ರಾಮಮಂದಿರದ ಹೆಸರಲ್ಲೇ ಅಧಿಕಾರಕ್ಕೇರಿದ ಬಿಜೆಪಿ-ಮೋದಿ ಈಗ ಮೌನವೇಕೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Date:

ಅಯೋಧ್ಯೆಯ ರಾಮಮಂದಿರದಲ್ಲಿ ಭಕ್ತರು ಸಮರ್ಪಿಸಿದ ದೇಣಿಗೆಯಲ್ಲಿ ಕೋಟ್ಯಂತರ ರೂಪಾಯಿ ದುರ್ಬಳಕೆಯಾಗಿರುವ ಆರೋಪವು ಇದೀಗ ರಾಷ್ಟ್ರಮಟ್ಟದಲ್ಲಿ ಭಾರೀ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಸಂಘಪರಿವಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

“ಬಿಜೆಪಿ ಹಾಗೂ ನರೇಂದ್ರ ಮೋದಿಯವರು ತಮ್ಮ ಇಡೀ ರಾಜಕೀಯ ಅಸ್ತಿತ್ವವನ್ನು ಕಟ್ಟಿಕೊಂಡಿದ್ದೇ ಶ್ರೀರಾಮ ಮತ್ತು ರಾಮಮಂದಿರದ ಹೆಸರಿನಲ್ಲಿ. ಆದರೆ, ಇಂದು ಅದೇ ಮಂದಿರದಲ್ಲಿ ಭಕ್ತರ ಹಣ ಕೊಳ್ಳೆಯಾಗುತ್ತಿದ್ದರೂ ಇವರೆಲ್ಲರೂ ಕಣ್ಮುಚ್ಚಿ ಕುಿತಿರುವುದೇಕೆ?” ಎಂದು ಖರ್ಗೆ ಕಟುವಾಗಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ರಾಮಮಂದಿರದ ದೇಣಿಗೆ ಎಣಿಕೆ ವಿಭಾಗದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವೇ ವಿಶೇಷ ತನಿಖಾ ದಳ (SIT) ರಚಿಸಿದೆ. ಅಲ್ಲದೆ, ಎಣಿಕೆ ಕಾರ್ಯದಲ್ಲಿ ತೊಡಗಿದ್ದ ೮ ಮಂದಿ ಸಿಬ್ಬಂದಿ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ಈ ಬೆಳವಣಿಗೆಯನ್ನು ಉಲ್ಲೇಖಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, “ಎಲ್ಲದರ ಬಗ್ಗೆಯೂ ಭಾಷಣ ಮಾಡುವ ಪ್ರಧಾನಿ ಮೋದಿಯವರು, ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಈ ಹಗರಣದ ಬಗ್ಗೆ ದೇಶದ ಜನತೆಗೆ ಏಕೆ ಉತ್ತರಿಸುತ್ತಿಲ್ಲ? ದೇವರ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು, ಈಗ ಮೌನ ವಹಿಸಿರುವುದು ಅವರ ದ್ವಂದ್ವ ನೀತಿಗೆ ಕನ್ನಡಿ ಹಿಡಿದಿದೆ” ಎಂದು ಹರಿಹಾಯ್ದರು.

ಸಂಘಪರಿವಾರ ಮತ್ತು ಬಿಜೆಪಿಯ ರಾಷ್ಟ್ರೀಯತೆಯ ವ್ಯಾಖ್ಯಾನವನ್ನೇ ಅಣಕಿಸಿದ ಗೃಹ ಸಚಿವರು, “ಇವರು ಸದಾ ಹೇಳುವ ‘ನೇಷನ್ ಫಸ್ಟ್’ (ರಾಷ್ಟ್ರ ಮೊದಲು) ಎನ್ನುವುದು ಕೇವಲ ಬೂಟಾಟಿಕೆ. ವಾಸ್ತವದಲ್ಲಿ ಇವರ ನೀತಿ ‘ಡೊನೇಷನ್ ಫಸ್ಟ್’ (ದೇಣಿಗೆ ಮೊದಲು) ಆಗಿದೆ” ಎಂದು ಲೇವಡಿ ಮಾಡಿದರು. ಧರ್ಮ ಮತ್ತು ದೇವರ ಮೇಲಿನ ನಂಬಿಕೆಯಿಂದ ಜನ ನೀಡಿದ ಹಣಕ್ಕೆ ಸರಿಯಾದ ಲೆಕ್ಕಾಚಾರ ಒದಗಿಸದೇ ಇರುವುದು ಕೋಟ್ಯಂತರ ಭಕ್ತರಿಗೆ ಬಗೆದ ದ್ರೋಹ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆರ್‌ಎಸ್‌ಎಸ್ ಪಾರದರ್ಶಕತೆಗೂ ಆಗ್ರಹ:ಕೇವಲ ರಾಮಮಂದಿರ ಮಾತ್ರವಲ್ಲದೆ, ಆರ್‌ಎಸ್‌ಎಸ್ ಸಂಘಟನೆಯ ಕಾರ್ಯವೈಖರಿಯ ಬಗ್ಗೆಯೂ ಗೃಹ ಸಚಿವ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಂಘಟನೆಯ ನೋಂದಣಿ, ಅದಕ್ಕೆ ಹರಿದುಬರುತ್ತಿರುವ ಆರ್ಥಿಕ ಮೂಲಗಳು ಮತ್ತು ವೆಚ್ಚದ ಕುರಿತು ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. “ಯಾವುದೇ ಸಂಘಟನೆ ದೇಶದ ಕಾನೂನಿಗಿಂತ ಮೇಲಲ್ಲ; ಹಾಗಾಗಿ ತಮ್ಮ ಲೆಕ್ಕಪತ್ರಗಳು ಹಾಗೂ ದಾಖಲೆಗಳನ್ನು ಬಹಿರಂಗಪಡಿಸಬೇಕು” ಎಂದು ಅವರು ಸವಾಲು ಹಾಕಿದ್ದಾರೆ.

ಅಯೋಧ್ಯೆ ದೇಣಿಗೆ ದುರ್ಬಳಕೆ ವಿವಾದವು ಇದೀಗ ಕಾಂಗ್ರೆಸ್ ಪಾಲಿಗೆ ಬಿಜೆಪಿಯ ನೈತಿಕತೆಯನ್ನು ಪ್ರಶ್ನಿಸುವ ಪ್ರಬಲ ಅಸ್ತ್ರವಾಗಿ ಪರಿಣಮಿಸಿದೆ. ಹಿಂದುತ್ವ ಮತ್ತು ರಾಮಮಂದಿರದ ಹೆಸರಿನಲ್ಲಿ ಮತ ಕೇಳುವ ಕಮಲ ಪಾಳೆಯಕ್ಕೆ, ಪ್ರಿಯಾಂಕ್ ಖರ್ಗೆಯವರ ಈ ನೇರ ಸವಾಲುಗಳು ನುಂಗಲಾರದ ತುತ್ತಾಗಿ ಪರಿಣಮಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...