ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೋ ಅಲ್ಲಿಯೇ ಭೂಸ್ವಾಧೀನ ಪ್ರಕ್ರಿಯೆ: ಡಿ.ಕೆ.ಶಿವಕುಮಾರ್

Date:

ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲು ಹಾಕಿದರು.

- Advertisement -

ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಎ ಖಾತಾ ಹಾಗೂ ಬಿ ಖಾತಾ ಪರಿವರ್ತನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಜೆಡಿಎಸ್ ಆರೋಪದ ಬಗ್ಗೆ ಕೇಳಿದಾಗ, “ಬಹಿರಂಗ ಚರ್ಚೆಗೆ ಬನ್ನಿ ಎಂದು ನಾನು ಕರೆಯುತ್ತಲೇ ಇದ್ದೇನೆ. ಎ ಖಾತಾ ಬಿ ಖಾತಾ ವಿಚಾರದಲ್ಲಿ ಯಾವ ಭ್ರಷ್ಟಾಚಾರ ನಡೆಯುತ್ತಿದೆ? ಬೆಂಗಳೂರು ನಾಗರಿಕರ ಆಸ್ತಿ ದಾಖಲೆ ಸರಿಪಡಿಸಿಕೊಳ್ಳಲು, ಅವರಿಗೆ ಮುಂದೆ ಬ್ಯಾಂಕ್ ಸಾಲ ಹಾಗೂ ಇತರೆ ಸೌಲಭ್ಯ ಸಿಗಬೇಕು, ಜನರಿಗೆ ಉತ್ತಮ ಸೌಕರ್ಯ ಒದಗಿಸಬೇಕು, ಜನರು ತೆರಿಗೆ ಪಾವತಿಸುವಂತಾಗಬೇಕು ಎಂಬ ಉದ್ದೇಶದಿಂದ ನಾವು ಈ ಯೋಜನೆ ಮಾಡುತ್ತಿದ್ದೇವೆ. ಜನರ ಆಸ್ತಿ ದಾಖಲೆ ಸರಿಪಡಿಸುವುದು ನಮ್ಮ ಆರನೇ ಗ್ಯಾರಂಟಿ” ಎಂದರು.

“ನಮ್ಮ ಈ ಕಾರ್ಯವನ್ನು ದೇಶದ ಯಾವುದೇ ನಗರದಲ್ಲಿ ಮಾಡಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ. ನಮ್ಮ ಈ ಯೋಜನೆಗೆ ಸಾವಿರಾರು ಜನ ಅರ್ಜಿ ಹಾಕುತ್ತಿದ್ದಾರೆ. ಅವರ ಕಾಲದಲ್ಲಿ ಯಾಕೆ ಆಸ್ತಿಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡಲಿಲ್ಲ? ಇ ಖಾತಾ ಮಾಡಿಕೊಡಲು ಅವರಿಂದ ಆಗಲಿಲ್ಲ. ಅವರಿಗೆ ಇಂತಹ ಯಾವುದೇ ಆಲೋಚನೆಗಳು ಇರಲಿಲ್ಲ. ಕುಮಾರಸ್ವಾಮಿ ಅವರು ಕೈಗಾರಿಕೆ ತರುತ್ತೇನೆ ಎನ್ನುತ್ತಾರಲ್ಲ, ತರಲಿ. ರಾಮನಗರದಲ್ಲಿ ಕೈಗಾರಿಕೆ ಮಾಡುತ್ತಾರೋ, ಬಿಡದಿಯಲ್ಲಿ ಮಾಡುತ್ತಾರೋ, ಮಂಡ್ಯದಲ್ಲಿ ಮಾಡುತ್ತಾರೋ ಎಲ್ಲಿ ಮಾಡುತ್ತಾರೆ ಎಂದು ಅವರೇ ಪಟ್ಟಿ ನೀಡಲಿ. ಅಗತ್ಯ ಭೂಮಿ ಬಗ್ಗೆ ಅರ್ಜಿ ಹಾಕಲಿ. ಸುಮ್ಮನೆ ಖಾಲಿ ಮಾತಾಡಿದರೆ ಯಾರೂ ಒಪ್ಪುವುದಿಲ್ಲ” ಎಂದು ತಿಳಿಸಿದರು.

