ವಿಜಯಪುರ | ಮಹಿಳಾ ವಿವಿಯಲ್ಲಿ ಬಸವ ಅಧ್ಯಯನ ಪೀಠ ಇಲ್ಲದಿರುವುದು ದುಃಖಕರ: ಡಾ. ಶಶಿಕಾಂತ ಪಟ್ಟಣ

Date:

ಬಸವ ಜನ್ಮಭೂಮಿಯಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಬಸವ ಅಧ್ಯಯನ ಪೀಠ ಇಲ್ಲದಿರುವುದು ನೋವಿನ ಸಂಗತಿ. ಅನೇಕ ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಗಮನ ಹರಿಸಿಲ್ಲ ಎಂದು ಪುಣೆಯ ಬಸವ ತಿಳುವಳಿಕೆ ಸಂಶೋಧನಾ ಕೇಂದ್ರದ ಡಾ. ಶಶಿಕಾಂತ ಪಟ್ಟಣ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ವಿಜಯಪುರ ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು “ಜೇಡರ ದಾಸಿಮಯ್ಯ ಹಾಗೂ ದೇವರ ದಾಸಿಮಯ್ಯ ಬೇರೆ. ಆದರೆ, ಇತ್ತೀಚಿಗೆ ಶರಣರ ವಿಷಯದಲ್ಲಿಯೂ ತಪ್ಪು ಕಲ್ಪನೆ ಬಿತ್ತುವ ಕೆಲಸ ನಡೆಯುತ್ತಿದೆ. ವಚನ ಸಾಹಿತ್ಯದಲ್ಲಿ ವಿನಾಕಾರಣ ಕೆಲವು ಶಬ್ದ ಸೇರಿಸಿ ಅವುಗಳ ಅರ್ಥ ತಾತ್ಪರ್ಯ ತಿದ್ದುವ ಕೆಲಸ ನಡೆಯುತ್ತಿದೆ. ಇದು ನಿಲ್ಲಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

“ಅಕ್ಕಮಹಾದೇವಿ ಬಟ್ಟೆ ತೊಡುವುದನ್ನು ಬಿಟ್ಟಿರಲೇ ಇಲ್ಲ. ಕೆಲವು ಸನಾತನಿಗಳ ಕುತಂತ್ರದಿಂದ ಅಕ್ಕಮಹಾದೇವಿ ಗೌರವಕ್ಕೆ ಚ್ಯುತಿ ಬರುವ ಕೆಲಸ ನಡೆದಿದೆ. ಹೀಗಾಗಿ ಅಕ್ಕಮಹಾದೇವಿ ಮಹಿಳಾ ವಿವಿ ಆವರಣದಲ್ಲಿರುವ ಪ್ರತಿಮೆಯನ್ನು ಕೂಡಲೇ ಸ್ಥಳಾಂತರಿಸಿ ಹೊಸ ಪ್ರತಿಮೆ ಸ್ಥಾಪಿಸಬೇಕು” ಎಂದು ಒತ್ತಾಯಿಸಿದರು.

“ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಕ್ಕಮಹಾದೇವಿಯ ಅರೆಬೆತ್ತಲೆ ಪ್ರತಿಮೆ ಸ್ಥಾಪಿಸಿರುವುದು ಸ್ತ್ರೀ ಕುಲಕ್ಕೆ ಅಗೌರವ. ಕೂಡಲೇ ಆ ಪ್ರತಿಮೆ ತೆರವುಗೊಳಿಸಿ ಗೌರವ ತರುವ ರೀತಿಯಲ್ಲಿ ಪ್ರತಿಮೆ ಸ್ಥಾಪಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

”ಬಸವ ತಿಳಿವಳಿಕೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಏಪ್ರಿಲ್‌ 25ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ಬೆಳಿಗ್ಗೆ 10ಕ್ಕೆ ಬಸವ ಜಯಂತಿ ಹಮ್ಮಿಕೊಳ್ಳಲಾಗಿದೆ” ಎಂದರು.

“ಸಮಾರಂಭದಲ್ಲಿ ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣ, ಡಾ.ಅಜಿತ್ ರಾಂಪೂರೆ, ಡಾ.ಅಶೋಕ ಆಲೂರೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು, ಕ್ರಾಂತಿ ಗಂಗೋತ್ರಿ, ವಚನ ಗಾನ ಕೋಗಿಲೆ, ಬಸವ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು” ಎಂದು ತಿಳಿಸಿದರು.

ಇದನ್ನೂ ಓದಿ >ವಿಜಯಪುರ | ಓದುವುದರ ಜತೆಗೆ ಸಂಪಾದನೆ: ಮಹಿಳಾ ವಿವಿಯ ವಿನೂತನ ಯೋಜನೆ

ಡಾ.ಸರಸ್ವತಿ ಪಾಟೀಲ, ರೇಣುಕಾ ಪಾಟೀಲ, ಆರ್ ಎಸ್ ಬಿರಾದಾರ, ರತ್ನಕ್ಕ ಬಿರಾದಾರ, ಸಿದ್ದಪ್ಪ ಪಡನಾಡ, ಗಂಗಾಧರ ಸಾಲಕ್ಕಿ, ಶರಣ ಸಬರದ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...