ಹವಾಮಾನ ವರದಿ: ಮುಂದಿನ 7 ದಿನ ರಾಜ್ಯಕ್ಕಿಲ್ಲ ಮಳೆ; ಚಳಿ-ಬಿಸಿಲಿನದ್ದೇ ಅಬ್ಬರ!

Date:

ಕಳೆದ ತಿಂಗಳು ಮಳೆ ಅಬ್ಬರ ಕಂಡಿದ್ದ ಕರ್ನಾಟಕದ ವಾತಾವರಣದಲ್ಲಿ ಈಗ ಭಾರೀ ಬದಲಾವಣೆಗಳಾಗಿವೆ. ಮುಂದಿನ ಏಳು ದಿನಗಳ ಕಾಲ ರಾಜ್ಯದ ಯಾವುದೇ ಭಾಗದಲ್ಲೂ ಮಳೆಯಾಗುವಾ ಸಾಧ್ಯತೆಯಿಲ್ಲ. ಚಳಿ ಮತ್ತು ಬಿಸಿಲಿನೊಂದಿಗೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಿಂಗಾರು ಬೆಳೆಗಾಗಿ ಮಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಶೆ ಉಂಟಾಗಿದೆ.

- Advertisement -

ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಬೆಳಗಾವಿ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲೂ ಮುಂಬರುವ ದಿನಗಳಲ್ಲಿ ಸಂಪೂರ್ಣವಾಗಿ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ರಾಜ್ಯಾದ್ಯಂತ ಮುಂಜಾನೆಯ ವೇಳೆ ತುಸು ಮಂಜು ಮತ್ತು ತಂಪಾದ ಗಾಳಿ ಬೀಸಲಿದ್ದು, ಮಧ್ಯಾಹ್ನದ ವೇಳೆ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಸಂಜೆ ಮತ್ತು ರಾತ್ರಿಯ ವೇಳೆಗೆ ಮತ್ತೆ ಹಿತವಾದ ತಂಪಾದ ವಾತಾವರಣ ಮರುಕಳಿಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹಗಲು ಹೊತ್ತಿನಲ್ಲಿ ಬಿಸಿಲು ಹೆಚ್ಚಿರಲಿರುವುದರಿಂದ ಸಾರ್ವಜನಿಕರು, ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ನೇರ ಬಿಸಿಲಿಗೆ ಮೈಯೊಡ್ಡದೆ ಎಚ್ಚರಿಕೆ ವಹಿಸುವುದು, ಸಾಕಷ್ಟು ನೀರು ಕುಡಿಯುವುದು ಅವಶ್ಯವೆಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ಹಗಲಿನ ಒಣ ಹವೆ ಮತ್ತು ಮುಂಜಾನೆ-ರಾತ್ರಿಯ ತಂಪಿನ ವಾತಾವರಣ ಇರಲಿರುವ ಈ ವ್ಯತ್ಯಾಸದಿಂದಾಗಿ ಆರೋಗ್ಯದ ಮೇಲೂ ಪರಿಣಾಮ ಬೀರುವಸಾಧ್ಯತೆಯಿದೆ. ಹಗಲಿನಲ್ಲಿ ಬಿಸಿಲು ಮತ್ತು ರಾತ್ರಿ ಚಳಿ ಇರುವುದರಿಂದ ಶೀತ, ಕೆಮ್ಮಿನ ಬಾಧೆ ಹೆಚ್ಚಾಗುವ ಸಾಧ್ಯತೆಯಿದ್ದು, ಮಕ್ಕಳು ಮತ್ತು ಹಿರಿಯರು ಸಂಜೆಯ ವೇಳೆ ಸೂಕ್ತ ಉಡುಪುಗಳನ್ನು ಧರಿಸುವುದು ಆರೋಗ್ಯದ ದೃಷ್ಟಿಯಿಂದ ಸುರಕ್ಷಿತವೆಂದು ಹೇಳಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...