ಹವಾಮಾನ | ಮಳೆ ಅಬ್ಬರ ಮತ್ತೆ ಶುರು, ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಣೆ

Date:

ಮುಂಗಾರು ಮಳೆ ಇಂದಿನಿಂದ ಚುರುಕುಗೊಂಡಿದ್ದು, ರಾಜ್ಯದ ವಿವಿಧೆಡೆ ಸೋಮವಾರದಿಂದ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

28 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು ಮೂರು ದಿನಗಳ ಬಳಿಕ ಮಳೆ ಹೆಚ್ಚಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರ ಈ ಜಿಲ್ಲೆಗಳಿಗೂ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ನಿರೀಕ್ಷೆ ಮಾಡಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಕೋಲಾರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೀದ‌ರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಯ ಹಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...