ಜುಲೈ 16ರಿಂದ ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಜುಲೈ 16ರಿಂದ ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯಲ್ಲಿ 16 ಮತ್ತು 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

- Advertisement -

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಜುಲೈ 15ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅದಾದ ಬಳಿಕ ಎರಡು ದಿನ ಮಳೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಗುಜರಾತ್ | ಭಾರೀ ಮಳೆ; ಚಂಡಮಾರುತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಜುಲೈ 16ರಿಂದ ರಾಜ್ಯದ ಉತ್ತರ ಒಳನಾಡಿನ ಗದಗ, ಧಾರವಾಡ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ನಿರಂತರ ಗಂಟೆಗೆ 40-50 ಕಿ.ಮೀ. ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿ, ಹಾವೇರಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಹಲವೆಡೆ ನಿರಂತರ ಗಂಟೆಗೆ 30-40 ಕಿ.ಮೀ. ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಹಲವೆಡೆ ನಿರಂತರ ಗಂಟೆಗೆ 40-50 ಕಿ.ಮೀ. ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳ ಹಲವೆಡೆ ನಿರಂತರ ಗಂಟೆಗೆ 40-50 ಕಿ.ಮೀ. ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹಾಸನ, ರಾಮನಗರ, ತುಮಕೂರು ಜಿಲ್ಲೆಗಳ ಹಲವೆಡೆ ನಿರಂತರ ಗಂಟೆಗೆ 30-40 ಕಿ.ಮೀ. ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗಾ, ವಿಜಯನಗರ ಜಿಲ್ಲೆಗಳ ಹಲವೆಡೆ ನಿರಂತರ ಗಂಟೆಗೆ 30-40 ಕಿ.ಮೀ. ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...