ಕಳೆದು ಒಂದು ತಿಂಗಳಿನಿಂದ ಕರ್ನಾಟಕವೂ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ನಾಲ್ಕೈದು ದಿನಗಳಿಂದ ಮಳೆ ಕಡಿಮೆಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸುತ್ತಿದ್ದು, ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಮುಂದಿನ ಆರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ನವೆಂಬರ್ 11 ರಿಂದ 14ರ ಕರ್ನಾಟಕದಲ್ಲಿ ಮಳೆಯಾಗಲಿದೆ. ರಾಜ್ಯದ ಮಲೆನಾಡು, ಕರಾವಳಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.