ರಿಯಾಯಿತಿ ನೆಪದಲ್ಲಿ ನಿಯಮ ಉಲ್ಲಂಘನೆ: 16 ಫಾರ್ಮಸಿಗಳ ಲೈಸೆನ್ಸ್ ರದ್ದುಗೊಳಿಸಿದ FDA

Date:

ಭಾರಿ ಪ್ರಮಾಣದ ಡಿಸ್ಕೌಂಟ್ (ರಿಯಾಯಿತಿ) ನೀಡಿ ಔಷಧ ಮಾರಾಟ ಮಾಡುತ್ತಿದ್ದ ಹಾಗೂ ನಿಯಮಗಳನ್ನು ಗಾಳಿಗೆ ತೂರಿದ್ದ ಔಷಧ ಮಳಿಗೆಗಳ ವಿರುದ್ಧ ಆಹಾರ ಮತ್ತು ಔಷಧ ಆಡಳಿತ ಇಲಾಖೆ (FDA) ಕಠಿಣ ಕ್ರಮ ಕೈಗೊಂಡಿದೆ. ಗುಣಮಟ್ಟದ ನಿಯಮಗಳನ್ನು ಉಲ್ಲಂಘಿಸಿ ನಕಲಿ ಹಾಗೂ ಸಂಶಯಾಸ್ಪದ ಔಷಧಗಳ ಪೂರೈಕೆಯಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ 16 ಫಾರ್ಮಸಿಗಳ ಲೈಸೆನ್ಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

- Advertisement -

ಇತ್ತೀಚಿನ ದಿನಗಳಲ್ಲಿ ಶೇಕಡ 20ರಿಂದ 50ರಷ್ಟು ಭಾರಿ ರಿಯಾಯಿತಿ ನೀಡಿ ಔಷಧ ಮಾರಾಟ ಮಾಡುವ ಜಾಲ ಸಕ್ರಿಯವಾಗಿತ್ತು. ಗ್ರಾಹಕರನ್ನು ಆಕರ್ಷಿಸಲು ರಿಯಾಯಿತಿ ದರದಲ್ಲಿ ಔಷಧಗಳನ್ನು ಮಾರಾಟ ಮಾಡುತ್ತಿದ್ದ ಹಲವು ಸಂಸ್ಥೆಗಳು ಸೂಕ್ತ ದಾಖಲೆ ಪತ್ರಗಳಿಲ್ಲದೆ, ಫಾರ್ಮಾಸಿಸ್ಟ್‌ಗಳ ಅನುಪಸ್ಥಿತಿಯಲ್ಲಿ ಹಾಗೂ ಕಳಪೆ ಮಟ್ಟದ ಔಷಧಗಳನ್ನು ಸರಬರಾಜು ಮಾಡುತ್ತಿರುವುದು FDA ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ಮಂಗಳೂರು | ಆಸ್ತಿ ತೆರಿಗೆ 5% ರಿಯಾಯಿತಿಗೆ ಅವಧಿ ವಿಸ್ತರಣೆ; ಜೂ. 30ರ ವರೆಗೆ ಅವಕಾಶ

ಬಿಡದಿ ಭಾಗದಲ್ಲಿ ಪತ್ತೆಯಾದ ನಕಲಿ ಔಷಧ ಪೂರೈಕೆ ಜಾಲದ ತನಿಖೆ ಕೈಗೆತ್ತಿಕೊಂಡ ಅಧಿಕಾರಿಗಳ ತಂಡವು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪ್ರಮುಖ ಫಾರ್ಮಸಿಗಳ ಮೇಲೆ ದಿಢೀರ್ ಪರಿಶೀಲನೆ ನಡೆಸಿದೆ. ಈ ವೇಳೆ ಗಂಭೀರ ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 16 ಔಷಧ ಮಳಿಗೆಗಳ ಪರವಾನಗಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ ಹಾಗೂ 8 ಫಾರ್ಮಸಿಗಳ ಪರವಾನಗಿಯನ್ನು ಅಮಾನತಿನಲ್ಲಿಡಲಾಗಿದೆ.

ಕೇವಲ ರಿಯಾಯಿತಿ ಆಸೆಗೆ ಬಿದ್ದು ಅಧಿಕೃತವಲ್ಲದ ಅಥವಾ ಅನುಮಾನಾಸ್ಪದ ಸ್ಥಳಗಳಿಂದ ಔಷಧಗಳನ್ನು ಖರೀದಿಸಬೇಡಿ ಎಂದು FDA ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಔಷಧಗಳ ಗುಣಮಟ್ಟದ ವಿಚಾರದಲ್ಲಿ ಜಿಎಸ್‌ಟಿ ಬಿಲ್ ಹಾಗೂ ಅರ್ಹ ಫಾರ್ಮಾಸಿಸ್ಟ್‌ಗಳ ಸೇವೆಯನ್ನು ಕಡ್ಡಾಯವಾಗಿ ಪರಿಶೀಲಿಸಲು ಸೂಚಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...