ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಭೇಟಿ ಮಾಡಿದ ರಾಜ್ಯ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್

Date:

Advertisements

ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು ಟಿ ಖಾದರ್ ಫರೀದ್ ಅವರು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು 2025ರ ಸೆಪ್ಟೆಂಬರ್ 9 ಮತ್ತು 10ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಸಮ್ಮೇಳನದಲ್ಲಿ ಭಾರತದ ಎಲ್ಲ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಕಾಮನ್‌ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿಸುವ ಕುರಿತು ಮತ್ತು ಸಮ್ಮೇಳನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಹ ಸಮಾಲೋಚನೆ ನಡೆಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಇರಾಕ್ – ಈಗ ಇರಾನ್: ಅಮೆರಿಕ ಕ್ರೌರ್ಯಕ್ಕೆ ಕೊನೆ ಎಂದು?

Advertisements

ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 8, 2025 ರಂದು ವಿಧಾನಸೌಧದ ಬೃಹತ್ ಮೆಟ್ಟಲುಗಳ ಮೇಲೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಅನೇಕ ಪ್ರಗತಿಪರ ಬದಲಾವಣೆಗಳನ್ನು ಸಹ ಲೋಸಭಾ ಸ್ಪೀಕರ್ ಗಮನಕ್ಕೆ ತಂದರು.

ಕರ್ನಾಟಕ ಇತಿಹಾಸದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಆಯೋಜಿಸಲು ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಓಂ ಬಿರ್ಲಾ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಲೋಕಸಭಾ ಸಚಿವಾಲಯದ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X