ಅಧಿಕಾರಕ್ಕೆ ಬರುವುದು, ಜಿಬಿಎ ರದ್ದುಗೊಳಿಸುವುದು ಬಿಜೆಪಿಯವರ ಹಣೆಯಲ್ಲಿ ಬರೆದಿಲ್ಲ

ಬಿಜೆಪಿ ಅಧಿಕಾರಿಕ್ಕೆ ಬಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರದ್ದು ಮಾಡುವುದಾಗಿ ಹೇಳುತ್ತಿದೆ ಎಂದಾಗ, “ಅವರು ಅಧಿಕಾರಕ್ಕೆ ಬಂದಾಗ, ಏನು ಬೇಕಾದರೂ ಮಾಡಲಿ. ಅಧಿಕಾರಕ್ಕೆ ಬರುವುದು, ಜಿಬಿಎ ರದ್ದುಗೊಳಿಸುವುದು ಅವರ ಹಣೆಯಲ್ಲಿ ಬರೆದಿಲ್ಲ. ಇದು ಹೀಗೆ ಮುಂದುವರಿಯಲಿದೆ. ಅವರಿಗೆ ಜಿಬಿಎ ಬೇಡವಾದರೆ ಅವರು ಮುಂಬರುವ ಪಾಲಿಕೆಗಳ ಚುನಾವಣೆಯನ್ನು ಬಹಿಷ್ಕರಿಸಲಿ. ಚುನಾವಣೆಯಿಂದ ಹಿಂದೆ ಸರಿಯಲಿ ನೋಡೋಣ. ಅವರ ಕಾರ್ಯಕರ್ತರೆಲ್ಲರೂ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗುತ್ತಿದ್ದಾರೆ” ಎಂದರು.

ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಅವರ ಕಾರ್ಯ ಯೋಜನೆ ಏನು?

ಸುರಂಗ ರಸ್ತೆಗೆ ಸಂಸದ ತೇಜಸ್ವಿ ಸೂರ್ಯ ಅವರ ವಿರೋಧದ ಬಗ್ಗೆ ಕೇಳಿದಾಗ, “ಯಾರೂ ಏನಾದರೂ ವಿರೋಧ ಮಾಡಿಕೊಳ್ಳಲಿ. ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಅವರು ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಸರ್ಕಾರ ಉತ್ತಮ ಕೆಲಸ ಮಾಡಿ ಹೆಸರು ಮಾಡಬಾರದು ಎಂಬುದು ಅವರ ಉದ್ದೇಶ. ನಾನು ಈ ಯೋಜನೆಗೆ ಯಾವುದೇ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿಲ್ಲ. ಒಂದು ಸಣ್ಣ ಭಾಗದಲ್ಲಿ ಈ ರಸ್ತೆ ಹಾದುಹೋಗುತ್ತದೆ. ಇದನ್ನು ಪರಿಶೀಲನೆ ಮಾಡುತ್ತೇನೆ. ಸಮಸ್ಯೆ ಇದ್ದರೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು. ಲಾಲ್ ಬಾಗ್ ಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ. ಲಾಲ್ ಬಾಗ್ ನ ಸ್ವಲ್ಪ ಜಾಗವನ್ನು ಈ ಯೋಜನೆ ಕಾಮಗಾರಿ ನಡೆಯುವವರೆಗೂ ಬಳಸಿಕೊಳ್ಳುತ್ತೇವೆ. ನಂತರ ಅದನ್ನು ತೆರವುಗೊಳಿಸಿ ಮತ್ತೆ ಲಾಲ್ ಬಾಗ್ ಉದ್ಯಾನಕ್ಕೆ ಹಿಂತಿರುಗಿಸುತ್ತೇವೆ” ಎಂದು ತಿಳಿಸಿದರು.

ಮುಂಬೈ, ದೆಹಲಿಯಲ್ಲಿ ಸುರಂಗ ರಸ್ತೆ ಮಾಡುತ್ತಿರುವುದೇಕೆ?

