LGBTQIA+ ಪಾರಿಭಾಷಿಕ ಪದಕೋಶ ಮಾಡಲು ಮಾಸಾಂತ್ಯದಲ್ಲಿ ಸಭೆ: ಡಾ. ಪುರುಷೋತ್ತಮ ಬಿಳಿಮಲೆ

Date:

LGBTQIA+ ಪಾರಿಭಾಷಿಕ ಪದಕೋಶ ಮಾಡಲು ಮಾಸಾಂತ್ಯದಲ್ಲಿ LGBTQIA+ ಸಮುದಾಯಗಳ ಜೊತೆ ಸಮಾಲೋಚನಾ ಸಭೆ ನಡೆಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.

- Advertisement -

ಈದಿನ ಯೂಟ್ಯೂಬ್‌ನಲ್ಲಿ ಹಿರಿಯ ಪತ್ರಕರ್ತರಾದ ಡಿ. ಉಮಾಪತಿ ಅವರೊಂದಿಗೆ ನಡೆದ ಸಂದರ್ಶನದಲ್ಲಿ ಮಾತನಾಡಿದ ಡಾ. ಪುರುಷೋತ್ತಮ ಬಿಳಿಮಲೆ, “ಕನ್ನಡದಲ್ಲಿ ಮೊದಲ ಬಾರಿಗೆ LGBTQIA+ ಪಾರಿಭಾಷಿಕ ಪದಕೋಶ ತರಲು ಪ್ರಯತ್ನ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಪ್ರೀಮಿಯಂ ಲೇಖನ |LGBTQA+ ಕೊಡುಗೆ ಅಗಾಧ: ನಾವು ಕಣ್ಣು ತೆರೆದು ನೋಡಬೇಕಷ್ಟೇ!

“LGBTQIA+ ಬಗ್ಗೆ ಪಾರಿಭಾಷಿಕ ಪದಕೋಶ ನಮ್ಮಲ್ಲಿಲ್ಲ. ಅದಕ್ಕಾಗಿ ಅಕ್ಕೈ ಪದ್ಮಶಾಲಿ ಅವರ ನೇತೃತ್ವದಲ್ಲಿ ರೂಮಿ ಹರೀಶ್, ದಾದಾಪೀರ್ ಜೈಮನ್, ವಸುದೇಂದ್ರ ಮೊದಲಾದವರನ್ನು ಕರೆದು ಸಭೆ ನಡೆಸಲಾಗಿದೆ. ಅವರ ಪ್ರಕಾರ ಕನ್ನಡದಲ್ಲಿ LGBTQIA+ ಸಂಬಂಧಿಸಿ 300 ಪದಗಳು ಸಿಗಬಹುದು. ಈ ಪದಗಳನ್ನು ಬಳಸುವ 32 ಗುಂಪುಗಳಿವೆ ಎಂದು ತಿಳಿಸಿದ್ದಾರೆ. ಆದ್ದರಿಂದ ಈ ತಿಂಗಳ ಕೊನೆಯಲ್ಲಿ ಈ 32 ಗುಂಪುಗಳನ್ನೂ ಕರೆದು ಒಂದು ಸಭೆ ನಡೆಸಲಾಗುವುದು” ಎಂದು ಹೇಳಿದರು.

“ಈ 32 ಗುಂಪುಗಳು ಬಳಸುವ ಪದಗಳನ್ನು ಸಂಗ್ರಹಿಸಿ, ಆ ಪದಗಳ ಬಗ್ಗೆ ವಿವರ ನೀಡುವ ಪ್ರಯತ್ನ ಮಾಡಲಾಗುವುದು. ಈ ಎಲ್ಲ ಕಾರ್ಯಗಳು ಮುಂದಿನ ಡಿಸೆಂಬರ್ ಹೊತ್ತಿಗೆ ಮುಗಿಸಲಾಗುವುದು. ಈ ನಿಟ್ಟಿನಲ್ಲಿ ಸಭೆಗಳಾಗಿವೆ. LGBTQIA+ ಗೆ ಕನ್ನಡದಲ್ಲಿ ಹೇಗೆ ಹೇಳುವುದು ಎಂಬುದನ್ನು ಮತ್ತೆ ಯೋಚಿಸೋಣ” ಎಂದರು.

ಇದನ್ನು ಓದಿದ್ದೀರಾ? ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

“ಅಂತಾರಾಷ್ಟ್ರೀಯವಾಗಿ ಜನಪ್ರಿಯವಾಗಿರುವ ಪದಗಳು ಇಂಗ್ಲೀಷ್‌ನಲ್ಲಿ ಸಿಗುತ್ತವೆ. ಆದರೆ ಸ್ಥಳೀಯವಾಗಿ ನಮ್ಮಲ್ಲಿ ಅನೇಕ ಪದಗಳಿವೆ. ಈ ಪದಗಳು ನಾವು ಬಳಸಿದಾಗ ಪ್ರಾದೇಶಿಕ ಸ್ಪರ್ಶ ಬರುತ್ತದೆ. ಆದ್ದರಿಂದ ಜೋಗಪ್ಪ, ಜೋಗಮ್ಮ ಎಲ್ಲ ಪದಗಳನ್ನು ಸೇರಿಸಿ ಒಂದು LGBTQIA+ ಪದಕೋಶವನ್ನು ತರಲಾಗುವುದು. ಕನ್ನಡದಲ್ಲಿ ಮೊದಲ ಬಾರಿಗೆ ಈ ಪ್ರಯತ್ನ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಹಲವು ದಶಕಗಳಿಂದ ಕನ್ನಡದಲ್ಲಿ LGBTQIA+ ಸಮುದಾಯವನ್ನು ಸೂಚಿಸಲು ಬಳಕೆಯಾಗುತ್ತಿರುವ ಪದಗಳು ಹೆಚ್ಚಾಗಿ ನಿಂದನಾತ್ಮಕ ಅಥವಾ ಅವಹೇಳನಕಾರಿಯಾಗಿವೆ. ಆದ್ದರಿಂದ ಕನ್ನಡದಲ್ಲಿ LGBTQIA+ ಪಾರಿಭಾಷಿಕ ಪದಕೋಶವೊಂದರ ಅನಿವಾರ್ಯತೆಯ ಬಗ್ಗೆ ಸಮುದಾಯದ ನಡುವೆ ಚರ್ಚೆ ನಡೆಯುತ್ತಲಿದೆ. ಇಂಗ್ಲಿಷ್ ತಿಳಿಯದ ಸಾಮಾನ್ಯ ಜನರಿಗೂ ಸಮುದಾಯದ ವೈವಿಧ್ಯತೆಯನ್ನು ಅರ್ಥೈಸಲು ಕನ್ನಡ ಪಾರಿಭಾಷಿಕ ಪದಕೋಶ ಸಹಾಯವಾಗುವ ನಿರೀಕ್ಷೆಯಿದೆ. ಇದು ತಪ್ಪು ಕಲ್ಪನೆಗಳನ್ನು ಮತ್ತು ಪೂರ್ವಾಗ್ರಹಗಳನ್ನು ದೂರ ಮಾಡಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ಸಮುದಾಯದಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...