ಬಿಡದಿ ಟೌನ್‌ಶಿಪ್‌ ರದ್ದತಿಗೆ ಆಗ್ರಹಿಸಿ ಆ.25ರಂದು ವಿಧಾನಸೌಧ ಚಲೋ: ಸಂಯುಕ್ತ ಹೋರಾಟ ಕರ್ನಾಟಕ

Date:

ಬಿಡದಿ ಟೌನ್‌ಶಿಪ್‌ ಯೋಜನೆ ರದ್ದುಗೊಳಿಸುವಂತೆ ಆಗ್ರಹಿಸಿ ಹಾಗೂ ರೈತರ ಫಲವತ್ತಾದ ಕೃಷಿ ಭೂಮಿ ರಕ್ಷಣೆಗಾಗಿ ಆಗಸ್ಟ್‌ 25ರಂದು ಬೃಹತ್‌ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ತಿಳಿಸಿದೆ.

- Advertisement -

ಬಿಡದಿ ರೈತರ ಹೋರಾಟವನ್ನು ಬೆಂಬಲಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಬೈರಮಂಗಲ-ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂ ಹಿತರಕ್ಷಣಾ ಸಂಘ ಜಂಟಿಯಾಗಿ ಈ ಹೋರಾಟ ಆಯೋಜಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬಿಡದಿ ಟೌನ್‌ಶಿಪ್‌ ಯೋಜನೆಗೆ ಯಾವುದೇ ಕಾನೂನು ತಳಹದಿ ಇಲ್ಲ. ಫಲವತ್ತಾದ, ನೀರಾವರಿ ಸಮೃದ್ಧ ಹಾಗೂ ಬಹುವಾರ್ಷಿಕ ಬೆಳೆ ಬೆಳೆಯುವ ಕೃಷಿ ಭೂಮಿಯನ್ನು ರಿಯಲ್‌ ಎಸ್ಟೇಟ್‌ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣ ಕೈಬಿಡಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.

ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಟೌನ್‌ಶಿಪ್‌ ಯೋಜನೆ ಕುರಿತು ಪರಿಶೀಲನಾ ಸಮಿತಿ ರಚಿಸುವುದಾಗಿ ಸರ್ಕಾರ ಘೋಷಿಸಿ ಹಲವು ದಿನಗಳು ಕಳೆದರೂ ಈವರೆಗೆ ಅಧಿಕೃತ ಆದೇಶ ಹೊರಡಿಸಿಲ್ಲ. ಇದು ಸರ್ಕಾರದ ಅನಗತ್ಯ ಹಾಗೂ ದುರುದ್ದೇಶಪೂರಿತ ವಿಳಂಬವಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಆರೋಪಿಸಿದೆ.

ಬಿಡದಿ ರೈತರು 550ಕ್ಕೂ ಹೆಚ್ಚು ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಸಂಘಟನೆ ಆರೋಪಿಸಿದೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್‌ ವಿ. ಗೋಪಾಲಗೌಡ ನೇತೃತ್ವದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ಬಿಡದಿ ಟೌನ್‌ಶಿಪ್‌ ಯೋಜನೆ ಹಾಗೂ ಅದಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗೆ ಕಾನೂನು ತಳಹದಿ ಇಲ್ಲ ಎಂಬುದನ್ನು ವಿವರಿಸಲಾಗಿದೆ. ಹಲವು ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ ತೀರ್ಪುಗಳ ಉಲ್ಲಂಘನೆಯಾಗುತ್ತಿದೆ ಎಂಬ ಅಂಶವೂ ಪ್ರಸ್ತಾಪವಾಗಿದ್ದರೂ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಮರ್ಥಿಸಿಕೊಳ್ಳುತ್ತಿದೆ ಎಂದು ಸಂಘಟನೆ ದೂರಿದೆ.

ಬಿಡದಿ ರೈತರ ಸಮಸ್ಯೆಯಲ್ಲಿ ಕಾಂಗ್ರೆಸ್‌ ಸರ್ಕಾರ, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಆರೋಪಿಸಿದೆ. “ಕಾಂಗ್ರೆಸ್‌ ಸರ್ಕಾರ ಒಂದೂವರೆ ವರ್ಷದಿಂದ ಹೋರಾಟ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಿಲ್ಲ. ಬಿಜೆಪಿ ಮತ್ತು ಜೆಡಿಎಸ್‌ ಕೂಡ ರೈತರ ಪರವಾಗಿ ಪರಿಣಾಮಕಾರಿ ಹೋರಾಟ ನಡೆಸದೆ ಪಕ್ಷ ರಾಜಕೀಯದ ಮೂಲಕ ರೈತರಲ್ಲಿ ಗೊಂದಲ ಮೂಡಿಸುತ್ತಿವೆ. ವಿಧಾನಸಭೆಯಲ್ಲೂ ಈ ವಿಚಾರವನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸುತ್ತಿಲ್ಲ” ಎಂದು ಸಂಘಟನೆ ಹೇಳಿದೆ.

