ಮತದಾರರೇ ಎಚ್ಚರ, ನಿಮ್ಮ ಬೂತ್‌ನಲ್ಲಿ ಫಾರ್ಮ್-7 ಅರ್ಜಿ ಸಲ್ಲಿಕೆಯಾಗಿದೆಯೇ ಪರಿಶೀಲಿಸಿ: ಸಿಎಂ ಡಿಕೆಶಿ

Date:

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಸಲ್ಲಿಕೆಯಾಗಿರುವ ಫಾರ್ಮ್-7 ಅರ್ಜಿಗಳ ಕುರಿತು ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತದಾರರು, ಬೂತ್ ಮಟ್ಟದ ಏಜೆಂಟ್‌ಗಳು (BLA), BLA-1, BLA-2 ಹಾಗೂ ಪಕ್ಷದ ನಾಯಕರಿಗೆ ಮನವಿ ಮಾಡಿದ್ದಾರೆ.

- Advertisement -

ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಡಿಕೆಶಿ, “ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರನ ಮತವನ್ನು ರಕ್ಷಿಸುವುದು ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ತಮ್ಮ ವಿಧಾನಸಭಾ ಕ್ಷೇತ್ರ ಅಥವಾ ಬೂತ್ ವ್ಯಾಪ್ತಿಯಲ್ಲಿ ಮತದಾರರ ಹೆಸರನ್ನು ಅಳಿಸುವಂತೆ ಫಾರ್ಮ್-7 ಅರ್ಜಿಗಳು ಸಲ್ಲಿಕೆಯಾಗಿವೆಯೇ ಎಂಬುದನ್ನು ಪರಿಶೀಲಿಸುವಂತೆ ಅವರು ಮನವಿ ಮಾಡಿದ್ದಾರೆ. ಇಂತಹ ಅರ್ಜಿಗಳ ಕುರಿತು ಈಗಾಗಲೇ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ರಾಜ್ಯ ಚುನಾವಣಾಧಿಕಾರಿಗಳಿಂದ ಮಾಹಿತಿ ಕೋರಿರುವುದಾಗಿ ತಿಳಿಸಿದ್ದಾರೆ.

Advertisements

ಯಾವುದೇ ಬೂತ್ ಅಥವಾ ವಿಧಾನಸಭಾ ಕ್ಷೇತ್ರದಲ್ಲಿ ಇಂತಹ ಅರ್ಜಿಗಳು ಸಲ್ಲಿಕೆಯಾಗಿರುವ ಮಾಹಿತಿ ಇದ್ದರೆ, ಮಧ್ಯಾಹ್ನ 12 ಗಂಟೆಯೊಳಗೆ [email protected] ಇ-ಮೇಲ್‌ಗೆ ಹಂಚಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳಲು ಈ ಮಾಹಿತಿಯನ್ನು ಬಳಸಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲೇ ಫಾರ್ಮ್-7 ಮೂಲಕ ದೊಡ್ಡ ಪ್ರಮಾಣದಲ್ಲಿ ಹೆಸರುಗಳನ್ನು ಅಳಿಸಲು ಆಕ್ಷೇಪಣೆಗಳು ಸಲ್ಲಿಕೆಯಾಗಿರುವ ಕುರಿತು ಚರ್ಚೆ ನಡೆಯುತ್ತಿದೆ. ಫಾರ್ಮ್-7 ಅನ್ನು ಮತದಾರರ ಪಟ್ಟಿಯಲ್ಲಿನ ವ್ಯಕ್ತಿಯ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ ಸಲ್ಲಿಸಲು ಅಥವಾ ಹೆಸರು ಅಳಿಸುವಂತೆ ಕೋರಲು ಬಳಸಲಾಗುತ್ತದೆ. “ಪ್ರತಿಯೊಬ್ಬ ನೈಜ ಮತದಾರನ ಹೆಸರೂ ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳೋಣ” ಎಂದು ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ಫಾರ್ಮ್-7 ಎಂದರೇನು?
ಮತದಾರರ ಪಟ್ಟಿಯಲ್ಲಿರುವ ವ್ಯಕ್ತಿಯ ಹೆಸರನ್ನು ಅಳಿಸುವಂತೆ ಕೋರಿ ಸಲ್ಲಿಸುವ ಅರ್ಜಿ ಫಾರ್ಮ್-7. ಮತದಾರರ ಮರಣ, ಸ್ಥಳಾಂತರ, ಒಂದೇ ವ್ಯಕ್ತಿಯ ಹೆಸರು ಒಂದಕ್ಕಿಂತ ಹೆಚ್ಚು ಕಡೆ ಇರುವಿಕೆ ಅಥವಾ ಅರ್ಹತೆಯಿಲ್ಲದ ನೋಂದಣಿ ಸೇರಿದಂತೆ ನಿರ್ದಿಷ್ಟ ಕಾರಣಗಳ ಆಧಾರದಲ್ಲಿ ಈ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯ ಪರಿಶೀಲನೆ ಬಳಿಕವೇ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಪ್ರಕ್ರಿಯೆ ನಡೆಯುತ್ತದೆ.

