ಹವಾಮಾನ ವರದಿ | 40 ಕಿಮೀ ವೇಗದ ಬಿರುಗಾಳಿ; ಮುಂದಿನ 10 ದಿನಗಳವರೆಗೆ ವರುಣಾರ್ಭಟ!

Date:

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರಿದಿದ್ದು, ರಾಜ್ಯದ ಹಲವು ಭಾಗಗಳಿಗೆ ಭಾರತೀಯ ಹವಾಮಾನ ಇಲಾಖೆ (IMD)  ಮಳೆಯ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆ ನೀಡಿದೆ. ಮುಂದಿನ 10 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

- Advertisement -

ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಕೆಲವೇ ಗಂಟೆಗಳಲ್ಲಿ ಭಾರೀ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಈ ವೇಳೆ ಬರೋಬ್ಬರಿ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಎಚ್ಚರಿಕೆ ನೀಡಲಾಗಿದೆ. ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮುಂದಿನ 2 ದಿನಗಳ ಕಾಲ ಸಾಧಾರಣ ಮಳೆಯಾಗಲಿದ್ದು, ಆ ನಂತರ ಮಳೆ ತಗ್ಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇತ್ತ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ತೀರದ ಬಳಿ ಗಾಳಿಯ ಒತ್ತಡ ಹಾಗೂ ಚಲನೆ ಕಡಿಮೆಯಾಗಿರುವುದರಿಂದ, ಜೂನ್ 14 ಅಥವಾ 15ರಿಂದ ಮಳೆಯ ಅಬ್ಬರ ಇಳಿಮುಖವಾಗಲಿದೆ. ಮುಂದಿನ 2-3 ದಿನಗಳಲ್ಲಿ ವಾತಾವರಣ ಸಹಜ ಸ್ಥಿತಿಗೆ ತಲುಪಲಿದ್ದು, ಕೇವಲ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಮಾಜಿ ಸ್ಪೀಕರ್ ಮಗಳ ಬಿಡಿಎ ನಿವೇಶನ ಹಂಚಿಕೆ ರದ್ದುಗೊಳಿಸಿದ ಹೈಕೋರ್ಟ್

ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಜೂನ್ 17ರ ತನಕ ಇದೇ ವಾತಾವರಣ ಮುಂದುವರಿಯಲಿದ್ದು, ಆ ನಂತರವಷ್ಟೇ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮುಂದಿನ 10 ದಿನಗಳವರೆಗೂ ಮಳೆಯಾಗುವ ಸೂಚನೆಗಳಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ರಾಮನಗರ ಹಾಗೂ ಚಿತ್ರದುರ್ಗ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್ಐಆರ್ ಅಂತಿಮ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 18,94,144 ಮತದಾರರು:

ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಚುನಾವಣಾ ಆಯೋಗದ...

SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಬೆಳಗಾವಿಯಲ್ಲಿ ಡಿ. 7ರಿಂದ ಚಳಿಗಾಲದ ಅಧಿವೇಶನ

ರಾಜ್ಯ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ...

ಪ್ರಶಾಂತ್ ಕಿಶೋರ್ ಆಪ್ತ, ‘ಜನ್ ಸುರಾಜ್’ ಡಿಜಿಟಲ್ ಮ್ಯಾನೇಜರ್ ರೈಲಿನಿಂದ ನಾಪತ್ತೆ, ನಿಗೂಢ ಸಾವು

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ್ ಸುರಾಜ್ ಪಾರ್ಟಿ'ಯ (ಜೆಎಸ್‌ಪಿ)...