ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

Date:

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ ಭರವಸೆಯನ್ನು ಸರ್ಕಾರ ಶೀಘ್ರವಾಗಿ ಈಡೇರಿಸಬೇಕು. ಸರ್ಕಾರವು ಕೊಟ್ಟ ಮಾತಿನಿಂದ ಹಿಂದೆ ಸರಿಯಬಾರದು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.

- Advertisement -

ಮರಾಠಿ ಶಿಕ್ಷಕರ ಪೂರ್ಣ ಪ್ರಮಾಣದ ನೇಮಕಾತಿಗೆ ಆಗ್ರಹಿಸಿ ಒಕ್ಕೂಟವು ಪತ್ರಿಕಾ ಹೇಳಿಕೆ‌ ಪ್ರಕಟಿಸಿದೆ.‌ “ಹಿಂದೆ 15 ಸಾವಿರ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ ಉರ್ದು ಮತ್ತು ಮರಾಠಿ ಮಾಧ್ಯಮದ ಅಭ್ಯರ್ಥಿಗಳನ್ನು ಹೊರಗಿಡಲಾಗಿತ್ತು. ಬಳಿಕ ತೀವ್ರ ಪ್ರತಿಭಟನೆ ಮತ್ತು ಒತ್ತಾಯದ ಹಿನ್ನೆಲೆಯಲ್ಲಿ 800 ಉರ್ದು ಹಾಗೂ 200 ಮರಾಠಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ಮತ್ತು ಸಂಬಂಧಪಟ್ಟ ಸಚಿವರು ಬಹಿರಂಗ ಭರವಸೆ ನೀಡಿದ್ದರು. ಆದರೆ, ಪ್ರಸ್ತುತ ಸರ್ಕಾರವು ಅತ್ಯಂತ ಕಡಿಮೆ ಸಂಖ್ಯೆಯ ಹುದ್ದೆಗಳಿಗೆ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಲು ಮುಂದಾಗುತ್ತಿದೆ. ಇದು ಅಭ್ಯರ್ಥಿಗಳಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಕುರಿತು ಮಾತನಾಡಿರುವ ಒಕ್ಕೂಟದ ಸಂಚಾಲಕ ಸುಹೇಲ್ ಅಹಮದ್ ಮರೂರ್, “ಸರ್ಕಾರವು ತನ್ನ ಭರವಸೆಯಿಂದ ಹಿಂದೆ ಸರಿದು ಹುದ್ದೆಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿರುವುದು ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಮಾಡುತ್ತಿರುವ ದೊಡ್ಡ ಅನ್ಯಾಯ. ಇದು ಕೇವಲ ಉದ್ಯೋಗಾವಕಾಶದ ವಿಷಯವಲ್ಲ, ಬದಲಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶದ ಪ್ರಶ್ನೆಯಾಗಿದೆ,” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಒಕ್ಕೂಟದ ಪ್ರಮುಖ ಬೇಡಿಕೆಗಳು:

  • ಸರ್ಕಾರ ಮುಂಚೆ ಭರವಸೆ ನೀಡಿದಂತೆ 800 ಉರ್ದು ಹಾಗೂ 200 ಮರಾಠಿ ಶಿಕ್ಷಕರ ಹುದ್ದೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಲು ತಕ್ಷಣವೇ ಸ್ಪಷ್ಟ ಆದೇಶ ಹೊರಡಿಸಬೇಕು.
  • ಹುದ್ದೆಗಳ ಸಂಖ್ಯೆಯನ್ನು ಕಡಿತಗೊಳಿಸುವ ಯಾವುದೇ ಪ್ರಸ್ತಾವನೆಯನ್ನು ಸರ್ಕಾರ ಕೂಡಲೇ ಸಂಪೂರ್ಣವಾಗಿ ಕೈಬಿಡಬೇಕು.
  • ನೇಮಕಾತಿ ವಿಚಾರದಲ್ಲಿ ಅಭ್ಯರ್ಥಿಗಳಲ್ಲಿ ಉಂಟಾಗಿರುವ ಗೊಂದಲವನ್ನು ಸರ್ಕಾರ ತಕ್ಷಣವೇ ಪರಿಹರಿಸಬೇಕು.

“ಸರ್ಕಾರವು ಈ ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿ ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ನೀಡಿದ್ದ ಅಭಯವನ್ನು ಈಡೇರಿಸಬೇಕು” ಎಂದು ಸುಹೇಲ್ ಅಹಮದ್ ಮರೂರ್ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...