ವಾಲ್‌ಮಾರ್ಟ್ ವೃದ್ಧಿ ಬೆಂಬಲದಿಂದ ಕರ್ನಾಟಕದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ಬಲ

Date:

ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (ಎಸ್‌ಹೆಚ್‌ಜಿ) ಡಿಜಿಟಲ್ ಮಾರ್ಕೆಟಿಂಗ್ ಮತ್ತು ಆನ್‌ಲೈನ್ ಮಾರಾಟ ಕೌಶಲ್ಯಗಳನ್ನು ಬಲಪಡಿಸಲು ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಮತ್ತು ಬಹುರಾಷ್ಟ್ರೀಯ ಕಂಪನಿ ವಾಲ್‌ಮಾರ್ಟ್ ವೃದ್ಧಿ ನಡುವೆ ಮೂರು ವರ್ಷಗಳ ಸಹಯೋಗ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

- Advertisement -

ಈ ಸಹಯೋಗದಡಿ ವಾಲ್‌ಮಾರ್ಟ್ ವೃದ್ಧಿ—ತನ್ನ ಕಾರ್ಯಕ್ರಮ ಪಾಲುದಾರ ಐಡಿಯಾಸ್ ಟು ಇಂಪ್ಯಾಕ್ಟ್ ಫೌಂಡೇಶನ್ ಮೂಲಕ—ಎಸ್‌ಹೆಚ್‌ಜಿ ಗಳಿಗೆ ಉಚಿತ ಡಿಜಿಟಲ್ ತರಬೇತಿ, ವ್ಯಾಪಾರ ಸಾಧನಗಳು ಮತ್ತು ಮಾರ್ಗದರ್ಶನ ಒದಗಿಸಲಿದೆ. ಇದರಿಂದ ರಾಜ್ಯದ 5,000ಕ್ಕೂ ಹೆಚ್ಚು ಎಸ್‌ಹೆಚ್‌ಜಿಗಳು ತಮ್ಮ ಉತ್ಪನ್ನಗಳನ್ನು ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಬೆಳವಣಿಗೆ ಸಾಧಿಸಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದುವರೆಗೆ ಎಸ್‌ಹೆಚ್‌ಜಿಗಳ ಮಾರಾಟ ಸರ್ಕಾರ ಆಯೋಜಿಸುವ ಮೇಳಗಳಿಗೆ ಮಾತ್ರ ಸೀಮಿತವಾಗಿತ್ತು. ಈಗ ವಾಲ್‌ಮಾರ್ಟ್ ವೃದ್ಧಿ ಸಹಕಾರದಿಂದ ಡಿಜಿಟಲ್ ಸಾಕ್ಷರತೆ, ಇ-ಕಾಮರ್ಸ್ ಮತ್ತು ಮಾರ್ಕೆಟಿಂಗ್ ತರಬೇತಿ ಪಡೆದು ಫ್ಲಿಪ್‌ಕಾರ್ಟ್ ಮೂಲಕ ನೇರ ಮಾರಾಟ ಮಾಡಬಹುದು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮುಂದಾಳತ್ವದಲ್ಲಿ ಮಂಗಳವಾರ ಬೆಂಗಳೂರಿನಲ್ಲಿ ಎನ್‌ಎಲ್‌ಎಂ ನಿರ್ದೇಶಕ ಆರ್. ಸ್ನೇಹಲ್, ವಾಲ್‌ಮಾರ್ಟ್ ವೃದ್ಧಿ ಪರವಾಗಿ ಪರೂಲ್ ಸೋನಿ ಮತ್ತು ಸಂತೋಷ್ ವಾಘ್ ಒಪ್ಪಂದಕ್ಕೆ ಸಹಿ ಹಾಕಿದರು.

“ಈ ಉಪಕ್ರಮ ಎಸ್‌ಹೆಚ್‌ಜಿ ವ್ಯವಸ್ಥೆಯನ್ನು ಪರಿವರ್ತಿಸುವ ಸಾಮರ್ಥ್ಯ ಹೊಂದಿದೆ. ಸಾವಿರಾರು ಮಹಿಳೆಯರಿಗೆ ಹೊಸ ಮಾರುಕಟ್ಟೆ ಮತ್ತು ಉತ್ತಮ ಆದಾಯ ಒದಗಿಸಲಿದೆ. ಡಿಜಿಟಲ್ ಮಾರ್ಕೆಟಿಂಗ್ ಕೊರತೆ ದೂರಾಗಲಿದೆ,” ಎಂದು ಡಾ. ಶರಣಪ್ರಕಾಶ್ ಆರ್. ಪಾಟೀಲ್ ಹೇಳಿದರು.

“ಕರ್ನಾಟಕದ ಎಸ್‌ಹೆಚ್‌ಜಿ ಉತ್ಪನ್ನಗಳಿಗೆ ಜಾಗತಿಕ ಗೋಚರತೆ ದೊರೆಯಲಿದೆ. ವರ್ಷಕ್ಕೆ ಎರಡು ಬಾರಿ ಮಾತ್ರ ಮಾರಾಟವಾಗುತ್ತಿತ್ತು; ಈಗ ವರ್ಷಪೂರ್ತಿ ಮಾರಾಟ ಸಾಧ್ಯ. ಸ್ಥಳೀಯ ಪ್ರತಿಭೆಗೆ ವಾಲ್‌ಮಾರ್ಟ್ ವೃದ್ಧಿ ತಜ್ಞತೆ ಬೇಕಾಗಿತ್ತು,” ಎಂದು ಡಾ. ಶಾಲಿನಿ ರಜನೀಶ್ ತಿಳಿಸಿದರು.

ಮುಖ್ಯ ಕಾರ್ಯದರ್ಶಿಯವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚು ಜನ ಸಂಚಾರದ ಸ್ಥಳದಲ್ಲಿ ವಿಶೇಷ ಎಸ್‌ಹೆಚ್‌ಜಿ ಉತ್ಪನ್ನ ಕೇಂದ್ರ ಸ್ಥಾಪನೆ ಯೋಜನೆ ಪ್ರಕಟಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...