ಹವಾಮಾನ ವರದಿ: 22 ಜಿಲ್ಲೆಗಳಲ್ಲಿ ಮುಂದಿನ 7 ದಿನ ಭಾರೀ ಮಳೆ!

Date:

ರಾಜ್ಯದಲ್ಲಿ ಕ್ಷೀಣಿಸಿದ್ದ ಪೂರ್ವ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಹವಾಮಾನ ವೈಪರೀತ್ಯದಿಂದಾಗಿ,  ಮುಂದಿನ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಹವಾಮಾನ ಇಲಾಖೆಯು ರಾಜ್ಯದ 7 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಮತ್ತು 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ರಾಜ್ಯಾದ್ಯಂತ ಗುಡುಗು-ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಏಪ್ರಿಲ್ ಮೊದಲ ವಾರದವರೆಗೆ ಮುಂದುವರಿಯುವ ಲಕ್ಷಣಗಳಿವೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಮಾರ್ಚ್‌ 26ರಿಂದ ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಾದ  ಧಾರವಾಡ, ಬೆಳಗಾವಿ, ಗದಗ, ಹಾವೇರಿ, ವಿಜಯನಗರ, ಗಲಕೋಟೆ, ವಿಜಯಪುರ, ಬಳ್ಳಾರಿ, ಮೈಸೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ಪ್ರತ್ಯಾವರ್ತ ಮಾರುತಗಳು (Anti-cyclone) ದುರ್ಬಲಗೊಂಡಿದ್ದರೂ ಅವುಗಳ ಪ್ರಭಾವ ಮುಂದುವರಿದಿದೆ. ಸಮುದ್ರದ ಕಡೆಯಿಂದ ಬೀಸುತ್ತಿರುವ ತೇವಾಂಶ ಭರಿತ ಗಾಳಿ ಮತ್ತು ಭೂಭಾಗದ ಅಧಿಕ ತಾಪಮಾನದಿಂದಾಗಿ ಸ್ಥಳೀಯವಾಗಿ ಮೋಡಗಳು ಸೃಷ್ಟಿಯಾಗಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆಯ ತಜ್ಞ ಡಾ. ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...