5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

Date:

  • ಈ ಹಿಂದೆ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ
  • ‘ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು’ ಎನ್ನುವಂತಾಗಿದೆ ಬಿಜೆಪಿ ಸ್ಥಿತಿ

ಬಂಜಾರ ಸಮುದಾಯದ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆಗಳ ಪಟ್ಟಿ ನೀಡಿದ ಮುಖ್ಯಮಂತ್ರಿಗಳು, “ಸೇವಾಲಾಲ್ ಮಠಕ್ಕೆ ನೆರವು ನೀಡಿದ್ದು ನಮ್ಮ ಸರ್ಕಾರ. ಸೇವಾಲಾಲ್ ಜಯಂತಿ ಆಚರಿಸಿದ್ದು ನಮ್ಮ ಸರ್ಕಾರ. ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು” ಎಂದು ಭರವಸೆ ನೀಡಿದರು.

- Advertisement -

ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ ಬಂಜಾರ ಭವನವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

“ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ. ಸಾವಿರಾರು ವರ್ಷಗಳಿಂದ ನಾವೆಲ್ಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ. ಬಿ ಆರ್ ಅಂಬೇಡ್ಕರ್ ಅವರ ಕಾರಣದಿಂದ ವಂಚಿತರೆಲ್ಲರಿಗೂ ಶಿಕ್ಷಣ ಮೂಲಭೂತ ಹಕ್ಕಾಯಿತು. ಈ ಕಾರಣಕ್ಕೇ ನಾವೆಲ್ಲರೂ ಶಿಕ್ಷಿತರಾಗಬೇಕು. ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸುತ್ತದೆ. ಸ್ವಾಭಿಮಾನಿಯಾದರೆ ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು” ಎಂದರು.

“ನಾವು ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುನ್ನುಡಿ ಬರೆದೆವು. ಆದರೆ ಬಿಜೆಪಿಯವರು ನಮ್ಮ ಕೆಲಸವನ್ನು ಅವರು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು ಹೇಗಿದೆ ಅಂದರೆ, “ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು” ಎನ್ನುವ ಗಾದೆ ಮಾತಿನಂತಾಗಿದೆ ಬಿಜೆಪಿ ಸ್ಥಿತಿ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಕೋಮುಗಲಭೆಗೆ ಶಿವಮೊಗ್ಗದ ರಾಗಿಗುಡ್ಡವನ್ನೇ ಯಾಕೆ ಆಯ್ಕೆ ಮಾಡಲಾಯಿತು ?

ಬಂಜಾರ ಸಮುದಾಯದ ಅಭಿವೃದ್ಧಿಗೆ ಬಜೆಟ್‌ನಲ್ಲಿ 275 ಕೋಟಿ ನೀಡಲಾಗಿತ್ತು. ಸೇವಲಾಲ್ ವಸತಿ ಶಾಲೆ ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ನೀಡುತ್ತೇನೆ ಎನ್ನುವ ಭರವಸೆ ನೀಡಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ವಿಧಾನಸಭೆ ಉಪ ಸಭಾಪತಿಗಳಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸೇವಾಲಾಲ್ ಪ್ರತಿಮೆ ಅನಾವರಣಗೊಳಿಸಿದರು. ಬಂಜಾರ ಕರಕುಷಲ ವಸ್ತು ಪ್ರದರ್ಶನವನ್ನು ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌ ಸಿ ಮಹದೇವಪ್ಪ ಅವರು ಉದ್ಘಾಟಿಸಿದರು.

ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಶಾಸಕರಾದ ನೇಮಿರಾಜನಾಯ್ಕ್, ಅವಿನಾಶ್ ಜಾದವ್, ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್ ಬಿ ಸಿದ್ಯಾನಾಯ್ಕ್, ಮಾಜಿ ಸಚಿವೆ ಬಿ ಟಿ ಲಲಿತಾನಾಯಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದೇ ಪದೇ ಬಂಧನವಾದರೂ ಹಿಂಜರಿಯದ ವಿಪಕ್ಷಗಳು: ಮತ್ತೆ ಜಂತರ್ ಮಂತರ್‌ನತ್ತ ಹೆಜ್ಜೆಯಿಟ್ಟ ಇಂಡಿಯಾ ಒಕ್ಕೂಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ...

‘ಹಾಫ್ ಹೆಲ್ಮೆಟ್’ ನಿಷೇಧ: ಇನ್ಮುಂದೆ ನಿಯಮ ಮೀರಿದರೆ ಭಾರೀ ದಂಡ; ಸಂಚಾರ ಪೊಲೀಸರ ಬಿಗಿ ಕ್ರಮ

ದ್ವಿಚಕ್ರ ವಾಹನ ಸವಾರರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ...

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...