮಿತಿಗೆ ಕಬ್ಬು ಬೆಳೆಗಾರರ ಅಹವಾಲು

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ...

2011ರ ‘ನೇಮಕಾತಿ ರಕ್ಷಣೆ ಕಾಯ್ದೆ’ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; 362 ಕೆಎಎಸ್‌ ಅಧಿಕಾರಿಗಳ ಉದ್ಯೋಗಕ್ಕೆ ಕುತ್ತು!

2011ನೇ ಸಾಲಿನ ‘ಕರ್ನಾಟಕ ಆಡಳಿತ ಸೇವೆ’ (ಕೆಎಎಸ್) ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಲು...