ವಿಜಯೇಂದ್ರನ ಮಾತು ಅಜ್ಞಾನ, ಆತ್ಮವಂಚನೆ, ದುರಹಂಕಾರದ ಪ್ರತೀಕ: ಸಿಎಂ ಸಿದ್ದರಾಮಯ್ಯ ಕಿಡಿ

Date:

ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಆತ್ಮವಂಚನೆ ಮಾತ್ರವಲ್ಲ, ದುರಹಂಕಾರವನ್ನು ಸೂಚಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

- Advertisement -

“ವಿಜಯೇಂದ್ರ ಅವರಿಗೆ ಓದುವ ಅಭ್ಯಾಸ ಇದ್ದರೆ ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಹಾಗೂ ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ” ಎಂದು ಮಾಧ್ಯಮ ಪ್ರಕಟಣೆಯಲ್ಲಿ ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

“ಬಂಡಾರುಲಕ್ಷ್ಮಣ ಎಂಬ ಅಮಾಯಕ ದಲಿತ ನಾಯಕನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಜೈಲಿಗೆ ತಳ್ಳಿದ್ದು ಮಾತ್ರವಲ್ಲ, ಅದೇ ಕೊರಗಿನಲ್ಲಿ ಅವರು ಸಾಯುವಂತೆ ಮಾಡಿದವರು ಯಾರು? ಮಾತೆತ್ತಿದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರನ್ನು ಮೆರೆಸುವ ಬಿಜೆಪಿ, ಅವರನ್ನೇ ಪ್ರಧಾನಮಂತ್ರಿ ಯಾಕೆ ಮಾಡಿಲ್ಲ? ಎ.ಪಿ.ಜೆ ಅಬ್ದುಲ್ ಕಲಾಮ್ ಅವರನ್ನು ರಾಷ್ಟ್ರಪತಿ ಮಾಡಿದ್ದೇ ಸಾಧನೆ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಪ್ರಸಕ್ತ ಲೋಕಸಭೆಯಲ್ಲಿ ಬಿಜೆಪಿಗೆ ಸೇರಿರುವ ಒಬ್ಬನೇ ಒಬ್ಬ ಮುಸ್ಲಿಂ ಸಂಸದ ಯಾಕೆ ಇಲ್ಲ?
ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಎನ್ನುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವೇ” ಎಂದು ಸವಾಲು ಹಾಕಿದ್ದಾರೆ.

“ಹಿಂದುಳಿದ ನಾಯಕರನ್ನು ಬಿಜೆಪಿ ಹೇಗೆ ನಡೆಸಿಕೊಳ್ಳುತ್ತಾ ಬಂದಿದೆ ಎನ್ನುವುದಕ್ಕೆ ರಾಜ್ಯದ ಹಿಂದುಳಿದ ಜಾತಿಗಳ ನಾಯಕ ಎಸ್ ಬಂಗಾರಪ್ಪನವರೇ ಸಾಕ್ಷಿ. ಬಂಗಾರಪ್ಪನವರನ್ನು ನಿಮ್ಮ ತಂದೆ ಬಿ ಎಸ್ ಯಡಿಯೂರಪ್ಪನವರು ಮುಗಿಸಿದರೆ, ಅವರ ಮಗ ಕುಮಾರ್ ಬಂಗಾರಪ್ಪನವರ ರಾಜಕೀಯವನ್ನು ನೀವು ಮುಗಿಸಲು ಹೊರಟಿದ್ದೀರಿ. ಇದರ ವಿವರವನ್ನು ಅವರು ನೀಡುತ್ತಲೇ ಇದ್ದಾರೆ. ಬಂಗಾರಪ್ಪನವರಿರಲಿ, ನರೇಂದ್ರ ಮೋದಿ ಅವರೇ ಇರಲಿ, ಎಲ್ಲಿಯ ವರೆಗೆ ಇವರು ವರ್ಣವ್ಯವಸ್ಥೆ ಆಧಾರಿತ ಹಿಂದುತ್ವದ ಅಜೆಂಡಾಕ್ಕೆ ತಲೆ ಬಗ್ಗಿಸುತ್ತಾ ಇರುತ್ತಾರೋ ಅಲ್ಲಿಯ ವರೆಗೆ ಮಾತ್ರ ಅವರ ತಲೆಗಳು ಸುರಕ್ಷಿತ. ಇದು ಮೋದಿಯವರಿಗೂ ತಿಳಿದಿರಲಿ” ಎಂದು ಹರಿಹಾಯ್ದಿದ್ದಾರೆ.

“ವಿಜಯೇಂದ್ರ ಅವರೇ, ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ. ನಿಮಗೆ ಅನುಕೂಲವಾಗಲೆಂದು ಆ ಹೆಸರನ್ನು ನಾನೇ ಸೂಚಿಸುತ್ತೇನೆ. ದಲಿತ ನಾಯಕ ಗೋವಿಂದ ಕಾರಜೋಳ ಅವರು ಇತ್ತೀಚೆಗೆ ನಿಮ್ಮ ಸಂಗಕ್ಕೆ ಬಿದ್ದು ಏನೇನೋ ಮಾತನಾಡುತ್ತಿದ್ದಾರೆ. ಆದರೆ ನನ್ನ ಸಹದ್ಯೋಗಿಯಾಗಿದ್ದ ಅವರು ಮೂಲತಃ ಸಜ್ಜನ ವ್ಯಕ್ತಿ. ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬಿಡಿ” ಎಂದು ಸಲಹೆ ನೀಡಿದ್ದಾರೆ.

“ಇಂತಹ ಒಳ್ಳೆಯ ಕೆಲಸವನ್ನು ನೀವು ಮಾಡುವುದೇ ಇಲ್ಲ ಎನ್ನುವುದು ನನಗೆ ಗೊತ್ತು. ಬೇರೆ ಪಕ್ಷಗಳಲ್ಲಿನ ದಲಿತ ನಾಯಕರ ಚಾರಿತ್ರ್ಯಹರಣ ಮಾಡಲಷ್ಟೇ ಬಿಜೆಪಿ ತನ್ನ ದಲಿತ ನಾಯಕರನ್ನು ಬಳಸಿಕೊಳ್ಳುತ್ತದೆಯೇ ಹೊರತು, ಅವರಿಗೆ ಯಾವುದೇ ಗೌರವದ ಮತ್ತು ಪ್ರಮುಖ ಸ್ಥಾನಮಾನ ನೀಡುವುದಿಲ್ಲ. ವಿಜಯೇಂದ್ರ ಅವರೇ, ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ? ಇದಕ್ಕೆ ಉತ್ತರ ಇದೆಯಾ ನಿಮ್ಮಲ್ಲಿ” ಎಂದು ಕೇಳಿದ್ದಾರೆ.

“ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು ಮಾತ್ರವಲ್ಲ ದೇಶ ಮೆಚ್ಚುವ ಒಬ್ಬ ಮುತ್ಸದ್ದಿ ನಾಯಕ. ಶ್ರದ್ಧೆ, ಶ್ರಮ ಮತ್ತು ಜನಪಪರ ಕಾಳಜಿ ಮೂಲಕ ಅವರು ನಾಯಕರಾಗಿ ಬೆಳೆದಿದ್ದಾರೆಯೇ ಹೊರತು, ಎಂದೂ ದಲಿತ ಕಾರ್ಡ್ ಪ್ರದರ್ಶಿಸಿ ರಾಜಕೀಯ ಮಾಡಿಲ್ಲ. ಅವರ ಬೆಳವಣಿಗೆಗೆ ಯಾರ ಶಿಫಾರಸುಗಳ ಅಗತ್ಯವೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಯಾರು ಆಗಬೇಕೆನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಅದರ ಬಗ್ಗೆ ಬಿಜೆಪಿ ತಲೆಕೆಡಿಸಿಕೊಳ‍್ಳುವ ಅಗತ್ಯ ಇಲ್ಲ” ಎಂದು ತಿರುಗೇಟು ನೀಡಿದ್ದಾರೆ.

“ವಿಜಯೇಂದ್ರ ಅವರೇ ನೀವು ಯೋಚಿಸಬೇಕಾಗಿರುವುದು ನಿಮ್ಮ ಪಕ್ಷದ ಬಗ್ಗೆ. ಎಪ್ಪತ್ತೈದು ವರ್ಷ ತುಂಬಿರುವ ನರೇಂದ್ರ ಮೋದಿ ಅವರ ಪದಚ್ಯುತಿಯ ಸೂಚನೆಯನ್ನು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿದ್ದಾರೆ. ದಲಿತ ಪ್ರಧಾನಮಂತ್ರಿಯನ್ನು ಮಾಡಲು ಬಿಜೆಪಿಗೆ ಇದೊಂದು ಸದಾವಕಾಶ. ಆ ಪ್ರಯತ್ನ ನಿಮ್ಮಿಂದಲೇ ಶುರುವಾಗಲಿ. ಬೇರೆಯವರಿಗೆ ಬೋಧನೆ ಮಾಡುವ ಬದಲಿಗೆ ಬಿಜೆಪಿಯ ಪ್ರಧಾನಮಂತ್ರಿ ಸ್ಥಾನಕ್ಕೆ ಒಬ್ಬ ದಲಿತ ನಾಯಕನನ್ನು ನೀವೇ ಮೊದಲೇ ಸೂಚಿಸಿ ನಿಮ್ಮ ದಲಿತ ಪ್ರೇಮವನ್ನು ಸಾಬೀತುಪಡಿಸಿ. ಆ ಹೆಸರುಗಳು ಗೋವಿಂದ ಕಾರಜೋಳ ಅವರೋ, ಛಲವಾದಿ ನಾರಾಯಾಣ ಸ್ವಾಮಿ ಅವರದ್ದಾಗಿದ್ದರೆ ಅವರನ್ನು ಅಭಿನಂದಿಸುವವರಲ್ಲಿ ನಾನು ಮೊದಲಿಗನಾಗುತ್ತೇನೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....