ಮತದಾರರ ಪಟ್ಟಿ ಪರಿಷ್ಕರಣೆ ಕನ್ನಡದಲ್ಲೇ ನಡೆಯಲಿ: ಕರವೇ ಆಗ್ರಹ

Date:

ರಾಜ್ಯದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಕನ್ನಡದ ಗ್ರಾಮಗಳ ಹೆಸರುಗಳು, ಮತಗಟ್ಟೆಗಳ ಹೆಸರುಗಳು ಹಾಗೂ ಇತರ ವಿವರಗಳನ್ನು ಇಂಗ್ಲಿಷ್‌ಗೆ ತಪ್ಪಾಗಿ ಅನುವಾದಿಸುವ ಮೂಲಕ ಗಂಭೀರ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದರಿಂದಾಗಿಮತದಾರರ ಗುರುತು, ಸ್ಥಳದ ಗುರುತು ಹಾಗೂ ಸರ್ಕಾರಿ ದಾಖಲೆಗಳ ವಿಶ್ವಾಸಾರ್ಹತೆಯ ಮೇಲೆಯೇ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಕ್ರೋಶ ವ್ಯಕ್ತಪಡಿಸಿದೆ. ಕೂಡಲೇ ಈ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕನ್ನಡದಲ್ಲಿ ನಿರ್ವಹಿಸಬೇಕೆಂದು ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಒತ್ತಾಯಿಸಿದ್ದಾರೆ.

- Advertisement -

ಈಗ ಚುನಾವಣಾ ಆಯೋಗ ನಡೆಸುತ್ತಿರುವ SIR ಪ್ರಕ್ರಿಯೆಯಲ್ಲಿ ಒಂದು ಸ್ಪೆಲಿಂಗ್ ಲೋಪವಿದ್ದರೂ ನಾಗರಿಕರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಳ್ಳುತ್ತಿದ್ದಾರೆ‌. ಇಂತಹ ನೂರಾರು ಉದಾಹರಣೆಗಳೂ ಈಗಾಗಲೇ ಪಶ್ಚಿಮ ಬಂಗಾಳ, ಬಿಹಾರಗಳಲ್ಲಿ ನಡೆದಿವೆ. ಹೀಗಾಗಿ ಇಂಗ್ಲಿಷ್ ನಲ್ಲಿ ಮಾಹಿತಿ ದಾಖಲಿಸುವುದು ಸಹ ಜನರಿಗೆ ತೊಂದರೆಯನ್ನು ಉಂಟು ಮಾಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ “ಮುರ” ಎಂಬ ಗ್ರಾಮದ ಮತಗಟ್ಟೆಯ ಹೆಸರು ಮತದಾರರ ಪಟ್ಟಿಯಲ್ಲಿ ಇಂಗ್ಲಿಷ್‌ನಲ್ಲಿ “Tree” ಎಂದು ಬದಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಕನ್ನಡದ “ಮುರ” ಎಂಬ ಹೆಸರನ್ನು ಮೊದಲು “ಮರ” ಎಂದು ತಪ್ಪಾಗಿ ದಾಖಲಿಸಿ, ನಂತರ “ಮರ”ಕ್ಕೆ ಇಂಗ್ಲಿಷ್ ಪದವಾದ “Tree” ಎಂದು ಅನುವಾದಿಸಿರುವುದು ಅತ್ಯಂತ ಬೇಜವಾಬ್ದಾರಿತನದ ಕೆಲಸವಾಗಿದೆ. ಇದು ಒಂದೇ ಉದಾಹರಣೆಯಾಗಿದ್ದು, ರಾಜ್ಯದಾದ್ಯಂತ ಇಂತಹ ಅನೇಕ ದೋಷಗಳು ನಡೆದಿರುವ ಸಾಧ್ಯತೆ ಇದೆ.

