ಕಾಂಗ್ರೆಸ್ ಸರ್ಕಾರ ಬಿದ್ದರೆ ಸರ್ಕಾರ ರಚನೆಗೆ ನಾವು ಮುಂದಾಗುತ್ತೇವೆ: ಡಿ.ವಿ.ಸದಾನಂದ ಗೌಡ

Date:

ಸ್ವಯಂಕೃತ ಅಪರಾಧದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದರೆ ಸರ್ಕಾರ ರಚನೆಗೆ ನಾವು ಪ್ರಯತ್ನಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.

- Advertisement -

ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿ ವರಿಷ್ಠರು ನೀಡುವ ಆದೇಶ ಮೇಲೆ ನಮ್ಮ ತೀರ್ಮಾನ ನಿಂತಿದೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಬಾರದು ಎಂಬುದು ನಮ್ಮ ಬಯಕೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಾಂಗ್ರೆಸ್‌ನೊಳಗಿನ ಈಗಿನ ಬೆಳವಣಿಗೆಗಳು ಹೀಗೆ ಮುಂದುವರಿದು ಸರ್ಕಾರ ಬಿದ್ದಾಗ ಏನಾದರೂ ಮಾಡಿ ಎಂದು ಪಕ್ಷದ ವರಿಷ್ಠರು ಸೂಚನೆ ನೀಡಿದರೆ ನಾವು ಸರ್ಕಾರ ರಚನೆಗೆ ಸಿದ್ಧರಿದ್ದೇವೆ” ಎಂದರು.

“ಕಾಂಗ್ರೆಸ್ ಮುಳುಗುತ್ತಿರುವ ಹಡಗು. ದೇಶದಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಇದರಲ್ಲಿ ಎರಡು ಸಣ್ಣಪುಟ್ಟ ರಾಜ್ಯಗಳಿವೆ” ಎಂದು ಹೇಳಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....