ಇತಿಹಾಸ ನಿರ್ಮಿಸಿದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ: ಪರೀಕ್ಷೆ ಬರೆದ 10 ನಿಮಿಷಕ್ಕೆ ರಿಸಲ್ಟ್!‌

Date:

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (VTU), ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 10 ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ವಿಶ್ವವಿದ್ಯಾಲಯದ ಈ ಅತ್ಯಂತ ವೇಗದ ಫಲಿತಾಂಶ ಪ್ರಕ್ರಿಯೆಯು ದೇಶದಲ್ಲೇ ಮೊದಲ ಪ್ರಯತ್ನ ಮತ್ತು ಅಭೂತಪೂರ್ವ ಸಾಧನೆ ಎಂದು ಬಣ್ಣಿಸಲಾಗುತ್ತಿದೆ.

- Advertisement -

VTUನ ಅಂತಿಮ ಸೆಮಿಸ್ಟರ್‌ನ ಬಿಇ (BE) ಮತ್ತು ಬಿ.ಟೆಕ್ (BTech) ಎಂಜಿನಿಯರಿಂಗ್ ಪರೀಕ್ಷೆಗಳು ಗುರುವಾರ ಸಂಜೆ ಬೆಳಗಾವಿಯಲ್ಲಿ ಮುಕ್ತಾಯಗೊಂಡವು. ಸಂಜೆ 5.30ಕ್ಕೆ ಪರೀಕ್ಷೆ ಮುಗಿದಿದ್ದು, 5.40ಕ್ಕೆ ಸರಿಯಾಗಿ ವಿವಿದ್ಯಾ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದೆ. ಈ ಪರೀಕ್ಷೆಗೆ ಒಟ್ಟು 56,192 ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಕ್ರಿಯೆ ಮುಗಿದ ತಕ್ಷಣವೇ ಶೇಕಡಾ 99.98 ರಷ್ಟು ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸುಲಭ ಮತ್ತು ವೇಗವಾಗಿ ತಲುಪುವಂತೆ ಮಾಡಲು, ಫಲಿತಾಂಶವನ್ನು ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಕಳುಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಇಷ್ಟು ವೇಗವಾಗಿ ಫಲಿತಾಂಶ ಪ್ರಕಟಿಸಲು ವಿಶ್ವವಿದ್ಯಾಲಯವು ಮೊದಲೇ ಹಲವಾರು ಡಿಜಿಟಲ್ ಕ್ರಮಗಳನ್ನು ಕೈಗೊಂಡಿತ್ತು. ವಿಟಿಯು ವ್ಯಾಪ್ತಿಗೆ ಬರುವ 220 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಮೇ 19 ರವರೆಗೆ Theory ಪರೀಕ್ಷೆಗಳು ನಡೆದಿದ್ದವು. ವಿಳಂಬವನ್ನು ತಪ್ಪಿಸಲು ವಿಟಿಯು ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯನ್ನು ಬಳಸಿಕೊಂಡಿತ್ತು. ಇದರಲ್ಲಿ ಪರೀಕ್ಷೆ ನಡೆದ ದಿನವೇ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುತ್ತಿತ್ತು. ಸಂಪೂರ್ಣ ಪ್ರಕ್ರಿಯೆಯುದ್ದಕ್ಕೂ ಅಂಕಗಳನ್ನು ಡಿಜಿಟಲ್ ರೂಪದಲ್ಲಿಯೇ ಸಂಗ್ರಹಿಸಿಡಲಾಗುತ್ತಿತ್ತು. ಇದರಿಂದಾಗಿ ಅಂಕಗಳ ಪಟ್ಟಿ ತಯಾರಿಕೆ ಮತ್ತು ಪರಿಶೀಲನೆಯಲ್ಲಿ ಆಗುತ್ತಿದ್ದ ಮಾನವ ಸಹಜ ವಿಳಂಬಗಳು ತಪ್ಪಿದವು.

ಇದನ್ನೂ ಓದಿ: IAS ಅಧಿಕಾರಿಗಳ ಮಕ್ಕಳಿಗೆ ಮೀಸಲಾತಿ ಯಾಕೆ: ಸುಪ್ರೀಂ ಪ್ರಶ್ನೆ

ಗುರುವಾರ ಪ್ರಾಯೋಗಿಕ ಪರೀಕ್ಷೆಗಳು ಮುಕ್ತಾಯಗೊಂಡ ಕೇವಲ ಐದು ನಿಮಿಷಗಳಲ್ಲಿ ಅಂತಿಮ ಅಂಕಗಳನ್ನು ಕ್ರೋಢೀಕರಿಸಲಾಯಿತು. ಅದಾದ ನಂತರದ ಮುಂದಿನ 10 ನಿಮಿಷಗಳಲ್ಲಿ ವಿಶ್ವವಿದ್ಯಾಲಯವು ಅಂತಿಮ ಫಲಿತಾಂಶವನ್ನು ಪ್ರಕ್ರಿಯೆಗೊಳಿಸಿ ಪ್ರಕಟಿಸಿತು.

ಈ ಹಿಂದೆ ಮೇ 2025ರಲ್ಲೂ ಸಹ ವಿಟಿಯು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಫಲಿತಾಂಶ ಬಿಡುಗಡೆ ಮಾಡಿತ್ತು. ಆದರೆ ಈ ಬಾರಿಯ ಸಾಧನೆಯು ವಿದ್ಯಾರ್ಥಿಗಳ ಕಾಯುವಿಕೆಯ ಸಮಯವನ್ನು ಮತ್ತಷ್ಟು ಕಡಿತಗೊಳಿಸಿದ್ದು, ಫಲಿತಾಂಶ ಪ್ರಕಟಣೆಯ ವೇಗದಲ್ಲಿ ದೇಶಕ್ಕೇ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಶಾಶ್ವತ ಪರಿಹಾರಕ್ಕೆ ಚಿಂತನೆ; ಹೋರಾಟ ಕೈಬಿಡುವಂತೆ ಸಿಎಂ ಮನವಿ

ತಮ್ಮ ಬೇಡಿಕೆಗಳಿಗಾಗಿ ನಡೆಸುತ್ತಿರುವ ಹೋರಾಟವನ್ನು ಕೈಬಿಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಡಿ.ಕೆ. ಶಿವಕುಮಾರ್...

ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಹೆಚ್ಚಿನ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನವನ್ನ...