ಹವಾಮಾನ ವರದಿ | ಮುಂದಿನ 3 ದಿನ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆ

Date:

ಮುಂಗಾರು ಮಳೆ ಮಾರುತಗಳು ಒಂದು ವಾರ ಮುಂಚಿತವಾಗಿಯೇ ಕೇರಳ ತಲುಪಿವೆ. ಇನ್ನೂ, ಕರ್ನಾಟಕದ ಗಡಿ ದಾಟಿಲ್ಲ. ಆದರೂ, ರಾಜ್ಯದಲ್ಲಿ ದಿನನಿತ್ಯ ಮಳೆ ಆರ್ಭಟ ಹೆಚ್ಚಾಗಿದೆ. ಇನ್ನೂ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಜೊತೆಗೆ, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

- Advertisement -

ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಗಾಳಿಯ ವೇಗವೂ ತೀವ್ರವಾಗಿರಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅಂತೆಯೇ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಸೂಚಿಸಿದೆ.

ಇನ್ನು, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ತಾಪಮಾನವು ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬರಲಿದೆ. ಈ ಜಿಲ್ಲೆಗಳಲ್ಲಿ ಗಾಳಿ ಮತ್ತು ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಈ ಲೇಖನ ಓದಿದ್ದೀರಾ?: ಕನ್ನಡಿಗರೇ ಗಮನಿಸಿ: ನಿಮ್ಮ ಗ್ಯಾರಂಟಿ ಯೋಜನೆ, ಸರ್ಕಾರಿ ಸೌಲಭ್ಯಗಳನ್ನೂ ಕಸಿದುಕೊಳ್ಳುತ್ತದೆ ‘ಎಸ್‌ಐಆರ್’

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಿಸಲಾಗಿದ್ದು, ಸಮುದ್ರದಲ್ಲಿ ಗಾಳಿಯ ತೀವ್ರತೆ ಹೆಚ್ಚಿರುವುದರಿಂದ ಮೀನುಗಾರರು ಮುಂದಿನ ಆದೇಶದವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮಳೆ ಬೀಳುವ ಸಮಯದಲ್ಲಿ ಬಲವಾದ ಗಾಳಿ ಮತ್ತು ಮಿಂಚು ಇರಲಿದ್ದು, ಸಾರ್ವಜನಿಕರು ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಇಲಾಖೆ ಸೂಚಿಸಿದೆ.

ಮುಂಗಾರು ಪೂರ್ವ ಮಳೆಯ ನೀರನ್ನು ಬಳಸಿಕೊಂಡು ರೈತರು ತಕ್ಷಣವೇ ಬಿತ್ತನೆಗೆ ಭೂಮಿಯನ್ನು ಹದಗೊಳಿಸಿಕೊಳ್ಳಲು ಸೂಕ್ತ ಸಮಯವಾಗಿದೆ. ಬಿತ್ತನೆ ಕಾರ್ಯಕ್ಕೆ ಅಗತ್ಯವಿರುವ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರಗಳನ್ನು ಮುಂಚಿತವಾಗಿಯೇ ಸಂಗ್ರಹಿಸಿಟ್ಟುಕೊಳ್ಳುವುದು ಉತ್ತಮ ಎಂದು ಕೃಷಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...