ಹವಾಮಾನ ವರದಿ | ರಾಜ್ಯದ 18 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

Date:

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕನಿಷ್ಠ 18 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹಲವಾಮಾನ ಇಲಾಖೆ ಘೋಷಿಸಿದೆ. ಅಂತೆಯೇ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಗಳಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

- Advertisement -

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಬಿಡುಗಡೆ ಮಾಡಿರುವ ಹವಾಮಾನ ಮುನ್ಸೂಚನೆ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇದೇ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ, ತುಮಕೂರು, ಕೊಡಗು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗಂಟೆಗೆ 40–50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಈ ಲೇಖನ ಓದಿದ್ದೀರಾ?: ಇಲ್ಲಿ ಹೆಣ್ಣು ಮಕ್ಕಳನ್ನ ದಷ್ಟಪುಷ್ಟವಾಗಿ ಬೆಳೆಸುವುದು ಭದ್ರ ಭವಿಷ್ಯಕ್ಕಾಗಿ ಅಲ್ಲ, ʼಸಂಪಾದನೆʼಗಾಗಿ!

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಭಾರಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಸ್ಥಳೀಯ ಆಡಳಿತ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ: ಅಪ್ರಾಪ್ತೆಯನ್ನು ನಡುರಸ್ತೆಯಲ್ಲಿ ಎಳೆದಾಡಿ, ಕಿರುಕುಳ ನೀಡಿದ ಪುಂಡರು

ಬಿಹಾರದ ಜಮುಯಿಯಲ್ಲಿ 10ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ಯುವಕರ ಗುಂಪೊಂದು ನಡುರಸ್ತೆಯಲ್ಲಿ...

ಪ್ರೀಮಿಯಂ ಲೇಖನ | ಮಹಿಳೆಯ ದೇಹ ಅಂದ್ರೆ ರೂಪವಷ್ಟೇ ಅಲ್ಲ; ಅದು ಅನುಭವದ ಗುರುತು

ಕೇಟ್ ಮಿಲೆಟ್ ಅವರ ಚಿಂತನೆಗಳಲ್ಲಿ ಲಿಂಗ ಸಂಬಂಧಗಳನ್ನೇ ಅಧಿಕಾರ ಮತ್ತು ಅಧೀನತೆಯ...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಹಿಂದಿನ ಹೇಳಿಕೆಗೆ ಆಡಳಿತ ಮಂಡಳಿ ಕ್ಷಮೆ, ಡೀನ್ ಅಮಾನತು

ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ...