ವಕ್ಫ್‌ ತಿದ್ದುಪಡಿ ಮಸೂದೆ ‘ಉಮೀದ್‌’ ಮುಸ್ಲಿಮರ ವಿರುದ್ಧ ತಂದ ಕಾಯ್ದೆಯಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Date:

Advertisements

ವಕ್ಫ್‌ ತಿದ್ದುಪಡಿ ಮಸೂದೆ “ಉಮೀದ್‌” ಮುಸ್ಲಿಮರ ವಿರುದ್ಧ ತಂದಂಥ ಕಾಯ್ದೆಯಲ್ಲ; ವಕ್ಫ್‌ನಲ್ಲಿ ಸಾಮಾಜಿಕ ನ್ಯಾಯ ಮತ್ತು ಪಾರದರ್ಶಕತೆಗಾಗಿ ಸಂಸತ್‌ನಲ್ಲಿ ಮಂಡಿಸಿ, ಅಂಗೀಕರಿಸಿದ ಮತ್ತು ರಾಷ್ಟ್ರಪತಿ ಅನುಮೋದಿಸಿದ ಕಾಯ್ದೆಯಾಗಿದ್ದು, ಎಲ್ಲರೂ ಗೌರವಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿ, “ಕರ್ನಾಟಕದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಜಾರಿ ತರುವುದಿಲ್ಲ ಎಂಬ ಸಚಿವ ಜಮೀರ್‌ ಅಹಮದ್‌ ಹೇಳಿಕೆಗೆ ಪ್ರತಿಕ್ರಿಯಿಸಿ ಜಮೀರ್‌ ಒಬ್ಬರೇ ಅಲ್ಲ, ಸಿದ್ದರಾಮಯ್ಯ, ರಾಹುಲ್‌ ಗಾಂಧಿ ಯಾರೇ ಹೇಳಿದರೂ ಸರಿ ಅನುಷ್ಠಾನಕ್ಕೆ ತರುವ ಅಗತ್ಯತೆಯಿದೆ” ಎಂದು ಹೇಳಿದರು.

“ವಕ್ಫ್‌ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ಮುಸ್ಲಿಮರ ವಿರುದ್ಧವಾಗಿ ಅಲ್ಲ; ವಕ್ಫ್‌ ಆಸ್ತಿ ಸಂರಕ್ಷಣೆಗಾಗಿಯೇ ಎಂಬುದನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ಸ್ಪಷ್ಟಪಡಿಸಿದ್ದಾರೆ. ಮುಸ್ಲಿಂ ಸಮುದಾಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸಲೆಂದೇ ಜಾರಿ ತಂದಿದ್ದಾಗಿದೆ. ಅದರಂತೆ ಇದು ವಕ್ಫ್‌ ಆಡಳಿತದಲ್ಲಿ ಪಾರದರ್ಶಕತೆ ತರುತ್ತದೆ. ವಕ್ಫ್‌ ಆದಾಯವನ್ನು ವೃದ್ಧಿಸುತ್ತದೆ ಮತ್ತು ಬಡ ಮುಸಲ್ಮಾನರ ಸೇವೆಗೇ ಸಲ್ಲುತ್ತದೆ. ಈ ಮೂಲಕ ಮುಸ್ಲಿಂ ಮಹಿಳೆಯರು ಮತ್ತು ಸಮುದಾಯದ ಸೇವೆಗೆ ಬಲ ತುಂಬುವ ಧ್ಯೇಯದಿಂದ ಉಮೀದ್‌ ಜಾರಿ ತರಲಾಗಿದೆ” ಎಂದು ತಿಳಿಸಿದರು.

Advertisements

“ಯುಪಿಎ ಸಹ ಸಂಸತ್‌ ಕಾಯ್ದೆ ಜಾರಿ ತಂದಿತ್ತು: ವಕ್ಫ್‌ ತಿದ್ದುಪಡಿ ಕಾಯ್ದೆ 1995ರಲ್ಲೂ ಸಂಸತ್‌ ಕಾಯ್ದೆಯಾಗಿತ್ತು. 2013ರಲ್ಲಿ ಯುಪಿಎ ಸರ್ಕಾರ ತಂದದ್ದೂ ಸಹ ಸಂಸತ್‌ ಕಾಯ್ದೆಯೇ ಆಗಿತ್ತು. ಈಗ 2025ರಲ್ಲಿ NDA ಸರ್ಕಾರ ತಂದಿರುವುದೂ ಸಹ ಸಂಸತ್‌ ಕಾಯ್ದೆಯೇ ಆಗಿದೆ. ಯುಪಿಎಗಿಂತ ಹೆಚ್ಚು ಪಾರದರ್ಶಕವಾಗಿದೆ” ಎಂದರು.

ಸಂಸತ್‌ ಮತ್ತು ರಾಷ್ಟ್ರಪತಿ ಅನುಮೋದಿಸಿದ ಕಾಯ್ದೆ

“NDA ಸರ್ಕಾರ ವಕ್ಫ್‌ ಸಚಿವಾಲಯದಲ್ಲಿ ಸಹ ಹಲವು ಸಭೆ, ಸಮಾಲೋಚನೆ ನಡೆಸಿ, ಸದನದಲ್ಲಿ ಸುದೀರ್ಘ ಅವಧಿ ಚರ್ಚಿಸಿ ಮಂಡಿಸಿ ಅಂಗೀಕರಿಸಿದಂತಹ ತಿದ್ದುಪಡಿ ಕಾಯ್ದೆಯಾಗಿದೆ. ಮಾತ್ರವಲ್ಲ ರಾಷ್ಟ್ರಪತಿ ಅವರೂ ಸಹ ಅನುಮೋದಿಸಿ ಜಾರಿಗೊಳಿಸಿದಂತಹ ಕಾಯ್ದೆಯಾಗಿದೆ. ಹಾಗಾಗಿ ಹಿಂದಿನಂತೆ ಈಗಲೂ ಅನುಷ್ಠಾನಕ್ಕೆ ತರಲೇಬೇಕಾಗುತ್ತದೆ” ಎಂದು ಹೇಳಿದರು.

ವೋಟ್‌ ಬ್ಯಾಂಕ್‌ಗಾಗಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ

“ವಕ್ಫ್‌ ತಿದ್ದುಪಡಿ ಮಸೂದೆ ಬಗ್ಗೆ ವೋಟ್‌ ಬ್ಯಾಂಕ್‌ಗಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಜನರೇನು ಮೂರ್ಖರಲ್ಲ ಪ್ರಜ್ಞಾವಂತರಿದ್ದಾರೆ” ಎಂದು ಜೋಶಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X