ಗ್ರಾಮಗಳ ಹೆಸರುಗಳು, ವ್ಯಕ್ತಿಗಳ ಹೆಸರುಗಳು, ಕೆರೆ, ಹಳ್ಳಿ, ಕೋಟೆ, ಪಾಳ್ಯ, ಪೇಟೆ, ಬೀದಿ, ರಸ್ತೆ, ವಾರ್ಡ್ ಸೇರಿದಂತೆ ಸ್ಥಳನಾಮಗಳು ಯಾವುದೂ ಅನುವಾದಕ್ಕೆ ಒಳಪಡಬಾರದು. ಅವುಗಳಿಗೆ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಭೌಗೋಳಿಕ ಮಹತ್ವವಿದೆ. ಅಂತಹ ಹೆಸರುಗಳನ್ನು ಅರ್ಥ ಬದಲಿಸಿ ಇಂಗ್ಲಿಷ್‌ಗೆ ಅನುವಾದಿಸುವುದು ಅಧಿಕೃತ ದಾಖಲೆಗಳ ಮೂಲಸ್ವರೂಪವನ್ನೇ ವಿಕೃತಗೊಳಿಸುತ್ತದೆ.

ಕರ್ನಾಟಕದಲ್ಲಿ ಕನ್ನಡವೇ ಅಧಿಕೃತ ಆಡಳಿತ ಭಾಷೆಯಾಗಿದೆ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆ, ದತ್ತಾಂಶ ನಮೂದು, ಪರಿಶೀಲನೆ, ತಿದ್ದುಪಡಿ ಸೇರಿದಂತೆ ಸಂಪೂರ್ಣ ಪ್ರಕ್ರಿಯೆಯ ಮೂಲ ದಾಖಲೆಗಳು ಕನ್ನಡದಲ್ಲಿಯೇ ನಿರ್ವಹಣೆಯಾಗಬೇಕು. ಇಂಗ್ಲಿಷ್ ಅಗತ್ಯವಿದ್ದರೆ ಕನ್ನಡ ಪದಗಳ ಲಿಪ್ಯಂತರವನ್ನು ಮಾತ್ರ ಬಳಸಬೇಕು; ಯಾವುದೇ ಕಾರಣಕ್ಕೂ ಅರ್ಥಾನುವಾದ ಮಾಡಬಾರದು. ಕೃತಕ ಬುದ್ಧಿಮತ್ತೆ ಅಥವಾ ಸ್ವಯಂಚಾಲಿತ ಅನುವಾದ ವ್ಯವಸ್ಥೆಗಳನ್ನು ಬಳಸುವ ಸಂದರ್ಭದಲ್ಲಿ ಸಮರ್ಪಕ ಮಾನವ ಪರಿಶೀಲನೆ ಇಲ್ಲದಿದ್ದರೆ ಇಂತಹ ಗಂಭೀರ ದೋಷಗಳು ಹೆಚ್ಚಾಗುವ ಸಾಧ್ಯತೆ ಇದೆ. ಚುನಾವಣೆಯಂತಹ ಅತ್ಯಂತ ಮಹತ್ವದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಇಂತಹ ನಿರ್ಲಕ್ಷ್ಯಕ್ಕೆ ಅವಕಾಶ ಇರಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ಹಿಂದು ಪ್ರಾರ್ಥನೆಗಳನ್ನು ಕಡ್ಡಾಯಗೊಳಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್

ಕರ್ನಾಟಕ ರಕ್ಷಣಾ ವೇದಿಕೆಯ ಪ್ರಮುಖ ಬೇಡಿಕೆಗಳು:

