ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

Date:

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ. ನೈಋತ್ಯ ಮುಂಗಾರು ಕೊಂಚ ದುರ್ಬಲಗೊಂಡಿದ್ದರೂ, ಇದರ ಪರಿಣಾಮವಾಗಿ ದಕ್ಷಿಣ ಒಳನಾಡಿನಾದ್ಯಂತ ಮಳೆ ಚುರುಕುಗೊಳ್ಳಲಿದ್ದು, ಪ್ರಮುಖವಾಗಿ ಅಕ್ಟೋಬರ್ 9ರಂದು ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಆಯ್ದ 5 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

- Advertisement -

ಹವಾಮಾನ ಇಲಾಖೆಯ ವರದಿಯಂತೆ, ಅಕ್ಟೋಬರ್ 9ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ. ಇದರೊಂದಿಗೆ ತುಮಕೂರು, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಅಕ್ಟೋಬರ್ 7 ರಿಂದ 10ರವರೆಗೆ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು-ಮಿಂಚಿನ ಮುನ್ನೆಚ್ಚರಿಕೆ ಘೋಷಿಸಲಾಗಿದೆ. ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ಟೋಬರ್ 7 ಮತ್ತು 8ರಂದು ಸಾಧಾರಣ ಮಳೆಯಾದರೆ, ಅಕ್ಟೋಬರ್ 9ರಂದು ಮಳೆಯ ತೀವ್ರತೆ ಹೆಚ್ಚಾಗಲಿದೆ. ಆದರೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಆಕಾಶವು ಸಾಮಾನ್ಯವಾಗಿ ಮೋಡ ಕವಿದಿರಲಿದ್ದು, ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಕೇಂದ್ರದ ಮುಖ್ಯಸ್ಥ ಡಾ. ಎನ್. ಪುವಿಯರಸನ್ ತಿಳಿಸಿದ್ದಾರೆ.

ಉಳಿದಂತೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೂ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಒಣಹವೆ ಇರಲಿದೆ. ಹಾಗೆಯೇ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಸೇರಿದಂತೆ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಿಲ್ಲದೆ ಒಣಹವೆ ಮುಂದುವರಿಯಲಿದೆ. ಕಳೆದ ಒಂದು ದಿನದಲ್ಲಿ ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ನಾಪೋಕ್ಲುವಿನಲ್ಲಿ 4 ಸೆಂ.ಮೀ, ಬೇಗೂರು ಮತ್ತು ಶ್ರೀಮಂಗಲದಲ್ಲಿ ತಲಾ 3 ಸೆಂ.ಮೀ ಹಾಗೂ ಕಳಸ, ಹುಡಿಕೇರಿ ಮತ್ತು ಸಂಪಾಜೆಯಲ್ಲಿ ತಲಾ 2 ಸೆಂ.ಮೀ ಮಳೆ ದಾಖಲಾಗಿರುವುದು ವರದಿಯಾಗಿದೆ.

ಇದನ್ನೂ ಓದಿ: ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ಸಾಮಾನ್ಯವಾಗಿ ಅಕ್ಟೋಬರ್ ತಿಂಗಳ ಆರಂಭದ ವೇಳೆಗೆ ನೈಋತ್ಯ ಮುಂಗಾರು ನಿರ್ಗಮನದ ಹಾದಿ ಹಿಡಿಯಬೇಕಿತ್ತು. ಆದರೆ ಜಾಗತಿಕ ತಾಪಮಾನ ಏರಿಕೆ (Global Warming), ಸಮುದ್ರದ ಮೇಲ್ಮೈ ಉಷ್ಣಾಂಶದಲ್ಲಿನ (Sea Surface Temperature) ಅನಿರೀಕ್ಷಿತ ಬದಲಾವಣೆಗಳು ಮತ್ತು ಅನಿಯಮಿತ ವಾಯುಭಾರ ಕುಸಿತದಂತಹ ವಿದ್ಯಮಾನಗಳಿಂದಾಗಿ ಮಳೆಯ ಸ್ವರೂಪದಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗುತ್ತಿದೆ. ಮುಂಗಾರು ಮುಗಿಯುವ ಹಂತದಲ್ಲಿ ಅರಬ್ಬಿ ಸಮುದ್ರ ಅಥವಾ ಬಂಗಾಲಕೊಲ್ಲಿಯಲ್ಲಿ ತಲೆದೋರುವ ಇಂತಹ ಹಠಾತ್ ಚಂಡಮಾರುತ ಅಥವಾ ವಾಯುಭಾರ ಕುಸಿತಗಳು ಹವಾಮಾನ ಸಮತೋಲನವನ್ನು ಏರುಪೇರುಗೊಳಿಸುತ್ತಿದ್ದು, ಇದು ಕೃಷಿ ಚಟುವಟಿಕೆಗಳ ಮೇಲೂ ನೇರ ಪರಿಣಾಮ ಬೀರುತ್ತಿದೆ ಎಂದು ಹವಾಮಾನ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೋಹಿಂಗ್ಯಾ ನರಮೇಧಕ್ಕೆ ಮ್ಯಾನ್ಮಾರ್ ಹೊಣೆ ಎಂದ ಐಸಿಜೆ ತೀರ್ಪಿನ ಅರ್ಥವೇನು?

ರೋಹಿಂಗ್ಯಾ ಅಲ್ಪಸಂಖ್ಯಾತ ಸಮುದಾಯದ ನರಮೇಧಕ್ಕೆ ಮ್ಯಾನ್ಮಾರ್ ಹೊಣೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ...

ವಿಜಯಪುರ |ಜನರ ಕೆಲಸಕ್ಕೆ ಅಲೆದಾಡಿಸುವ ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲ್ಲ: ಉಪಲೋಕಾಯುಕ್ತ ಫಣೀಂದ್ರ ಎಚ್ಚರಿಕೆ

ಸಾರ್ವಜನಿಕರ ಅಗತ್ಯ ಸೇವೆಗಳನ್ನು ಸಕಾಲದಲ್ಲಿ ಒದಗಿಸದೇ, ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡಿದರೆ...

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್‌ಗೆ ಸಿರಾಜ್ ಅವರನ್ನು ಕೈಬಿಟ್ಟಿದ್ದಕ್ಕೆ ವ್ಯಾಪಕ ಅಸಮಾಧಾನ

ನಿಮ್ಮ ಅಗ್ರ ನಾಲ್ವರು ಬೌಲರ್‌ಗಳಲ್ಲಿ ಸಿರಾಜ್‌ಗೆ ಸ್ಥಾನವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳುವುದು ನನಗೆ...