“ಸುರಂಗ ರಸ್ತೆಯನ್ನು ಭೂಮಿಯ ಒಳಗೆ ಕೊರೆಯಲಾಗುವುದು. ಹೊರಗೆ ಮಾಡಲು ಆಗುವುದಿಲ್ಲ. ಅವರ ಮಾತು ಕೇಳಿಕೊಂಡು ಯೋಜನೆ ನಿಲ್ಲಿಸಲು ಆಗುವುದಿಲ್ಲ. ಹಾಗಿದ್ದರೆ ಮುಂಬೈ ನಲ್ಲಿ ಯಾಕೆ ಭೂಮಿ ಕೊರೆದು ಸುರಂಗ ರಸ್ತೆ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಯಾಕೆ ಮಾಡುತ್ತಿದ್ದಾರೆ. ಯಾವುದೇ ಸಂದರ್ಭದಲ್ಲಿ ನಾನು ಆತನ ಮಾತಿಗೆ ಬಾಗುವುದಿಲ್ಲ. ಹೋರಾಟ ಮಾಡುವವರು ಮಾಡುತ್ತಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಾವು ಜನರಿಗಾಗಿ ಕೆಲಸ ಮಾಡುತ್ತಿದ್ದೇವೆ. ಅವರ ಕಾಲದಲ್ಲಿ ಬೆಂಗಳೂರಿಗಾಗಿ ಯಾವುದೇ ಒಳ್ಳೆಯ ಕೆಲಸ ಮಾಡಲು ಆಗಲಿಲ್ಲ. ತೇಜಸ್ವಿ ಸೂರ್ಯ ಎಂದರೆ ಖಾಲಿ ಟ್ರಂಕ್” ಎಂದು ಕಿಡಿಕಾರಿದರು.

ಶ್ರೀಮಂತರಿಗೆ ಅನುಕೂಲವಾಗಲು ಈ ಸುರಂಗ ರಸ್ತೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಹೌದು, ಟೋಲ್ ಕಟ್ಟಿ ಹೋಗುವವರಿಗೆ ಈ ರಸ್ತೆ ಮಾಡಲಾಗುತ್ತಿದೆ. ಈ ಯೋಜನೆ ಬೇಡವಾದರೆ ಅವರು ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಒಂದು ಕಾರ್ಯ ಯೋಜನೆಯನ್ನು ನೀಡಲು ಹೇಳಿ. ಬೆಂಗಳೂರಿನ ಸಂಸದರಾಗಿ ಪ್ರಧಾನಮಂತ್ರಿ ಬಳಿ ಒಂದು ದಿನವೂ ಈ ನಗರದ ಅಭಿವೃದ್ಧಿಗೆ 10 ರೂಪಾಯಿ ವಿಶೇಷ ಅನುದಾನ ಕೊಡಿಸಿಲ್ಲ. ಅವರ ಸರ್ಕಾರವಿದ್ದಾಗ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳೇನು? ಅವರು ಸಮಸ್ಯೆ ಬಗೆಹರಿಸಲಿಲ್ಲ ಯಾಕೆ? ಕಾಲದಲ್ಲಿ ಕಸದ ಟೆಂಡರ್ ಕರೆಯಲು ಸಾಧ್ಯವಾಗಲಿಲ್ಲ ಯಾಕೆ? ರಸ್ತೆ ಅಗಲೀಕರಣ, ಫ್ಲೈಓವರ್ ಮಾಡಲಿಲ್ಲ ಯಾಕೆ? ಅವರು ಬೆಂಗಳೂರಿಗಾಗಿ ಏನೂ ಮಾಡಲಿಲ್ಲ. ಬೆಂಗಳೂರಿನ ಬೀದಿಗಳಲ್ಲಿ ಕೇಬಲ್ ವೈಯರ್ ಗಳು ನೇತಾಡುತ್ತಿರುವುದನ್ನು ನೋಡುತ್ತಿದ್ದೀರಲ್ಲವೇ? ಅವುಗಳನ್ನು ಯಾಕೆ ತೆರವುಗೊಳಿಸಲಿಲ್ಲ. ಮಾಫಿಯಾ ಜೊತೆ ಕೈಜೋಡಿಸಿ, ಬೆಂಗಳೂರನ್ನು ಹದಗೆಡಿಸಿದ್ದಾರೆ. ಈ ಕಾರಣಕ್ಕೆ ಜನ ನಮ್ಮ ಪಕ್ಷಕ್ಕೆ ಬೆಂಬಲಿಸಿ 140 ಶಾಸಕರನ್ನು ಆಯ್ಕೆ ಮಾಡಿ ಅಧಿಕಾರದಲ್ಲಿ ಕೂರಿಸಿದ್ದಾರೆ. ನಾವು ನಮ್ಮ ಕೆಲಸವನ್ನು ಮಾಡೇ ಮಾಡುತ್ತೇವೆ. ಅದಕ್ಕೆ ಬದ್ಧರಾಗಿದ್ದೇವೆ. ಬೆಂಗಳೂರು ಜಾಗತಿಕ ನಗರ. ಇದನ್ನು ಕಾಪಾಡಲು ಏನು ಮಾಡಬೇಕೋ ಅದನ್ನು ಮಾಡಿಯೇ ಮಾಡುತ್ತೇವೆ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...