ಹವಾಮಾನ ಎಚ್ಚರಿಕೆ: ರಾಜ್ಯಾದ್ಯಂತ 4 ದಿನ ಬಿರುಗಾಳಿ ಸಹಿತ ಭಾರೀ ಮಳೆ

Date:

ಬಂಗಾಳಕೊಲ್ಲೆಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆಯಿಂದಾಗಿ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 19ರವರೆಗೆ ರಾಜ್ಯಾದ್ಯಂತ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಅರ್ಭಟ ಹೆಚ್ಚಿರಲಿದೆ ಎಂದು ಹೇಳಿದೆ.

- Advertisement -

ಹಗಲಿನ ಅವಧಿಯಲ್ಲಿ ತಾಪಮಾನ ಏರಿಕೆಯಾಗಿ ಬಿಸಿಲಿನ ಬೇಗೆ ಮುಂದುವರಿದರೂ, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಾಧಾರಣದಿಂದ ಭಾರೀ ಮಳೆಯಾಲಿದೆ. ಸಿಡಿಲು ಮತ್ತು ಬಿರುಗಾಳಿಯ ತೀವ್ರತೆ ಹೆಚ್ಚಿರಲಿರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಲ್ಲಿ ಇರಬೇಕು ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸುಮಾರು 64.5 ಮಿ.ಮೀ.ನಿಂದ 115.5 ಮಿ.ಮೀ.ನಷ್ಟು ಭಾರೀ ಮಳೆ ದಾಖಲಾಗುವ ನಿರೀಕ್ಷೆ ಇದೆ. ಎಲ್ಲ ಜಿಲ್ಲೆಗಳಿಗೂ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಉತ್ತರ ಒಳನಾಡು ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹವಾಮಾನದ ಏರುಪೇರು ಮತ್ತಷ್ಟು ತೀವ್ರವಾಗಿರಲಿದೆ. ಹಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹೇಳಿರುವ ಇಲಾಖೆ, ‘ಆರೆಂಜ್ ಅಲರ್ಟ್’ ಘೋಷಿಸಿದೆ. ಇನ್ನು, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ಈ ಲೇಖನ ಓದಿದ್ದೀರಾ?: ವಿಭಜನೆ, ಸಾಲು-ಸಾಲು ಸೋಲು, ಪಕ್ಷಾಂತರದ ಪೆಟ್ಟು; ಅಸ್ತಿತ್ವಕ್ಕಾಗಿ ಹೋರಾಟುತ್ತಿದೆ ಎಐಎಡಿಎಂಕೆ

ಈ ಮುಂಗಾರು ಪೂರ್ವ ಮಳೆಯ ನಡುವೆಯೇ ದೇಶದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಳೆಯು ಈ ವರ್ಷ ನಿಗದಿತ ಸಮಯಕ್ಕಿಂತ ಒಂದು ವಾರ ಮುಂಚಿತವಾಗಿಯೇ (ಮೇ 26) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪಿರುವ ಮುಂಗಾರು ಮಾರುತಗಳು ಅಲ್ಲಿಂದ ಅತ್ಯಂತ ವೇಗವಾಗಿ ಕೇರಳದತ್ತ ಚಲಿಸುತ್ತಿವೆ. ಕೇರಳಕ್ಕೆ ಮುಂಗಾರು ಅಪ್ಪಳಿಸಿದ ಕೇವಲ ಒಂದು ವಾರದ ಅವಧಿಯಲ್ಲಿ, ಕರ್ನಾಟಕಕ್ಕೂ ಮುಂಗಾರು ಅಧಿಕೃತವಾಗಿ ಪ್ರವೇಶಿಸಲಿದೆ ಎಂದು ವಿವರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...