ಹವಾಮಾನ ವರದಿ: ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ

Date:

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ತಾತ್ಕಾತಿಕ ವಿರಾಮ ಸಿಕ್ಕಿರುವಂತೆ ಬಾಸವಾಗುತ್ತಿದೆ. ಆದಾಗ್ಯೂ, ರಾಜ್ಯದಲ್ಲಿ ಮಳೆ ಮುಗಿದಿಲ್ಲ. ಮುಂದಿನ ದಿನಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಅಬ್ಬರ ಇರಲಿದೆ ಎಂದು ತಿಳಿಸಿದೆ.

- Advertisement -

ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ವಿಭಿನ್ನ ಹವಾಮಾನ ಪರಿಸ್ಥಿತಿ ಕಂಡುಬರುವ ಸಾಧ್ಯತೆ ಇದೆ. ಕೆಲವೆಡೆ ಭಾರೀ ಮಳೆಯಾದರೆ, ಹಲವೆಡೆ ಸಾಧಾರಣ ಮತ್ತು ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಿರಲಿದೆ ಎಂದು ಇಲಾಖೆ ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರವರೆಗೆ ಮಳೆಯಾಗಲಿದೆ. ಮಲೆನಾಡು ಭಾಗದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಮಳೆ ಇರಲಿದೆ. ಉತ್ತರ ಒಳನಾಡು ಪ್ರದೇಶಗಳಾದ ಹಾವೇರಿ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ಮುಂದಿನ 10 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲು-ಮಳೆಯ ಮಿಶ್ರ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಇಲಾಖೆ ವಿವರಿಸಿದೆ.

ಗಮನಾರ್ಹವಾಗಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ರೆಡ್‌ ಅಲರ್ಟ್‌ ಘೋಷಿಸಿದೆ. ಮುನ್ನೆಚ್ಚರಿಕೆಯಾಗಿ ನಾನಾ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳಿಗೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...