ಹವಾಮಾನ ವರದಿ | ಈ ವಾರ ರಾಜ್ಯಾದ್ಯಂತ ಗರಿಷ್ಠ ಮಳೆ; 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೈ-ಅಲರ್ಟ್‌

Date:

ಕರ್ನಾಟಕವೂ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಈ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೇರಳದಲ್ಲಿ ಗುಡ್ಡಕುಸಿತ, ಅಸ್ಸಾಂನಲ್ಲಿ ಪ್ರವಾಹವಾಗುತ್ತಿದೆ. ದೆಹಲಿಯಲ್ಲಿ ಮಳೆ ಅಬ್ಬರ ಎಷ್ಟಿದೆ ಎಂದರೆ, ಆಗಸ್ಟ್‌ನ ಇಡೀ ತಿಂಗಳಲ್ಲಿ ಸುರಿಯಬೇಕಿದ್ದ ಮಳೆ ಸರಾಸರಿ ಪ್ರಮಾಣವನ್ನೇ ಈಗಾಗಲೇ ಮೀರಿದೆ ಎಂದು ಇಲಾಖೆ ತಿಳಿಸಿದೆ. ಅಂತೆಯೇ, ಹಿಮಾಚಲ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮೇಘಾಲಯ ಹಾಗೂ ಉತ್ತರಾಖಂಡದಲ್ಲಿಯೂ ಮಳೆ ಆರ್ಭಟ ಮುಂದುವರೆದಿದೆ.

- Advertisement -

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ರಾಮನಗರ, ವಿಜಯನಗರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಅದೇ ರೀತಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ಬೆಂಗಳೂರು ನಗರ ಸೇರಿದಂತೆ ಉಳಿದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾದರೆ, ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನೊಂದೆಡೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಗಸ್ಟ್ ತಿಂಗಳ ಆರಂಭದ ಎಂಟು ದಿನಗಳಲ್ಲೇ ಇಡೀ ತಿಂಗಳ ಸರಾಸರಿ ಮಳೆ ಪ್ರಮಾಣವನ್ನು ಮೀರಿ ದಾಖಲೆಯ ಮಳೆಯಾಗಿದೆ. ದೆಹಲಿಯ ಪ್ರಮುಖ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯದಲ್ಲಿ ಇದುವರೆಗೆ 230.1 ಮಿ.ಮೀ ಮಳೆ ದಾಖಲಾಗಿದೆ.

ಸಾಮಾನ್ಯವಾಗಿ 1991-2020ರ ಅವಧಿಯ ಹವಾಮಾನ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲಿ ಆಗಸ್ಟ್ ತಿಂಗಳ ಸರಾಸರಿ ಮಳೆಯ ಪ್ರಮಾಣ 226.8 ಮಿ.ಮೀ ಆಗಿರುತ್ತದೆ. ಆದರೆ, ಈ ಬಾರಿ ಆಗಸ್ಟ್ ಆರಂಭದಲ್ಲೇ ಭಾರಿ ಮಳೆಯಾಗಿದ್ದು, ಶನಿವಾರ ಒಂದೇ ದಿನ 98.7 ಮಿ.ಮೀ ಮಳೆ ದಾಖಲಾಗಿದೆ. ಇದು ಕಳೆದ ಎರಡು ವರ್ಷಗಳಲ್ಲಿ ಆಗಸ್ಟ್ ತಿಂಗಳಿನಲ್ಲಿ ಒಂದೇ ದಿನದಲ್ಲಿ ಸುರಿದ ಗರಿಷ್ಠ ಮಳೆಯಾಗಿದೆ. ದೆಹಲಿಯಲ್ಲಿ ಸತತ ನಾಲ್ಕನೇ ದಿನವೂ ಮಳೆ ಮುಂದುವರಿದಿದೆ.

ಈ ಲೇಖನ ಓದಿದ್ದೀರಾ?: FCRA ತಿದ್ದುಪಡಿ | ವಿದೇಶಿ ದೇಣಿಗೆ ನಿಯಂತ್ರಣವೋ, ಧಾರ್ಮಿಕ ಸಂಸ್ಥೆಗಳ ಮೇಲಿನ ಸರ್ಕಾರಿ ಹಿಡಿತವೋ?

ಇನ್ನು ಮೇಘಾಲಯದ ದಕ್ಷಿಣ ಗಾರೋ ಹಿಲ್ಸ್ ಮತ್ತು ದಕ್ಷಿಣ ಪಶ್ಚಿಮ ಖಾಸಿ ಹಿಲ್ಸ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಛತ್ತೀಸ್‌ಗಢದ ಬೆಮೇತರ, ಬಿಲಾಸ್‌ಪುರ, ಕಬೀರ್‌ಧಾಮ್, ಮಹಾಸಮುಂದ್ ಮತ್ತು ಮುಂಗೆಲಿ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಮಧ್ಯಪ್ರದೇಶದ ಅನುಪ್ಪೂರ್, ಬಾಲಾಘಾಟ್, ಛತರ್‌ಪುರ, ದಮೋಹ್, ದಿಂಡೋರಿ, ಗುಣ, ಜಬಲ್‌ಪುರ, ಮಂಡ್ಲಾ, ರೈಸೇನ್, ಸಾಗರ್, ಸಿವೋನಿ, ಶಹದೋಲ್, ಉಮರಿಯಾ ಮತ್ತು ವಿದಿಶಾ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಅಂತೆಯೇ, ಉತ್ತರಾಖಂಡದ ಬಾಗೇಶ್ವರ್, ಚಮೋಲಿ, ಚಂಪಾವತ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಮಳೆ ಪೀಡಿತ ಪ್ರದೇಶಗಳ ಸಾರ್ವಜನಿಕರು ಸದಾ ಜಾಗರೂಕರಾಗಿರಬೇಕು, ಮರಗಳು ಅಥವಾ ದುರ್ಬಲ ಕಟ್ಟಡಗಳ ಕೆಳಗೆ ಆಶ್ರಯ ಪಡೆಯಬಾರದು, ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಹಾಗೂ ಸ್ಥಳೀಯ ಆಡಳಿತ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಇಲಾಖೆ ಸಲಹೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗ್ರಾಮೀಣದಲ್ಲಿ ಕುಡಿಯುವ ನೀರಿನ ಸಮಸ್ಯೆಯೇ? ಹಾಗಾದ್ರೆ ಈ ನಂಬರ್‌ಗೆ ಕರೆ ಮಾಡಿ

ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳು...

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ ಹಾಕಿದ ಮಾಧ್ಯಮಗಳು

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...