ಹವಾಮಾನ | ಕರಾವಳಿಯಲ್ಲಿ ಬಿಸಿಗಾಳಿ ಎಚ್ಚರಿಕೆ; ಹಲವೆಡೆ ಆಲಿಕಲ್ಲು ಮಳೆ ಮುನ್ಸೂಚನೆ

Date:

ರಾಜ್ಯದಲ್ಲಿ ಬಿಸಿಲಿನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಇತ್ತ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುಡುವ ಬಿಸಿಗಾಳಿ (Heat Wave) ಮುಂದುವರಿಯಲಿದ್ದರೆ, ಅತ್ತ ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು IMD ಎಚ್ಚರಿಸಿದೆ.

- Advertisement -

ಕಲಬುರ್ಗಿ ಹಾಗೂ ವಿಜಯಪುರದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ನಿರೀಕ್ಷೆಯಿದೆ. ಜತೆಗೆ ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಸಿಡಿಲು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಭಾಗಗಳಲ್ಲಿ ಮುಂದಿನ ಎರಡು ದಿನ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ. ಮುಂಬರುವ ದಿನಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ಗಡಿ ದಾಟುವ ಆತಂಕವಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, 2026ರ ಏಪ್ರಿಲ್‌ನಿಂದ ಜೂನ್‌ವರೆಗೆ ದೇಶಾದ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ. ಒಡಿಶಾ, ಬಂಗಾಳ ಹಾಗೂ ಕರ್ನಾಟಕದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ಅಲೆಗಳು ಕಂಡುಬರಲಿವೆ. ಇದು ಸಾರ್ವಜನಿಕ ಆರೋಗ್ಯದ ಮೇಲೆ ಮಾತ್ರವಲ್ಲದೆ, ಜಲ ಸಂಪನ್ಮೂಲ ಮತ್ತು ವಿದ್ಯುತ್ ಬೇಡಿಕೆಯ ಮೇಲೆಯೂ ತೀವ್ರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಹವಾಮಾನ ವರದಿ | ಜುಲೈ ನಂತರ ಎಲ್ ನಿನೋ ಉದ್ಭವಿಸುವ ಸಾಧ್ಯತೆ

ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಅನಗತ್ಯವಾಗಿ ಬಿಸಿಲಿನಲ್ಲಿ ಓಡಾಡುವುದನ್ನು ತಪ್ಪಿಸಬೇಕು. ದೇಹವನ್ನು ಹೈಡ್ರೇಟೆಡ್ ಆಗಿಡಲು ನಿಯಮಿತವಾಗಿ ನೀರು, ಎಳನೀರು ಅಥವಾ ಮಜ್ಜಿಗೆ ಸೇವಿಸಬೇಕು. ಕಾಫಿ, ಟೀ ಮತ್ತು ಸಕ್ಕರೆಯುಕ್ತ ಪಾನೀಯಗಳಿಂದ ದೂರವಿರಬೇಕು. ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಿ, ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಮರೆಯದೆ ಬಳಸಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ವಿಶೇಷವಾಗಿ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

    ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

    ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

    ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

    ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

    ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

    ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

    ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...