ಮತದಾನ ನಮ್ಮ ಜನ್ಮಸಿದ್ದ ಹಕ್ಕು, SIR ಒಪ್ಪುವುದಿಲ್ಲ: ಪೀಟರ್ ಮಚಾಡೋ

Date:

ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ’ ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಡಾ. ಫಾದರ್ ಪೀಟರ್ ಮಚಾದೋ ಹೇಳಿದ್ದಾರೆ.

- Advertisement -

ಶನಿವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ SIR ವಿರೋಧಿ ಜಾತ್ಯತೀತ ಪಕ್ಷಗಳು-ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ʼSIR ವಿರೋಧಿ ಬೃಹತ್ ಪ್ರತಿರೋಧ ಸಮಾವೇಶ’ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಇದು ರಾಜಕೀಯ ಸಭೆಯಲ್ಲ, ಸಾರ್ವಜನಿಕರ, ಸಂವಿಧಾನ ಪ್ರೇಮಿಗಳ, ದೇಶ ಪ್ರೇಮಿಗಳ ಸಭೆಯಾಗಿದೆ. SIR ವಿರೋಧಿಸಲು ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ನಾವಿಲ್ಲಿ ಸೇರಿದ್ದೇವೆ. ಮತದಾರರ ಪಟ್ಟಿಯ ಪರಿಷ್ಕರಣಗೆ ನಾವು ಸಹಕಾರ ಕೋಡುತ್ತೇವೆ. ಆದರೆ, ಕೆಲವರ ಹೆಸರನ್ನು ತೆಗೆಯುವ, ಕೆಲವರ ಹೆಸರು ಉಳಿಸುವ ದುರುದ್ದೇಶಪೂರಿತ ಎಸ್‌ಐಆರ್‌ ಅನ್ನು ಒಪ್ಪುವುದಿಲ್ಲ. ಕರ್ನಾಟಕದ ಒಬ್ಬರೇ ಒಬ್ಬರು ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗಿಡುವುದನ್ನು ಒಪ್ಪುವುದಿಲ್ಲ. ಲೋಕಮಾನ್ಯ ತಿಲಕ್ ಅವರು ಸ್ವಾತಂತ್ರ್ಯ ನನ್ನ ಜನ್ಮಸಿದ್ದ ಹಕ್ಕು ಎಂದಿದ್ದರು. ಅದೇ ರೀತಿ ಮತದಾನ ನಮ್ಮ ಜನ್ಮಸಿದ್ದ ಹಕ್ಕು ಎಂದು ನಾವಿವತ್ತು ಹೇಳುತ್ತಿದ್ದೇವೆ. ಅದನ್ನು ಕಿತ್ತುಕೊಳ್ಳುವುದನ್ನು ವಿರೋಧಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಚುನಾವಣಾ ಆಯೋಗಕ್ಕೆ ಪ್ರತಿರೋಧ ಸಮಾವೇಶದ ಆಗ್ರಹಗಳು:

  • ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು.
  • ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು.
  • ಚುನಾವಣಾ ಮ್ಯಾನ್ಯೂಯಲ್‌ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು.
  • ಅಪೀಲ್ ಸಲ್ಲಿಸಲು ಕನಿಷ್ಟ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು.

ಇದನ್ನೂ ಓದಿ: ಟ್ವೀಟ್ ಹೇಳಿದ ಮೈತ್ರಿ ಬಿರುಕಿನ ಕಥೆ: ಕಾಂಗ್ರೆಸ್-ಡಿಎಂಕೆ ನಡುವೆ ಹೆಚ್ಚಾಯ್ತಾ ಅಂತರ?

ರಾಜ್ಯ ಸರಕಾರಕ್ಕೆ ಪ್ರತಿರೋಧ ಸಮಾವೇಶದ ಆಗ್ರಹಗಳು:

  • ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾವಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು.
  • ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು.
  • ಎಸ್ಐಆರ್ ಕೇಳುವ ದಾಖಲೆಗಳಲ್ಲಿದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...