ಸಂತ್ರಸ್ತೆ ಅಪಹರಣ ಪ್ರಕರಣ: ಎಚ್‌ ಡಿ ರೇವಣ್ಣಗೆ ಹಿನ್ನಡೆ, ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

Date:

ಅತ್ಯಾಚಾರ ಸಂತ್ರಸ್ತೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಅವರ ವಿರುದ್ಧ ದೋಷಾರೋಪ ಹೊರಿಸದಂತೆ ಈ ಹಿಂದೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಇಂದು(ಫೆ.5) ತೆರವುಗೊಳಿಸಿದೆ.

- Advertisement -

​ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಎಚ್‌ ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಈ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳು ರೇವಣ್ಣ ಅವರಿಗೆ ಕಾನೂನು ಸಂಕಷ್ಟವನ್ನು ಹೆಚ್ಚಿಸುವ ಸೂಚನೆ ನೀಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ವಿಚಾರಣೆ ಆರಂಭವಾಗುತ್ತಿದ್ದಂತೆಯೇ, ರೇವಣ್ಣ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. “ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರಾಗಬೇಕಿರುವುದರಿಂದ ವಿಚಾರಣೆಯನ್ನು ಮುಂದೂಡಬೇಕು,” ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇಸ್ರೇಲ್ ಸಂಗದಲ್ಲಿ ‘ಶಿಕಾರಿ’- ಪ್ಯಾಲೆಸ್ತೀನ್ ಜೊತೆ ‘ಪರಾರಿ’; ಕಪಟ ನಾಟಕವಲ್ಲವೇ ಮೋದೀಜಿ?

​ಈ ಮನವಿಯಿಂದ ತೀವ್ರ ಅಸಮಾಧಾನಗೊಂಡ ಹೈಕೋರ್ಟ್‌, ರೇವಣ್ಣ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು. “ಇದು ಸಾಂವಿಧಾನಿಕ ನ್ಯಾಯಾಲಯ. ಮ್ಯಾಜಿಸ್ಟ್ರೇಟ್ ಕೋರ್ಟ್ ನೆಪವೊಡ್ಡಿ ಇಲ್ಲಿನ ವಿಚಾರಣೆ ಮುಂದೂಡಲು ಕೋರುವುದು ಸರಿಯಲ್ಲ. ಈ ನ್ಯಾಯಾಲಯದ ಅಧಿಕಾರವನ್ನು ಕುಗ್ಗಿಸಬೇಡಿ. ಇದು ಅಹಂನ ವಿಚಾರವಲ್ಲ, ಆದರೆ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ನಿಮಗೆ ತಿಳಿದಿರಬೇಕು,” ಎಂದು ನ್ಯಾಯಪೀಠ ಕಟುವಾಗಿ ನುಡಿಯಿತು.

ವಾದ ಮಂಡನೆಗೆ ಅವಕಾಶ ನೀಡಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದ ಹೈಕೋರ್ಟ್‌, ಇದೇ ವೇಳೆ ಮಹತ್ವದ ಆದೇಶವೊಂದನ್ನು ನೀಡಿತು. ರೇವಣ್ಣ ಅವರ ವಿರುದ್ಧ ಕೆಳಹಂತದ ನ್ಯಾಯಾಲಯದಲ್ಲಿ ದೋಷಾರೋಪ ಹೊರಿಸದಂತೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಇದರಿಂದಾಗಿ ತನಿಖಾ ಸಂಸ್ಥೆಗೆ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳಲು ಹಾದಿ ಸುಗಮವಾದಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...