ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಅಲ್ಲದೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ಇರುವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಆಗಸ್ಟ್ 15 ರಿಂದ 19 ರವರೆಗೆ ರಾಜ್ಯದ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಗುರುವಾರ (ಆ.14) ಹೆಚ್ಚು ಮಳೆ ಸುರಿಯಲಿದೆ. ಒಂದು ವಾರ ನೈರುತ್ಯ ಮಾನ್ಸೂನ್ ಚುರುಕಾಗಲಿದ್ದು, ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಬೆಳಗಾವಿ ,ಬೀದರ್, ಕಲಬುರ್ಗಿ, ವಿಜಯಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 20 ರವರೆಗೂ ಭಾರಿ ಮಳೆ ಮುನ್ಸೂಚನೆ ಇದೆ.
ಬೆಂಗಳೂರು ಹವಾಮಾನ
ಬೆಂಗಳೂರಲ್ಲಿ ಬುಧವಾರ ದಿನವಿಡಿ ಜಿಟಿಜಿಟಿ ಮಳೆಯಾಗಿದ್ದು, ಕನಿಷ್ಠ ತಾಪಮಾನ ದಾಖಲಾಗಿದೆ. ಸೋಮವಾರದಂದು 27.2 ಡಿಗ್ರಿ ಶೆಲ್ಸಿಯಸ್, ಮಂಗಳವಾರ 25.3 ಸೆ, ಬುಧವಾರ 22.6 ಸೆಲ್ಸಿಯಸ್ ಕನಿಷ್ಟ ತಾಪಮಾನ ದಾಖಲಾಗಿತ್ತು. ಗುರುವಾರದಂದು ತಾಪಮಾನ ಸ್ವಲ್ಪ ಏರಿಕೆಯಾಗಿ 25 ಡಿಗ್ರಿ ಸೆಲ್ಸಿಯಸ್ ಇರಲಿದೆ. ಆದರೆ ಹಗುರ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.
https://shorturl.fm/yVE8t