ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

Date:

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೇ, ನಾನು ಆಡಿದ ಮಾತುಗಳು ವೀರಶೈವ ಲಿಂಗಾಯತ ಮಹಾಸಭಾ ತೆಗೆದುಕೊಂಡ ನಿರ್ಧಾರ ಮತ್ತು ಅವರ ನಿಲುವನ್ನು ನಾನು ಹೇಳಿದ್ದೇನೆ. ವೀರಶೈವ ಮಹಾಸಭಾ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ.

- Advertisement -

“ವೀರಶೈವ ಹಾಗೂ ಲಿಂಗಾಯತ ಒಂದೇ ನಾಣ್ಯದ ಎರಡು ಮುಖಗಳು. ಸಾವಿರಾರು ವರ್ಷದ ಸಂಬಂಧಗಳನ್ನು ಹಾಳು ಮಾಡುವುದು ಸರಿಯಲ್ಲ. ಕೆಲವರು ಕೇವಲ ರಾಜಕೀಯ ಕಾರಣಕ್ಕಾಗಿ ಲಿಂಗಾಯತ ಪ್ರತ್ಯೇಕ ಧರ್ಮ ಬೇಕು ಅಂತ ಹೇಳುತ್ತಿದ್ದಾರೆ. ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಭಾನುವಾರ ತಮ್ಮ ‌ʼಎಕ್ಸ್ʼ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಸಾವಿರಾರು ವರ್ಷಗಳಿಂದ ವೀರಶೈವ ಮತ್ತು ಲಿಂಗಾಯತ ಶಬ್ದಗಳ ನಡುವೆ ವ್ಯತ್ಯಾಸಗಳು ಸಂಬಂಧಗಳಿಗೆ ಯಾವತ್ತು ಧಕ್ಕೆ ಬಂದಿಲ್ಲ. ನನ್ನ ಹೇಳಿಕೆಯಲ್ಲಿ ಸ್ಪಷ್ಟತೆಯಿದೆ. ವೀರಶೈವ – ಲಿಂಗಾಯತರು ಯಾವತ್ತಿದ್ದರೂ ಒಂದೇ. ಇವರನ್ನು ದೂರ ಮಾಡಲು ಸಾಧ್ಯವಿಲ್ಲ. ಅಭಿಪ್ರಾಯಕ್ಕೆ ತಾತ್ವಿಕವಾಗಿ ವಿರೋಧ ಮಾಡಬಹುದು. ಆದರೇ, ವೈಯುಕ್ತಿಕವಾಗಿ ಅಭಿಪ್ರಾಯವನ್ನೇ ಹೇಳಬಾರದು ಎನ್ನುವುದು ಸರಿಯಲ್ಲ. ಎಲ್ಲರ ಅಭಿಪ್ರಾಯವನ್ನು ಎಲ್ಲರೂ ಗೌರವಿಸಬೇಕು. ಹೇಳಿಕೆಗೆ ವಿರೋಧವಿದ್ದರೆ ತಾತ್ವಿಕವಾಗಿ ವಿರೋಧಿಸಬೇಕು ಎಂದು ತಿಳಿಸಿದ್ದಾರೆ.

ಲಿಂಗಾಯತ ಹಾಗೂ ವೀರಶೈವ ಎರಡೂ ಒಂದೇ ಎಂದು ನಂಬಿದವನು. ನನ್ನ ಅಭಿಪ್ರಾಯ ವೈಯಕ್ತಿಕ ಅಭಿಪ್ರಾಯ ಅಲ್ಲ. ವೀರಶೈವ ಲಿಂಗಾಯತ ಮಹಾಸಭಾ ಅಭಿಪ್ರಾಯವನ್ನು ನಾನು ವ್ಯಕ್ತಪಡಿಸಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | 107 ಗ್ರಾಮಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಲ್ಲ; ಮಕ್ಕಳಿಗೆ ಮರಾಠಿ ಶಿಕ್ಷಣವೇ ಗತಿ!

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ತಂಬಾಕು ನಿಯಂತ್ರಣ ಅಭಿಯಾನ: ಜಾಗೃತಿ ಪೋಸ್ಟರ್ ಬಿಡುಗಡೆ

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ...

BREAKING NEWS | ಸಂಧಾನ ಸಭೆ ವಿಫಲ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ಮುಂದುವರಿಕೆ

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ...

ಧಾರವಾಡ |ಕನ್ನಡ ಭಾಷೆಯ ವೈಭವ, ಏಕೀಕರಣದ ಹೆಮ್ಮೆ ಸಾರಿದ ‘ಹಚ್ಚೇವು ಕನ್ನಡದ ದೀಪ’ ಕಾರ್ಯಕ್ರಮ

ಕನ್ನಡ ಭಾಷೆ ಹಳೆಗನ್ನಡ, ನಡುಗನ್ನಡ, ಆಧುನಿಕ ಸಾಹಿತ್ಯ ಸೇರಿದಂತೆ ಶರಣರು, ದಾಸರು,...

2022ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಿರ್ದೇಶಕ ಲಿಜು ಕೃಷ್ಣ ಖುಲಾಸೆ

2022ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಚಿತ್ರರಂಗದ ನಿರ್ದೇಶಕ...