ಮುಸ್ಲಿಮರನ್ನು ಗುರುತಿಸಲು ಪಾಕ್‌ ಧ್ವಜದ ಗ್ರಾಫಿಕ್ಸ್ ಬಳಕೆ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

Date:

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿ ಬಗ್ಗೆ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್‌ ಕನ್ನಡ ಸುದ್ದಿ ವಾಹಿನಿಯು ಮುಸ್ಲಿಮರನ್ನು ಗುರುತಿಸಲು ಪಾಕಿಸ್ತಾನದ ಧ್ವಜವನ್ನು ಬಳಿಸಿ, ಆಕ್ರೋಶಕ್ಕೆ ಗುರಿಯಾಗಿದೆ. ಇದೀಗ, ತಮ್ಮ ತಪ್ಪಿಗೆ ವಿಷಾಧ ವ್ಯಕ್ತಪಡಿಸಿದೆ.

- Advertisement -

ಇತ್ತಿಚೆಗೆ ಬಿಡುಗಡೆಯಾದ ವರದಿಯಲ್ಲಿ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ ಹಾಗೂ ಮುಸ್ಲಿಮರ ಜನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಹೇಳಲಾಗಿದೆ. ಇದನ್ನೇ ದಾಳವಾಗಿಸಿಕೊಂಡಿರುವ ಹಲವಾರು ಮಾಧ್ಯಮಗಳು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಪೂರಿತ ಸುದ್ದಿ, ಕಾರ್ಯಕ್ರಮಗಳನ್ನು ನಡೆಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ವರದಿ ಬಗ್ಗೆ ಸುವರ್ಣ ನ್ಯೂಸ್‌ನಲ್ಲಿ ಪ್ರಸಾರವಾದಿ ಸುದ್ದಿಯಲ್ಲಿ ಹಿಂದುಗಳನ್ನು ಗುರುತಿಸಲು ಭಾರತ ರಾಷ್ಟ್ರಧ್ವಜವನ್ನೂ, ಮುಸ್ಲಿಮರನ್ನು ಗುರುತಿಸಲು ಪಾಕಿಸ್ತಾನದ ಧ್ವಜದ ಗ್ರಾಫಿಕ್ಸ್‌ಗಳನ್ನು ಬಳಸಲಾಗಿತ್ತು. ಮುಸ್ಲಿಮರನ್ನು ಪಾಕಿಸ್ತಾನಿಗಳೆಂದು ಬಿಂಬಿಸುವ ಆ ಗ್ರಾಫಿಕ್ ಬಳಕೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ, ಸುದ್ದಿ ವಾಹಿನಿಯು ವಿಷಾಧ ವ್ಯಕ್ತಪಡಿಸಿದೆ.

 

“ಇದು ಉದ್ದೇಶಪೂರ್ವಕವಾಗಿ ಆದ ತಪ್ಪಲ್ಲ. ಆಕಸ್ಮಿಕವಾಗಿ ಈ ತಪ್ಪು ಜರುಗಿದೆ. ತಪ್ಪು ಗೊತ್ತಾದಕೂಡಲೇ ಗ್ರಾಫಿಕ್ಸ್ ಬದಲಾಯಿಸಲಾಗಿದೆ. ಈ ಅಚಾತುರ್ಯಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ” ಎಂದು ಸುವರ್ಣ ನ್ಯೂಸ್ ನಲ್ಲಿ ಶನಿವಾರ ನಿರೂಪಕಿಯೊಬ್ಬರು ಹೇಳಿದ್ದಾರೆ.

 

ಸುವರ್ಣ ನ್ಯೂಸ್‌ ಎಸಗಿದ ಈ ಕೃತ್ಯದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮಹಮದ್ ಜುಬೇರ್ ಅವರು ಟ್ವೀಟರ್‌ನಲ್ಲಿ ಸುವರ್ಣ ನ್ಯೂಸ್ ಕಾರ್ಯಕ್ರಮದ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕುರಿತು ಕಾನೂನು ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...