ಇದನ್ನೂ ಓದಿ: SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ: ಪ್ರಜಾಪ್ರಭುತ್ವದ ಹಕ್ಕನ್ನೇ ಕಸಿಯುವ ಹುನ್ನಾರ!

BLA, BLA-1, BLA-2 ಎಂದರೇನು?
BLA ಎಂದರೆ Booth Level Agent. ರಾಜಕೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಿಯೋಜಿಸುವ ಪ್ರತಿನಿಧಿಗಳೇ BLAಗಳು. ಮತದಾರರ ಪಟ್ಟಿಗೆ ಸಂಬಂಧಿಸಿದ ಬದಲಾವಣೆಗಳನ್ನು ಪರಿಶೀಲಿಸುವಲ್ಲಿ ಇವರು ಚುನಾವಣಾ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಾರೆ.

ಒಂದು ವೇಳೆ ನಮ್ಮ ಹೆಸರನ್ನು ಅಳಿಸಲು Form-7 ಅರ್ಜಿ ಸಲ್ಲಿಕೆಯಾಗಿದೆ ಎಂದು ಗೊತ್ತಾದರೆ ಏನು ಮಾಡಬೇಕು?

  • ಮೊದಲು ನಿಮ್ಮ ಹೆಸರು ಈಗಲೂ ಮತದಾರರ ಪಟ್ಟಿಯಲ್ಲಿದೆಯೇ ಎಂದು ಪರಿಶೀಲಿಸಿ.
  • Form-7 ಅರ್ಜಿಯ ಕಾರಣ ಮತ್ತು ವಿವರಗಳನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳಿಂದ ತಿಳಿದುಕೊಳ್ಳಿ.
  • ಅರ್ಜಿ ತಪ್ಪಾಗಿದ್ದರೆ, ನಿಮ್ಮ ಹೆಸರು ಅಳಿಸಬಾರದು ಎಂದು ಆಕ್ಷೇಪಣೆ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ನೀಡಿ.
  • ನಿಮ್ಮ ವಿಳಾಸ, ಗುರುತು ಮತ್ತು ಮತದಾರರ ನೋಂದಣಿ ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಿ.
  • ಅಗತ್ಯವಿದ್ದರೆ BLO/ERO (Electoral Registration Officer) ಅವರನ್ನು ಸಂಪರ್ಕಿಸಿ.
  • ಅರ್ಜಿಯ ಬಗ್ಗೆ ಮಾಹಿತಿ ಅಥವಾ ದಾಖಲೆಗಳಿದ್ದರೆ ಅವುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ: ಸಿಎಂ ಡಿ ಕೆ ಶಿವಕುಮಾರ್

"ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮೀರಿ ಯೋಜನೆಗಳ...

ವಿಜಯಪುರ | ಜನಗಣತಿಯಲ್ಲಿ 21 ವಿಧದ ಅಂಗವೈಕಲ್ಯ ದಾಖಲಿಸಲು ಆಗ್ರಹ

2027ರ ಜನಗಣತಿಯಲ್ಲಿ ಅಂಗವಿಕಲರ ನಿಖರ ಸಂಖ್ಯೆ ಮಾತ್ರವಲ್ಲದೆ, ಅಂಗವಿಕಲರ ಹಕ್ಕುಗಳ ಕಾಯ್ದೆ-2016ರಡಿ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್ ಪ್ರವೇಶಿಸುವ ಮುನ್ನ ಯಾಕೆ ಸಹಿ ಮಾಡಬೇಕು?

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ,...

ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...