ಧರ್ಮಸ್ಥಳ ಹಿಂದಿನ ಷಡ್ಯಂತ್ರ ಬಗ್ಗೆ ಅಮಿತ್‌ ಶಾ ಗಮನಕ್ಕೆ ತಂದಿದ್ದೇವೆ: ಬಿ ವೈ ವಿಜಯೇಂದ್ರ

Date:

Advertisements

ಧರ್ಮಸ್ಥಳ ವಿಚಾರವಾಗಿ ಯಾವ ರೀತಿ ಷಡ್ಯಂತ್ರ ನಡೆಯುತ್ತಿದೆ. ಈ ಷಡ್ಯಂತ್ರದ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂಬ ವಿಚಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇವೆ. ಎಲ್ಲ ವಿಚಾರಗಳನ್ನು ಅವರು ಆಲಿಸಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು.

ಕೇಂದ್ರ ಗೃಹ ಸಚಿವರ ಭೇಟಿಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿರೋಧ ಪಕ್ಷದ ನಾಯಕರುಗಳಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಧರ್ಮಸ್ಥಳ ಚಲೋ ಉಸ್ತುವಾರಿ ಹಾಗೂ ಶಾಸಕರಾದ ಎಸ್.ಆರ್. ವಿಶ್ವನಾಥ್, ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಸತೀಶ್ ಕುಂಪಲ ಅವರನ್ನು ಒಳಗೊಂಡ ಎಲ್ಲ ರಾಜ್ಯ ಬಿಜೆಪಿ ನಿಯೋಗವು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದೆ” ಎಂದರು.

“ರಾಜ್ಯದಲ್ಲಿರುವ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿಚಾರಗಳಾದ ಧರ್ಮಸ್ಥಳ ವಿಚಾರ, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ, ಕೊಪ್ಪಳದಲ್ಲಿ ಹಿಂದೂ ಕಾರ್ಯಕರ್ತ ಗವಿಸಿದ್ದಪ್ಪ ಅವರ ಹತ್ಯೆ, ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ದಿನೇ ದಿನೇ ಹದಗೆಟ್ಟಿರುವುದು ಮತ್ತು ಸಚಿವ ಸಂಪುಟದಲ್ಲಿ ಕೆಲವು ಕೇಸ್‍ಗಳನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಬಗ್ಗೆ ಎಲ್ಲ ವಿಚಾರವಾಗಿ ಮತ್ತು ಸವಿಸ್ತಾರವಾಗಿ ಗೃಹ ಸಚಿವರ ಗಮನಕ್ಕೆ ತಂದು ಚರ್ಚೆಯನ್ನು ಮಾಡಿದ್ದೇವೆ” ಎಂದು ಹೇಳಿದರು.

“ರಾಜ್ಯದಲ್ಲಿ ಯಾವ ರೀತಿ ಪೊಲೀಸ್ ವ್ಯವಸ್ಥೆಯು ಕುಸಿದು ಬಿದ್ದಿದೆ ಹಾಗೂ ಪೊಲೀಸರಿಗೆ ಯಾವುದೇ ರೀತಿಯ ಅಧಿಕಾರ ಸರ್ಕಾರ ನೀಡದಿರುವ ಬಗ್ಗೆಯೂ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X