Breaking News |’ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದು ನೋಡಿದ್ದೇವೆ’; ಮತ್ತಿಬ್ಬರು ಸಾಕ್ಷಿದಾರರು ಪ್ರತ್ಯಕ್ಷ

Date:

Advertisements

“ದೃಶ್ಯಮಾಧ್ಯಮದಲ್ಲಿ ತೋರುತ್ತಿರುವ ದೂರುದಾರ ವ್ಯಕ್ತಿಯನ್ನು ಗ್ರಾಮಸ್ಥರಾದ ನಾವು ಗುರುತಿಸಿರುತ್ತೇವೆ. ಆತ ರಹಸ್ಯವಾಗಿ ಜನರಿಗೆ ಕಾಣದಂತೆ ಧರ್ಮಸ್ಥಳ ಗ್ರಾಮದ ವಿವಿಧೆಡೆ ಶವಗಳನ್ನು ಕೊಂಡೊಯ್ದು ಹೂತುಹಾಕಿರುವುದನ್ನು ನಾವು ವಿವಿಧ ಸ್ಥಳಗಳಲ್ಲಿ ನೋಡಿರುತ್ತೇವೆ” ಎಂದು ಇನ್ನಿಬ್ಬರು ಧರ್ಮಸ್ಥಳ ಗ್ರಾಮಸ್ಥರು ಎಸ್‌ಐಟಿಗೆ ತಿಳಿಸಿದ್ದು, ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ.

“ಆತ ರಹಸ್ಯವಾಗಿ ಹೂತುಹಾಕಿರುವುದಾಗಿ ಭಾವಿಸಿದರೂ, ಗ್ರಾಮಗಳಲ್ಲಿ ಇಂತಹ ವಿಷಯಗಳು ರಹಸ್ಯವಾಗಿ ಉಳಿಯುವುದಿಲ್ಲವೆಂಬುದು ತಮಗೆ ತಿಳಿದಿರುತ್ತದೆ. ಜನರ ರಕ್ಷಣೆಗೆಂದು ಮಾನ್ಯ ಮುಖ್ಯಮಂತ್ರಿಗಳು ಸ್ಥಾಪಿಸಿರುವ ಈ ವಿಶೇಷ ತನಿಖಾದಳಕ್ಕೆ ನಾವು ಸಹಕಾರ ನೀಡಲೇಬೇಕು ಎಂದು ತೀರ್ಮಾನಿಸಿರುತ್ತೇವೆ. ದೂರುದಾರನು ತೋರುತ್ತಿರುವ ಸ್ಥಳಗಳಲ್ಲಿ ಮೃತದೇಹಗಳ ಕಳೇಬರಗಳನ್ನು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ನಮ್ಮನ್ನು ಒಳಗೊಳಪಡಿಸಲು ಕೋರುತ್ತೇವೆ. ಆತ ರಹಸ್ಯವಾಗಿ ಹೂತುಹಾಕುತ್ತಿದ್ದ ಸ್ಥಳಗಳನ್ನು ನಾವು ಎಲ್ಲೆಲ್ಲಿ ನೋಡಿದ್ದೇವೆ ಎಂದು ಸ್ವತಂತ್ರವಾಗಿ ತೋರಿಸುವ ಅವಕಾಶವನ್ನೂ ಕೋರುತ್ತೇವೆ” ಎಂದು ಸಾಕ್ಷಿದಾರರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ; ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

Advertisements

ಎರಡು ಸಾಕ್ಷಿಗಳ ಪ್ರತ್ಯೇಕ ದೂರನ್ನು ಒಂದೇ ಪ್ರಕರಣದಲ್ಲಿ ವಿಲೀನಗೊಳಿಸಲಾಗಿದೆ. ಕೆಲವು ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಾಗದ ಕಾರಣ ಅವುಗಳನ್ನು ಪತ್ರದಲ್ಲಿ ಮರೆಮಾಡಲಾಗಿದೆ ಎಂದು ತಿಳಿದುಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X