ರಿಯಲ್‌ ಎಸ್ಟೇಟ್‌ ಉದ್ದೇಶಕ್ಕಾಗಿ ಕೃಷಿ ಭೂಮಿ ಕಬಳಿಸುವ ಪ್ರಯತ್ನವನ್ನು ಸೋಲಿಸಲು ಪಕ್ಷಾತೀತ ಜನಚಳವಳಿ ಅಗತ್ಯವಿದೆ. ಹೀಗಾಗಿ ರಾಜ್ಯಾದ್ಯಂತ ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸೌಧ ಚಲೋದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 14ರಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಟೌನ್‌ಶಿಪ್‌ ಯೋಜನೆ ಕುರಿತು ಸಮಿತಿ ರಚಿಸುವುದಾಗಿ ಘೋಷಿಸಿದ್ದರು. ಬಳಿಕ ಆಗಸ್ಟ್‌ 9ರಂದು ನ್ಯಾಯಮೂರ್ತಿ ಗುರುನಾಥನ್ ನರೇಂದರ್ ನೇತೃತ್ವದ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿ, 30 ದಿನಗಳಲ್ಲಿ ವರದಿ ಪಡೆಯುವುದಾಗಿ ತಿಳಿಸಿದ್ದರು. ಆದರೆ ಸಮಿತಿ ರಚಿಸುವುದಾಗಿ ಘೋಷಿಸಿ ಸುಮಾರು ಒಂದೂವರೆ ತಿಂಗಳು ಕಳೆದಿದ್ದರೂ ಈವರೆಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರಬಂದಿಲ್ಲ. ಸದಸ್ಯರ ಪಟ್ಟಿ ಪ್ರಕಟವಾಗಿ ಸುಮಾರು 15 ದಿನಗಳು ಕಳೆದಿವೆ. ಹೀಗಾಗಿ ಸಮಿತಿ ರಚನೆಯಲ್ಲಿನ ವಿಳಂಬ ಅನಗತ್ಯ ಹಾಗೂ ದುರುದ್ದೇಶಪೂರಿತವಾಗಿದೆ ಎಂದು ಸಂಘಟನೆ ಆರೋಪಿಸಿದೆ.

ಇದನ್ನೂ ಓದಿ: ಸರ್ಕಾರದ ಆದಾಯ ಹೆಚ್ಚಳಕ್ಕೆ ಸಲಹೆ ನೀಡಲು ಸಿಎಂ ಡಿಕೆಶಿ ಕರೆ

“ರೈತರ ಫಲವತ್ತಾದ ಕೃಷಿ ಭೂಮಿಯನ್ನು ರಿಯಲ್‌ ಎಸ್ಟೇಟ್‌ ಉದ್ದೇಶಕ್ಕಾಗಿ ಕಬಳಿಸುವ ಹುನ್ನಾರವನ್ನು ತಡೆಯಬೇಕು. ಸರ್ಕಾರ ತಕ್ಷಣ ಸಮಿತಿ ರಚನೆಗೆ ಅಧಿಕೃತ ಆದೇಶ ಹೊರಡಿಸಿ, ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ರದ್ದುಗೊಳಿಸಬೇಕು” ಎಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ.

ವಿಧಾನಸೌಧ ಚಲೋಗೆಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ಎಐಕೆಕೆಎಂಎಸ್, ದಲಿತ ಸಂಘರ್ಷ ಸಮನ್ವಯ ಸಮಿತಿ, ಸಿಐಟಿಯು, ಕರ್ನಾಟಕ ಜನಶಕ್ತಿ, ಜನಾಂದೋಲನಗಳ ಮಹಾಮೈತ್ರಿ, ಎಐಸಿಸಿಟಿಯು, ಎಐಯುಟಿಯುಸಿ, ಕರ್ನಾಟಕ ರೈತ ಸಂಘ, ಕರ್ನಾಟಕ ಕೃಷಿ ಕೂಲಿಕಾರರ ಹಾಗೂ ಗ್ರಾಮೀಣ ಕಾರ್ಮಿಕರ ಸಂಘ ಮತ್ತು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಸೇರಿದಂತೆ ವಿವಿಧ ರೈತ, ಕಾರ್ಮಿಕ, ದಲಿತ ಹಾಗೂ ಮಹಿಳಾ ಸಂಘಟನೆಗಳ ಮುಖಂಡರು ಬೆಂಬಲ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಬೀದರ್‌ | ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿ ದಾಳಿ, ಬ್ರಿಮ್ಸ್‌ಗೆ ದಾಖಲು

ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ,...