1.ಮತದಾರರ ಪಟ್ಟಿ ಪರಿಷ್ಕರಣೆಯ ಸಂಪೂರ್ಣ ಕಾರ್ಯವನ್ನು ಕನ್ನಡದಲ್ಲಿಯೇ ನಡೆಸಬೇಕು.
2. ಗ್ರಾಮ, ಪಟ್ಟಣ, ಮತಗಟ್ಟೆ ಹಾಗೂ ವ್ಯಕ್ತಿಗಳ ಹೆಸರುಗಳನ್ನು ಯಾವುದೇ ಕಾರಣಕ್ಕೂ ಇಂಗ್ಲಿಷ್‌ಗೆ ಅನುವಾದಿಸಬಾರದು; ಅಗತ್ಯವಿದ್ದರೆ ಕನ್ನಡದಿಂದ ಇಂಗ್ಲಿಷ್‌ಗೆ ಲಿಪ್ಯಂತರ ಮಾತ್ರ ಮಾಡಬೇಕು.
3. ಈಗಾಗಲೇ ಪ್ರಕಟವಾಗಿರುವ ಮತದಾರರ ಪಟ್ಟಿಗಳಲ್ಲಿ ಇಂತಹ ಎಲ್ಲಾ ದೋಷಗಳನ್ನು ರಾಜ್ಯವ್ಯಾಪಿಯಾಗಿ ಪರಿಶೀಲಿಸಿ ತಕ್ಷಣ ತಿದ್ದುಪಡಿ ಮಾಡಬೇಕು.
4. ಮತದಾರರ ಪಟ್ಟಿಯ ದತ್ತಾಂಶ ಸಿದ್ಧಪಡಿಸುವ ಸಿಬ್ಬಂದಿಗೆ ಕನ್ನಡ ಭಾಷೆ ಮತ್ತು ಸ್ಥಳನಾಮಗಳ ಕುರಿತು ಸೂಕ್ತ ತರಬೇತಿ ನೀಡಬೇಕು.
5. ಸಾರ್ವಜನಿಕರು ತಪ್ಪುಗಳನ್ನು ಸುಲಭವಾಗಿ ವರದಿ ಮಾಡಲು ವಿಶೇಷ ಸಹಾಯವಾಣಿ ಹಾಗೂ ತ್ವರಿತ ತಿದ್ದುಪಡಿ ವ್ಯವಸ್ಥೆಯನ್ನು ಕಲ್ಪಿಸಬೇಕು.

    ಕನ್ನಡ ನುಡಿಯ ಪದಗಳನ್ನು ವಿಕೃತಗೊಳಿಸುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜನರ ಗುರುತು, ಊರಿನ ಇತಿಹಾಸವನ್ನು ಬದಲಿಸುವ ಬೇಜವಾಬ್ದಾರಿತನನ್ನು ಚುನಾವಣಾ ಆಯೋಗ ಕೂಡಲೇ ನಿಲ್ಲಿಸಬೇಕು ಮತ್ತು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ರೂಪಿಸುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಚಿಂತನೆ ನಡೆಸಲಿದೆ ಎಂದು ನಾರಾಯಣಗೌಡ ಎಚ್ಚರಿಸಿದ್ದಾರೆ.

    eedina
    ಈ ದಿನ ಡೆಸ್ಕ್‌
    Website | + posts

    <p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಭಾರತದ ಸರಕುಗಳಿಗೆ ಅಮೆರಿಕ ಮಾರುಕಟ್ಟೆಯಲ್ಲಿ ಆದ್ಯತೆ; ಸುಂಕ ಕಡಿತದ ಒಪ್ಪಂದಕ್ಕೆ ಒಪ್ಪಿಗೆ

    ಅಮೆರಿಕದ ಮಾರುಕಟ್ಟೆಯಲ್ಲಿ ಭಾರತದ ಸರಕುಗಳಿಗೆ ಆದ್ಯತೆ ನೀಡಿ, ಬೇರೆ ರಾಷ್ಟ್ರಗಳ ಸರಕುಗಳಿಗೆ...

    ಬೀದರ್‌ | ಬ್ರಿಟಿಷರ ಶೋಷಣೆ ವಿರುದ್ಧ ಹೋರಾಡಿದ ಬಿರ್ಸಾ ಮುಂಡಾ: ಸುರೇಖಾ

    ಬಿರ್ಸಾ ಮುಂಡಾ ಅವರು ಕೇವಲ ಸ್ವಾತಂತ್ರ್ಯ ಹೋರಾಟಗಾರರಾಗಿರಲಿಲ್ಲ. ಅವರು ಸಾಮಾಜಿಕ ಪರಿವರ್ತನೆಯ...

    ವಿಜಯಪುರ | ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ: ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

    ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ ಭಾನುವಾರ ಜಿಲ್ಲೆಯಲ್ಲಿ ನಡೆದ ಗೆಜೆಟೆಡ್...

    ಬೆಳಗಾವಿ | ಇ-ಸ್ವತ್ತು ದಾಖಲೆ ನಿಯಮ ಸರಳೀಕರಣ; ತ್ವರಿತ ಸ್ಪಂದನೆಗೆ ಸೂಚನೆ

    ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು ಇ-ಸ್ವತ್ತು ದಾಖಲೆ ಪಡೆಯಲು ಎದುರಿಸುತ್ತಿರುವ ತೊಡಕುಗಳನ್ನು...