ವಾಲ್ಮೀಕಿ ನಿಗಮ ಹಗರಣ | ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ

Date:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆಂಬ ಆರೋಪದ ಮೇಲೆ ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸದ್ಯ, ಈ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ.

- Advertisement -

ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್ ಬಿ ಎಂಬವರು ಸೋಮವಾರ ದೂರು ದಾಖಲಿಸಿದ್ದರು. ತಮ್ಮ ದೂರಿನಲ್ಲಿ, “ಎಂ.ಜಿ.ರೋಡ್ ಬ್ಯಾಂಕ್​ ಖಾತೆಗೆ ಅನುದಾನ ಜಮಾಮಾಡಲು ನಾಗೇಂದ್ರ, ಎಫ್​ಡಿ ಇಲಾಖೆಯಿಂದ ಸೂಚನೆ ಇತ್ತೆಂದು ಒಪ್ಪಿಕೊಳ್ಳಬೇಕು. ಮುಖ್ಯಮಂತ್ರಿ ಮತ್ತು ನಾಗೇಂದ್ರ ನಿರ್ದೇಶನದಂತೆ ಖಾತೆಗೆ ಹಣವನ್ನು ವರ್ಗಾಯಿಸಿದ್ದೇನೆಂದು ಬರೆದುಕೊಡಬೇಕೆಂದು ಇಡಿ ಅಧಿಕಾರಿಗಳು ಒತ್ತಡ ಹೇರಿದ್ದರು” ಎಂದು ಆರೋಪಿಸಿದ್ದರು. ಅವರ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳಾದ ಕಣ್ಣನ್ ಮತ್ತು ಮಿತ್ತಲ್ ಎಂಬವರ ವಿರುದ್ಧ ಎಫ್ಐಆರ್‌ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಆದರೆ, ಇಡಿ ಅಧಿಕಾರಿಗಳು ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ, ಅವರ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ.

ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಇಡಿ ಅಧಿಕಾರಿಗಳು, “ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಯಾವುದೇ ಪ್ರಾಥಮಿಕ ವಿಚಾರಣೆಯಿಲ್ಲದೆ ಕರ್ನಾಟಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹೀಗಾಗಿ, ಎಫ್‌ಐಆರ್‌ಗೆ ತಡೆ ನೀಡಬೇಕು” ಎಂದು ಮನವಿ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...