ಹವಾಮಾನ ವರದಿ | ಕರಾವಳಿಯಲ್ಲಿ ಮಳೆ ಅಬ್ಬರ, ಜು.6ರವರೆಗೆ ಆರೆಂಜ್‌ ಅಲರ್ಟ್

Date:

ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಮುಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ, ಮುಂದಿನ ಒಂದು ವಾರ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಜತೆಗೆ  ಜೂನ್ 30ರಿಂದ ಜುಲೈ 6ರವರೆಗೆ ಕರಾವಳಿಯಾದ್ಯಂತ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

- Advertisement -

ಸಮುದ್ರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಮೀನುಗಾರರು ಕಡಲಿಗಿಳಿಯದಂತೆ ಕಟ್ಟುನಿಟ್ಟಾದ ಸೂಚನೆ ನೀಡಲಾಗಿದೆ. ಅಗತ್ಯ ಕೆಲಸಗಳಿದ್ದರೆ ಮಾತ್ರ ಹೊರಬರಬೇಕು. ವಿಶೇಷವಾಗಿ ಮಕ್ಕಳು, ಹಿರಿಯರು ಹಾಗೂ ಹೊರಾಂಗಣದಲ್ಲಿ ಕೆಲಸ ಮಾಡುವ ಕಾರ್ಮಿಕರು ಹೆಚ್ಚಿನ ಜಾಗ್ರತೆ ವಹಿಸಬೇಕು. ಗುಡುಗು-ಮಿಂಚಿನ ಸಂದರ್ಭದಲ್ಲಿ ಜಮೀನುಗಳಲ್ಲಿ ಕೆಲಸ ಮಾಡುವುದನ್ನು ಸದ್ಯಕ್ಕೆ ಕೈಬಿಡುವುದು ಒಳಿತು. ನದಿ ತೀರ, ಸಮುದ್ರ ತೀರ ಹಾಗೂ ಜಲಪಾತಗಳ ಬಳಿ ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಳೆದ 24 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಕರಾವಳಿಯ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಕೆಲವೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಭೀತಿಯಿದ್ದು, ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಸ್ಥಳೀಯರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹವಾಮಾನ ವರದಿ | 40 ಕಿಮೀ ವೇಗದ ಬಿರುಗಾಳಿ; ಮುಂದಿನ 10 ದಿನಗಳವರೆಗೆ ವರುಣಾರ್ಭಟ!

ಒಂದೆಡೆ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಒಳನಾಡು ಭಾಗದಲ್ಲಿ ಮಳೆ ಕೊರತೆ ಉಂಟಾಗಿದೆ. ಇಲಾಖೆಯ ಅಂಕಿಅಂಶಗಳ ಪ್ರಕಾರ, ಜೂನ್ ತಿಂಗಳಲ್ಲಿ ವಾಡಿಕೆಯಷ್ಟು ಮಳೆ ಆಗಿಲ್ಲಈ ತಿಂಗಳಲ್ಲಿ ರಾಜ್ಯದಲ್ಲಿ ಸುಮಾರು 43.% ರಷ್ಟು ಮಳೆ ಕೊರತೆ ಉಂಟಾಗಿದೆ. ವಾಡಿಕೆಯಂತೆ ಜೂನ್‌ನಲ್ಲಿ 119 ಮೀಮೀ ಮಳೆಯಾಗಬೇಕಿತ್ತು. ಆದರೆ, ಮಳೆಯಾಗಿರುವುದು 110 ಮಿಮೀ ಮಾತ್ರ. ಕರಾವಳಿಯಲ್ಲಿ 46%, ಉತ್ತರ ಒಳನಾಡಿನಲ್ಲಿ 24%, ದಕ್ಷಿಣ ಒಳನಾಡಿನಲ್ಲಿ 50% ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದಲ್ಲಿ ದಕ್ಷಿಣ ಒಳನಾಡು ಪ್ರದೇಶವೇ ಅತಿ ಹೆಚ್ಚು ಮಳೆ ಕೊರತೆ ಅನುಭವಿಸುತ್ತಿರುವ ಭಾಗ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...