ಸಿದ್ದರಾಮಯ್ಯ ಕುರ್ಚಿ ಅಲ್ಲಾಡಿದಾಗೆಲ್ಲ ಸಾಧನಾ ಸಮಾವೇಶ: ಬಿ ವೈ ವಿಜಯೇಂದ್ರ ಟೀಕೆ

Date:

ಸಿದ್ದರಾಮಯ್ಯನವರ ಕುರ್ಚಿ ಯಾವಾಗ ಬಲ ಕಳಕೊಳ್ಳುತ್ತದೋ, ಯಾವಾಗ ಕುರ್ಚಿ ಅಲ್ಲಾಡುತ್ತಿದೆ ಅನಿಸಿದಾಗ ಸಮಾವೇಶಗಳನ್ನು ಅವರು ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

- Advertisement -

ಕಲಬುರಗಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಸಿದ್ದರಾಮಯ್ಯನವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಅಹಿಂದ ಸಮುದಾಯಗಳನ್ನು ಮುಂದೆ ಇಡುತ್ತಾರೆ. ಆ ಸಮುದಾಯಗಳನ್ನು ಬಳಸಿಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂಥ ಸಮಾವೇಶ ಮಾಡಿ, ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಬೆದರಿಕೆ ಒಡ್ಡುವ ಕುತಂತ್ರಗಳನ್ನು ಮಾಡುತ್ತಾರೆ. ಮುಖ್ಯಮಂತ್ರಿಯಾಗಿ ಅವರ ಎರಡೂವರೆ ವರ್ಷದ ಆಡಳಿತದಲ್ಲಿ ಸಾಧನೆ ಶೂನ್ಯ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಸಾಧನೆ ಮಾಡಿದ್ದರೆ ರಾಜ್ಯದ ಉಸ್ತುವಾರಿ ಸುರ್ಜೇವಾಲಾ ಅವರು ಪದೇ ಪದೆ ಬೆಂಗಳೂರಿಗೆ ಬಂದು ಶಾಸಕರನ್ನು ಮಾತನಾಡಿಸುವ ಮತ್ತು ಅವರ ಅಸಮಾಧಾನ ಹೋಗಲಾಡಿಸುವ ಪ್ರಮೇಯ ಉದ್ಭವಿಸುತ್ತಿರಲಿಲ್ಲ. ಶಾಸಕರ ಅಸಮಾಧಾನ ಅರ್ಥ ಮಾಡಿಕೊಳ್ಳಲು ಮತ್ತು ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಯಾರನ್ನು ಮಾಡಬೇಕೆಂದು ಶಾಸಕರ ಅಂತರಾಳದಲ್ಲಿ ಏನಿದೆ ಎಂದು ತಿಳಿಯಲು ಸುರ್ಜೇವಾಲಾ ಅವರು ಪದೇ ಪದೆ ಬರುತ್ತಿದ್ದಾರೆ” ಎಂದರು.

“ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭರ್ಜರಿಯಾಗಿ ಪೈಪೋಟಿ ನಡೆಯುತ್ತಿದೆ. ಕುದುರೆ ವ್ಯಾಪಾರವೂ ಆರಂಭವಾಗಿದೆ. ಶಾಸಕರ ಬಲಕ್ಕಾಗಿ ರೇಟ್ ಫಿಕ್ಸಿಂಗ್ ನಡೆಯುತ್ತಿದೆ. ಸಿದ್ದರಾಮಯ್ಯನವರು ನಾನೇ 5 ವರ್ಷ ಸಿಎಂ ಎಂದು ದೆಹಲಿಯಲ್ಲಿ ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡಿಗೆ ನೇರವಾಗಿ ಸವಾಲನ್ನು ಹಾಕಿದ್ದಾರೆ” ಎಂದು ಹೇಳಿದರು.

“ದೆಹಲಿಯಲ್ಲಿ ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರಿಗೆ ಭೇಟಿಗೆ ಅವಕಾಶವನ್ನೂ ನೀಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಇದು ಉದಾಹರಣೆ ಎಂದು ವಿವರಿಸಿದರು. ಕಾಂಗ್ರೆಸ್ ಶಾಸಕರು ಒಳಗೊಳಗೇ ಕತ್ತಿ ಮಸೆಯುತ್ತಿದ್ದಾರೆ. ಸಿದ್ದರಾಮಯ್ಯರ ಪರ ಕೆಲವರು, ಡಿಕೆಶಿ ಪರ ಇನ್ನೂ ಹಲವರು ಬ್ಯಾಟಿಂಗ್ ಮಾಡುತ್ತಿದ್ದಾರೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೀದಿ ವ್ಯಾಪಾರಿಗಳಿಗೆ ನೋಟಿಸ್

ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಗೆ ರಾಜ್ಯ ಸರಕಾರದ ನೋಟಿಸ್ ನೀಡಿದೆ. ಪಕ್ಷದ ಮುಖಂಡರು ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಒಂದು ಕಡೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದೇ, ಇದನ್ನೇ ನೆಪ ಒಡ್ಡಿ ಬೀದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿ ಹೆದರಿಸುವ ಕೆಲಸ ಮಾಡುತ್ತಿದೆ” ಎಂದು ಆಕ್ಷೇಪಿಸಿದರು.

ರಾಜಕೀಯವಾಗಿ ಮುಗಿಸುವ ಷಡ್ಯಂತ್ರ

ರೌಡಿ ಶೀಟರ್ ಕೊಲೆ ಕೇಸಿನಲ್ಲಿ ಶಾಸಕ ಬೈರತಿ ಬಸವರಾಜು ಅವರ ಮೇಲೆ ಹೆಸರನ್ನು ಆರೋಪಿಯಾಗಿ ಸೇರಿಸಿದ ಕುರಿತ ಪ್ರಶ್ನೆಗೆ ಉತ್ತರ ನೀಡಿ, “ಕಳೆದ 2 ವರ್ಷದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು ಬಿಜೆಪಿ ಶಾಸಕರನ್ನು ಬೆದರಿಸುವ ಕುತಂತ್ರಗಳನ್ನು ನಿರಂತರವಾಗಿ ನಡೆಸುತ್ತ ಬಂದಿದೆ. ದಕ್ಷಿಣ ಕನ್ನಡದಲ್ಲಿ ನಮ್ಮ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಎಫ್‍ಐಆರ್ ನೋಂದಾವಣೆ ಮಾಡಿದ್ದರು. ಅವರನ್ನು ಬಂಧಿಸುವ ಪ್ರಯತ್ನ ಮಾಡಿದ್ದು, ಅದು ಸಫಲವಾಗಲಿಲ್ಲ. ನಂತರ ಭರತ್ ಶೆಟ್ಟಿಯವರ ಮೇಲೆ ಎಫ್‍ಐಆರ್ ದಾಖಲಿಸಿದ್ದರು. ವಿವಿಧ ಶಾಸಕರ ಮೇಲೆ ಎಫ್‍ಐಆರ್ ದಾಖಲಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಹಿಂದುಳಿದ ವರ್ಗಗಳ ನಾಯಕ- ಮಾಜಿ ಸಚಿವ ಬೈರತಿ ಬಸವರಾಜು ಅವರನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ಇದರ ಹಿಂದಿದೆ ಎಂದು ವಿಜಯೇಂದ್ರ ತಿಳಿಸಿದರು. ಕೊಲೆಯಾದವನ ತಾಯಿ ಕೂಡ ತಾವು ಬೈರತಿ ಬಸವರಾಜು ಅವರ ಹೆಸರು ಹೇಳಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...