ಹವಾಮಾನ | ಮುಂಗಾರು ಚುರುಕು, ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಸಾಧ್ಯತೆ

Date:

Advertisements

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ಮತ್ತೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 8 ರಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಇಂದು ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ಇಂದು ಭಾರಿ ಮಳೆ ಸಾಧ್ಯತೆ ಹೆಚ್ಚಿದೆ. ಜೂ. 10 ರಿಂದ 12ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೃಷ್ಣಾ ನದಿ ಪ್ರದೇಶದಲ್ಲಿ ಪ್ರವಾಹ ಮುನ್ನೆಚ್ಚರಿಕೆ

Advertisements

ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನೀರು ಹೊರಬಿಡುವ ಸಾಧ್ಯತೆ ಇದೆ. ಕೆಳಭಾಗದ ನದಿ ತೀರದ ಜನರು ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X